ಶಿವಮೊಗ್ಗ: 2023ನೇ ಸಾಲಿನ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ.
ಸೊರಬ ವಿಧಾನಸಭೆ ಕ್ಷೇತ್ರದಿಂದ ಮಧು ಬಂಗಾರಪ್ಪ, ಭದ್ರಾವತಿಯಿಂದ ಬಿ.ಕೆ.ಸಂಗಮೇಶ್ವರ, ಸಾಗರದಿಂದ ಬೇಳೂರು ಗೋಪಾಲಕೃಷ್ಣ ಅವರ ಹೆಸರನ್ನು ಪ್ರಕಟಿಸಲಾಗಿದೆ.
ನಾಲ್ಕು ಕ್ಷೇತ್ರಗಳಿಗೆ ಘೋಷಣೆಯಾಗದ ಟಿಕೆಟ್:
ಮೊದಲ ಪಟ್ಟಿಯಲ್ಲೇ ತೀರ್ಥಹಳ್ಳಿ ಕ್ಷೇತ್ರದ ಅಭ್ಯರ್ಥಿ ಹೆಸರು ಪ್ರಕಟವಾಗುವ ನಿರೀಕ್ಷೆ ಇತ್ತು. ಆದರೀಗ ತೀವ್ರ ಕುತೂಹಲ ಮುಂದುವರಿದಿದೆ.
ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದರಿಂದ ಮೊದಲ ಪಟ್ಟಿಯಲ್ಲಿ ಇವೆರಡೂ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮವಾಗಿಲ್ಲ. ಮಾಜಿ ಸಿಎಂ ಯಡಿಯೂರಪ್ಪ ಅವರ ಕ್ಷೇತ್ರ ಶಿಕಾರಿಪುರದಲ್ಲಿ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವ ಲೆಕ್ಕಾಚಾರ ಇರುವುದರಿಂದ ಆ ಕ್ಷೇತ್ರದ ಅಭ್ಯರ್ಥಿ ಹೆಸರು ಮುಂದಿನ ಪಟ್ಟಿಗೆ ಹೋಗಿದೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…