ಕಾಲುಜಾರಿ ಬಾವಿಗೆ ಬಿದ್ದು ರೈತ ಸಾವು !

0 282

ಸಾಗರ : ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ರೈತನೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ನೀಚಡಿಯಲ್ಲಿ ನಡೆದಿದೆ.

ಜಿಗಳೆಮನೆ ನಿವಾಸಿ ಬಂಗಾರಪ್ಪ (55) ಮೃತ ದುರ್ದೈವಿಯಾಗಿದ್ದು, ನೀಚಡಿಯ ತೋಟದ ಹತ್ತಿರ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸಿ ಮೃತದೇಹವನ್ನು ಹೊರತೆಗೆದರು.

ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.

error: Content is protected !!