Categories: Shivamogga

ಕಿಶೋರ ಕಾರ್ಮಿಕ ಪತ್ತೆ: ಪ್ರಕರಣ ದಾಖಲು


ಶಿವಮೊಗ್ಗ: ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಪೊಲೀಸ್ ಇಲಾಖೆ ಸಹಯೋಗದಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಆನವಟ್ಟಿಯಲ್ಲಿ ದಿನಾಂಕ: 22-05-2023 ರಂದು ಬಾಲ ಕಾರ್ಮಿಕ ತಪಾಸಣೆಯನ್ನು ಹಮ್ಮಿಕೊಂಡಿದ್ದು ಓರ್ವ ಕಿಶೋರ ಕಾರ್ಮಿಕ ಪತ್ತೆಯಾಗಿರುತ್ತಾನೆ.


ಮಾಲೀಕನ ವಿರುದ್ಧ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರಡಿ ಸೊರಬ ತಾಲ್ಲೂಕಿನ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲಾಗಿರುತ್ತದೆ.


ಪತ್ತೆಯಾದ ಬಾಲಕನನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದ್ದು, ತಪಾಸಣೆಯಲ್ಲಿ ಇತರೆ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಬಾಲಕಾರ್ಮಿಕ ಕಾಯ್ದೆಯ ಕುರಿತು ಅರಿವು ಮೂಡಿಸಲಾಯಿತು.


ತಂಡದಲ್ಲಿ ಸೊರಬದ ಕಾರ್ಮಿಕ ನಿರೀಕ್ಷಕರಾದ ಶಿಲ್ಪ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ರಘುನಾಥ ಎ.ಎಸ್ ಹಾಜರಿದ್ದರು ಎಂದು ಕಾರ್ಮಿಕ ಅಧಿಕಾರಿಗಳು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

Malnad Times

Recent Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

5 hours ago

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

16 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

22 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

1 day ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

2 days ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

2 days ago