Categories: Shivamogga

ಕುವೆಂಪು ವಿವಿ ಆಡಳಿತ ಸಂಪೂರ್ಣ ಕುಸಿದಿದ್ದು, ಗೊಂದಲದ ಗೂಡಾಗಿದೆ ; ಆಯನೂರು ಮಂಜುನಾಥ್ ಆರೋಪ

ಶಿವಮೊಗ್ಗ : ಕುವೆಂಪು ವಿವಿಯ ಆಡಳಿತ ಸಂಪೂರ್ಣ ಕುಸಿದಿದ್ದು, ಗೊಂದಲದ ಗೂಡಾಗಿದೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಸಂಸದ ಆಯನೂರು ಮಂಜುನಾಥ್ ಹೇಳಿದರು.


ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕುವೆಂಪು ವಿವಿಯ ಆಡಳಿತ ಕುಸಿದಿದೆ. ಇದರ ಪರಿಣಾಮವಾಗಿ ವಿವಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಾಲೇಜುಗಳು ಸಮಸ್ಯೆಗಳನ್ನು ಎದುರಿಸುತ್ತಿವೆ. ವಿದ್ಯಾರ್ಥಿಗಳು ಕೂಡ ಆತಂಕದಲ್ಲಿದ್ದಾರೆ. ಒಂದು ಕಡೆ ಪಾಠಗಳು ನಡೆಯುತ್ತಿಲ್ಲ. ಅಧ್ಯಾಪಕರುಗಳು ಇಲ್ಲ. ಪರೀಕ್ಷೆಗಳು ಸಮಯಕ್ಕೆ ಸರಿಯಾಗಿ ನಡೆಯುತ್ತಿಲ್ಲ. ವಿದ್ಯಾರ್ಥಿ ವೇತನಕ್ಕೆ ತೊಂದರೆಯಾಗಿದೆ. ಹೊಸ ವಿಷಯಗಳಿಗೆ ಯಾರು ಪಾಠ ಮಾಡಬೇಕು ಎಂಬುವುದೇ ಗೊತ್ತಿಲ್ಲ. ಮುಖ್ಯವಾಗಿ ವಿವಿಗೆ ಖಾಯಂ ಕುಲಪತಿ ಹಾಗೂ ಕುಲಸಚಿವರು (ಶೈಕ್ಷಣಿಕ) ನೇಮಕವೇ ಆಗಿಲ್ಲ ಎಂದು ಆರೋಪಿಸಿದರು.


ಈ ಎಲ್ಲಾ ಸಮಸ್ಯೆಗಳನ್ನು ಇಟ್ಟುಕೊಂಡು ನಾಳೆ ಅಥವಾ ನಾಡಿದ್ದು ಸುಮಾರು 15 ಕಾಲೇಜುಗಳ ಪ್ರಾಂಶುಪಾಲರ ಜೊತೆಗೂಡಿ ಉನ್ನತ ಶಿಕ್ಷಣ ಸಚಿವರಾದ ಡಾ.ಸುಧಾಕರ್ ಅವರನ್ನು ಭೇಟಿ ಮಾಡಿ, ಸಮಸ್ಯೆಗಳನ್ನು ಗಮನಕ್ಕೆ ತರಲಾಗುವುದು ಮತ್ತು ರಾಜ್ಯಪಾಲರು ಮಧ್ಯ ಪ್ರವೇಶ ಮಾಡಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಮನವಿ ಮಾಡಲಾಗುವುದು ಎಂದರು.


ಜ.24ಕ್ಕೆ ಸೆಮಿಸ್ಟರ್‌ಗಳು ಮುಕ್ತಾಯವಾಗಬೇಕಿತ್ತು. 25ಕ್ಕೆ ಪರೀಕ್ಷೆಗಳು ಆರಂಭವಾಗಬೇಕಿತ್ತು. ಆದರೆ, ಪರೀಕ್ಷಾ ದಿನಾಂಕಗಳನ್ನು ಕಾರಣಗಳು ಇಲ್ಲದೆ ಮುಂದೂಡಲಾಗಿದೆ. ತಮ್ಮ ವೈಫಲ್ಯತೆ ಮುಚ್ಚಿಕೊಳ್ಳಲು ಪರೀಕ್ಷೆಗಳನ್ನು ಮುಂದೂಡಿದರೆ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ವರ್ಷದ ಗತಿಯೇನು?. ವೇಳಪಟ್ಟಿಯನ್ನು ಮುಂದೂಡುತ್ತಾ ಹೋದರೆ ಮೌಲ್ಯಮಾಪನ ತರಗತಿಗಳ ಆರಂಭ, ಪ್ರವೇಶ ಪ್ರಕ್ರಿಯೆ ಇವೆಲ್ಲವೂ ಗೊಂದಲದ ಗೂಡಾಗಿ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದರು.


ಎನ್‌ಇಪಿ ಅಂಕಪಟ್ಟಿ ಕೊಟ್ಟಿಲ್ಲ, ಆನ್‌ಲೈನ್ ಅಂಕಪಟ್ಟಿಗಳು ದೋಷಪೂರಿತವಾಗಿವೆ. ಅಂಕಪಟ್ಟಿಯಲ್ಲಿ ಎನ್‌ಎಸ್‌ಎಸ್ ಕ್ರೀಡೆ ಮತ್ತು ಇತರೆ ವಿಷಯಗಳನ್ನು ನಮೂದಿಸಿರುವುದಿಲ್ಲ. ಇದರಿಂದ ಎಸ್‌ಎಸ್‌ಪಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವುದು ಕಷ್ಟವಾಗಬಹುದು. ಪ್ರಾಂಶುಪಾಲರುಗಳು ಅಸಹಾಯಕರಾಗಿದ್ದಾರೆ. ಪಠ್ಯ ಚಟುವಟಿಕೆಗಳೇ ಕುಂಠಿತಗೊಂಡಿವೆ. ವಿವಿಯಿಂದ ಯಾವುದೇ ಕಾಲೇಜಿನ ಜೊತೆಯ ಸಂವಹನವೇ ಇರುವುದಿಲ್ಲ. ಜೊತೆಗೆ ಜಿ.ಪಂ. ಸಿಇಓ ಅವರೇ ಕುಲಸಚಿವರಾಗಿರುವುದರಿಂದ ಅವರಿಗೆ ಕಾರ್ಯದ ಒತ್ತಡವಿರುತ್ತದೆ. ಹಾಗಾಗಿ ಅನಗತ್ಯ ವಿಳಂಬವಾಗುತ್ತದೆ ಎಂದರು.


ಹೀಗೆ ಹಲವು ಸಮಸ್ಯೆಗಳು ಕುವೆಂಪು ವಿವಿಯಲ್ಲಿದೆ. ಇವೆಲ್ಲವನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ವಿದ್ಯಾರ್ಥಿಗಳ ಹಿತವನ್ನು ಕಾಯಬೇಕಾಗಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರು ಮಧ್ಯ ಪ್ರವೇಶ ಮಾಡಬೇಕು ಎಂದರು.


ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ವೈ.ಹೆಚ್.ನಾಗರಾಜ್, ಪ್ರಮುಖರಾದ ಶಿ.ಜು.ಪಾಶ, ಐಡಿಯಲ್ ಗೋಪಿ, ಮುಕ್ತಿಯಾರ್‌ಅಹಮದ್, ಸೈಯ್ಯದ್‌ವಾಹಿದ್‌ಅಡ್ಡು, ಸಂತೋಷ್ ಆಯನೂರು ಇದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago