ಕರ್ನಾಟಕ ರಾಜ್ಯೋತ್ಸವ ವಿಶಿಷ್ಟ ಆಚರಣೆ – ಯಶಸ್ವಿಗೊಳಿಸಲು ಡಿಸಿ ಮನವಿ

ಶಿವಮೊಗ್ಗ: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದ್ದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಕಾರ್ಯಕ್ರಮದ ಸ್ವರೂಪವನ್ನು ಸಿದ್ದಪಡಿಸಲಾಗಿದೆ.


ನವೆಂಬರ್ 01 ರಂದು ಜಿಲ್ಲೆಯಾದ್ಯಂತ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಯೊಂದಿಗೆ ಕರ್ನಾಟಕ ಸಂಭ್ರಮ-50 ‘ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ’ ಎಂಬ ಘೋಷವಾಕ್ಯದ ರಂಗೋಲಿ ಬಿಡಿಸುವುದು.
ನವೆಂಬರ್ 01 ರ ಬೆಳಿಗ್ಗೆ 9 ಗಂಟೆಗೆ ಆಕಾಶವಾಣಿಯಲ್ಲಿ ನಾಡಗೀತೆ ಪ್ರಸಾರ ಮಾಡಲಾಗುವುದು. ಆ ಸಮಯದಲ್ಲಿ ಜಿಲ್ಲೆಯ ಸಮಸ್ತ ನಾಗರೀಕರು ಎದ್ದು ನಿಂತು ಗೌರವ ಸಲ್ಲಿಸುವುದು.


ನವೆಂಬರ್ 01 ರ ಸಂಜೆ 5 ಗಂಟೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಮತ್ತು ಹಳದಿ ಬಣ್ಣದ ಗಾಳಿ ಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿ ಪಟ ಉತ್ಸವ ಆಚರಿಸುವುದು.
ನವೆಂಬರ್ 01 ರಂದು ಸಂಜೆ 7 ಗಂಟೆಗೆ ಜಿಲ್ಲೆಯ ಎಲ್ಲಾ ಮನೆ-ಮನೆಗಳ ಮುಂದೆ, ಕಚೇರಿಗಳ ಮುಂದೆ ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ(ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಿಸುವುದು.


ಜಿಲ್ಲೆಯ ಸಮಸ್ತ ನಾಗರೀಕರು ಹಾಗೂ ಕನ್ನಡ ಪರ ಸಂಘಟನೆಗಳು, ವಿವಿಧ ಸಂಘ ಸಂಸ್ಥೆಗಳು ನಾಡು-ನುಡಿಯ ಅಭಿಮಾನದೊಂದಿಗೆ ಪ್ರತಿಯೊಬ್ಬರು ಈ ಎಲ್ಲ ಅಂಶಗಳನ್ನು ಅಳವಡಿಸಿಕೊಂಡು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

5 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

8 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

8 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

13 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

15 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago