Shivamogga | ಕಾನೂನನ್ನು ಮುರಿಯುವಂತಹ ಯಾವುದೇ ವ್ಯಕ್ತಿಗಳ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು‌ ; ಸಚಿವ ಮಧು ಬಂಗಾರಪ್ಪ

0 163

ಶಿವಮೊಗ್ಗ : ಜಿಲ್ಲೆಯು ಸಾಹಿತ್ಯ, ಸಂಸ್ಕೃತಿ, ಕಲೆ, ಪ್ರಕೃತಿ ಸೌಂದರ್ಯ ಮತ್ತು ಸಾಮರಸ್ಯಕ್ಕೆ ಹೆಸರಾಗಿದೆ. ಜಿಲ್ಲೆಯಲ್ಲಿ ಎಲ್ಲ ವರ್ಗದವರು ಶಾಂತಿಯಿಂದ ಸಹಬಾಳ್ವೆ ನಡೆಸುತ್ತಿದ್ದಾರೆ. ಅದರಂತೆ ಮೊನ್ನೆ ಹಿಂದೂ ಮಹಾಸಭಾದ ಗಣಪತಿ ವಿಸರ್ಜನಾ ಕಾರ್ಯಕ್ರಮ ಶಾಂತಿಯುತವಾಗಿ ನೆರವೇರಿದೆ. ಆದರೆ ಈದ್ ಮಿಲಾದ್ ಹಬ್ಬದ ದಿನದಂದು ಅಹಿತಕರ ಘಟನೆ ನಡೆದಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಯಾವುದೇ ವಿಚಾರವಾಗಿ ಯಾರೇ ವ್ಯಕ್ತಿಗಳು ಕಾನೂನು ಭಂಗ ಮಾಡುವುದಾಗಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟವನ್ನುಂಟು ಮಾಡುವುದಾಗಲಿ, ಕಾನೂನನ್ನು ಕೈಗೆತ್ತಿಕೊಳ್ಳುವುದಾಗಲಿ ಖಂಡನೀಯವಾಗಿದೆ. ಕಿಡಿಗೇಡಿಗಳ ಕೃತ್ಯಕ್ಕೆ ಸಾರ್ವಜನಿಕರು ಶಾಂತಿಯಿಂದಲೇ ಉತ್ತರಿಸಬೇಕು. ಕಿಡಿಗೇಡಿಗಳನ್ನು ಹಿಡಿದು ಕಾನೂನಿನ ಸುಪರ್ದಿಗೆ ಒಪ್ಪಿಸಬೇಕು. ಶಾಂತಿ ಭಂಗಮಾಡುವ ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ, ಕಾನೂನನ್ನು ಮುರಿಯುವಂತಹ ಯಾವುದೇ ವ್ಯಕ್ತಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು.

ನಮ್ಮ ಜಿಲ್ಲೆಯಲ್ಲಿ ಇಂತಹ ಯಾವುದೇ ಕೃತ್ಯಕ್ಕೆ ಅವಕಾಶವಿರುವುದಿಲ್ಲ. ಜನರು ಶಾಂತಿ ಕಾಪಾಡಬೇಕು ಪರಸ್ಪರ ನಂಬಿಕೆ ಬೆಳೆಸಿಕೊಳ್ಳಬೇಕು ನಮ್ಮ ಸರ್ಕಾರದ ಅವಧಿಯಲ್ಲಿ ಇಂತಹ ಯಾವುದೇ ಘಟನೆ ನಡೆಯಲು ಅವಕಾಶ ನೀಡುವುದಿಲ್ಲ. ಯಾವುದೇ ಸಾರ್ವಜನಿಕ ಆಸ್ತಿಯನ್ನು ಭಂಗ ಮಾಡಿದವರಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಜನರು ಸಹಕರಿಸಿ ಎಂದಿನಂತೆ ಸಹಬಾಳ್ವೆ ನಡೆಸಲು ಕೋರುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!