Categories: Shivamogga

ಕಾಲ ಇನ್ನೂ ಮಿಂಚಿಲ್ಲ ಶೆಟ್ಟರೇ ; ಕೆಎಸ್ಈ ಹೀಗಂದಿದ್ಯಾಕೆ ?

ಶಿವಮೊಗ್ಗ: ಜಗದೀಶ್ ಶೆಟ್ಟರೇ ದುಡುಕಿನ ನಿರ್ಧಾರ ತೆಗೆದು ಕೊಂಡಿದ್ದೀರಿ. ಕಾಲ ಇನ್ನೂ ಮಿಂಚಿಲ್ಲ. ಇನ್ನೊಮ್ಮೆ ಯೋಚಿಸಿ. ಮರಳಿ ಪಕ್ಷಕ್ಕೆ ಬನ್ನಿ ಎಂದು ಮಾಜಿ ಉಪ ಸಿಎಂ ಕೆ.ಎಸ್.ಈಶ್ವರಪ್ಪ ಜಗದೀಶ್ ಶೆಟ್ಟರಿಗೆ ಬಹಿರಂಗ ಪತ್ರದ ಮೂಲಕ ಮನವಿ ಮಾಡಿದ್ದಾರೆ.


ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಬರೆದ ಬಹಿರಂಗ ಪತ್ರ ಬಿಡುಗಡೆ ಮಾಡಿ ಮಾತನಾಡಿ, ಜಗದೀಶ್ ಶೆಟ್ಟರ್ ಅವರೇ ಪಕ್ಷ ನಿಮಗೆ ಎಲ್ಲವನ್ನೂ ನೀಡಿದೆ. 6 ಬಾರಿ ಶಾಸಕರಾಗಿದ್ದೀರಿ. ರಾಜಧ್ಯಕ್ಷರಾಗಿದ್ದೀರಿ. ಪಕ್ಷ ನಿಮಗೆ ಮುಖ್ಯಮಂತ್ರಿ ಪಟ್ಟವನ್ನೂ ನೀಡಿದೆ. ಕೇವಲ ಒಂದು ಟಿಕೆಟ್‌ಗಾಗಿ ತಲತಲಾಂತರದಿಂದ ಬಂದ ಬಿಜೆಪಿಯ ಸಿದ್ದಾಂತಗಳನ್ನು ಮಾರಿಕೊಳ್ಳುತ್ತಿದ್ದೀರಾ. ಅದು ಬಿಜೆಪಿಗೆ ವಿರುದ್ಧವಾಗಿರುವ ಕಾಂಗ್ರೆಸ್‌ಗೆ ಇದು ಸರಿಯಲ್ಲ. ಮತ್ತೊಮ್ಮೆ ಯೋಚಿಸಿ ಎಂದರು.


ಸುಮಾರು 4 ದಶಕಗಳಿಗೂ ಹೆಚ್ಚಿನ ಕಾಲ ತಾವು ನಂಬಿ ತಮ್ಮ ರಾಜಕೀಯ ಜೀವನವನ್ನು ರೂಪಿಸಿಕೊಂಡಿದ್ದ ತತ್ವ ಸಿದ್ಧಾಂತ, ರಾಜಕೀಯ ನಿಲುವನ್ನು ತ್ಯಜಿಸಿ ಕಾಂಗ್ರೆಸ್ ಪಕ್ಷದ ಕಡೆ ತಾವು ಮುಖ ಮಾಡಿರುವ ಈ ಬದಲಾದ ಪರಿಸ್ಥಿತಿಯಲ್ಲಿ ನನಗೆ ನಿಮ್ಮ ಪೂಜ್ಯ ತಂದೆಯವರಾದ ದಿ.ಶಿವಪ್ಪ ಶೆಟ್ಟರು ಬಹಳವಾಗಿ ನೆನಪಾಗುತ್ತಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಟ್ಟ ಪ್ರಭಾವದಲ್ಲಿ ತಮ್ಮ ರಾಜಕೀಯ ಜೀವನ ರೂಪಿಸಿಕೊಂಡ ದಿ.ಶಿವಪ್ಪ ಶೆಟ್ಟರು, ಭಾರತೀಯ ಜನತಾ ಪಕ್ಷದ ಮೂಲಕ ನಗರ ಸಭೆಯ ಸದಸ್ಯರಾಗಿ, ಮಹಾಪೌರರಾಗಿ, ಶಾಸಕರಾಗಿ ಎಲ್ಲದಕ್ಕಿಂತ ಮಿಗಿಲಾಗಿ ಪಕ್ಷದ ನಿಷವಂತ ಕಾರ್ಯಕರ್ತರಾಗಿ ಜನಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡವರು, ಇದನ್ನು ಮರೆತುಬಿಟ್ಟಿರಾ ಎಂದರು.


ಮುಂದೆ ಒಂದು ದಿನ ತಾವು ಕಾಂಗ್ರೆಸ್ ಪಕ್ಷದಿಂದ ಗೆದ್ದು ಬಂದ ಸಂದರ್ಭದಲ್ಲಿ ಸದನದಲ್ಲಿ ಗೋಹತ್ಯೆ ಪರ-ವಿರೋಧದ ಚರ್ಚೆ ನಡೆದರೆ ತಾವು ಗೋಹತ್ಯೆಯನ್ನು ಸಮರ್ಥಿಸಲು ಸಾಧ್ಯವೇ? ಉಗ್ರ ಪಿಎಫ್‌ಐ ಸಂಘಟನೆ ಕುರಿತಾದ ಪರ-ವಿರೋಧದ ಚರ್ಚೆಯಲ್ಲಿ ಪಿಎಫ್‌ಐ ನಿಬಂಧ ತೆರವು ಮಾಡಲು ತಾವು ಸಮ್ಮತಿಸಲು ಸಾಧ್ಯವೇ? ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸಲು ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಪಕ್ಷದ ವಿರುದ್ಧ ತಮ್ಮ ಉಗ್ರ ಹೋರಾಟ ನನಗಿನ್ನೂ ಮನಸ್ಸಿನಲ್ಲಿ ಹಸಿರಾಗಿದೆ. ಈಗ ತಾವು ಅದೇ ಪಕ್ಷವನ್ನು ಯಾವ ರೀತಿ ಒಪ್ಪಿಕೊಳ್ಳಲು ಸಾಧ್ಯ? ಎಂದು ಪ್ರಶ್ನಿಸಿದರು.


ಲಕ್ಷ್ಮಣ ಸವದಿ ಅವರೂ ಬಿಜೆಪಿ ಬಿಟ್ಟಿರುವರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅಧಿಕಾರದ ಆಸೆಗೆ ಬಂದವರು ಹಲವರಿದ್ದಾರೆ. ಅವರು ಪಕ್ಷ ಕಟ್ಟಲು ಬಂದವರಲ್ಲ. ಟಿಕೆಟ್ ಸಿಗದೆ ಹೋದರೆ ನನ್ನನ್ನು ಚೆನ್ನಾಗಿ ನಡೆಸಿಕೊಂಡಿಲ್ಲ ಎಂದ ಮತ್ತೆ ಬೇರೆ ಬೇರೆ ಪಕ್ಷಗಳಿಗೆ ಹೋಗುತ್ತಾರೆ. ಆದರೆ ಜಗದೀಶ್ ಶೆಟ್ಟರ್ ಹಾಗಿರಲಿಲ್ಲ. ಟಿಕೆಟ್‌ಗಾಗಿಯೇ ಕಾಂಗ್ರೆಸ್ ಸೇರುತ್ತಾರೆ ಎಂದು ತಿಳಿದಿದ್ದರೆ ಅವರನ್ನು ಬಿಜೆಪಿ ಇಷ್ಟು ಎತ್ತರಕ್ಕೆ ಬೆಳೆಸುತ್ತಿರಲಿಲ್ಲ ಎಂದರು.


ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎಸ್. ಜ್ಞಾನೇಶ್ವರ್, ಡಾ. ಧನಂಜಯ ಸರ್ಜಿ, ಸುನೀತಾ ಅಣ್ಣಪ್ಪ, ಜಗದೀಶ್ ಮತ್ತಿತರರು ಇದ್ದರು.

Malnad Times

Recent Posts

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

2 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

2 hours ago

Arecanut Today Price | ಮೇ 03ರ ಅಡಿಕೆ ರೇಟ್

ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

3 hours ago

ಶ್ರದ್ದಾಭಕ್ತಿಯ ನಾಮಸ್ಮರಣೆಗೆ ದೇವರ ಒಲುಮೆಯಿದೆ ; ಶ್ರೀಗಳು

ರಿಪ್ಪನ್‌ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…

4 hours ago

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

7 hours ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳ್ಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

9 hours ago