Categories: Shivamogga

ಕುವೆಂಪು ವಿ‌ವಿ ನೂತನ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಪ್ರೊ. ಶರತ್ ಅನಂತಮೂರ್ತಿ

ಶಿವಮೊಗ್ಗ : ಕುವೆಂಪು ವಿವಿಯ ನೂತನ ಕುಲಪತಿಯಾಗಿ ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕರಾಗಿದ್ದ ಡಾ. ಶರತ್ ಅನಂತಮೂರ್ತಿ ಅವರು ಗುರುವಾರ ಬೆಳಿಗ್ಗೆ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ರಾಜ್ಯಪಾಲ ಡಾ. ಥಾವರ್ ಚಂದ್ ಗೆಹ್ಲೋಟ್ ಅವರು ಫೆಬ್ರವರಿ 05ರಂದು ಡಾ. ಶರತ್ ಅವರನ್ನು ಪೂರ್ಣಾವಧಿ ಕುಲಪತಿಯಾಗಿ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದರು.

ಪ್ರೊ. ಶರತ್ ಅನಂತಮೂರ್ತಿ ಕರ್ನಾಟಕದ ಖ್ಯಾತ ಸಾಹಿತಿ ಹಾಗೂ ಜ್ಞಾನಪೀಠ ಪುರಸ್ಕೃತ ಡಾ. ಯು ಆರ್ ಅನಂತಮೂರ್ತಿ ಅವರ ಪುತ್ರರಾಗಿದ್ದಾರೆ. ಇವರು ಅಮೆರಿಕಾದ ಪ್ರತಿಷ್ಠಿತ ಅಯೋವಾ ಸ್ಟೇಟ್ ವಿಶ್ವವಿದ್ಯಾಲಯದಿಂದ ಪಿಹೆಚ್. ಡಿ. ಪದವಿ ಪಡೆದಿದ್ದಾರೆ. ಪ್ರೊ. ಶರತ್ ಬೆಂಗಳೂರು ವಿವಿಯಲ್ಲಿ 2017ರವರೆಗೆ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ನಂತರ ಹೈದರಾಬಾದ್ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ನೇಮಕಗೊಂಡಿದ್ದರು.

ಅವರು 35ಕ್ಕೂ ಅಧಿಕ ಸಂಶೋಧನಾ ಲೇಖನಗಳನ್ನು ವಿವಿಧ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಂಶೋಧನಾ ಜರ್ನಲ್ ಗಳಲ್ಲಿ ಪ್ರಕಟಿಸಿದ್ದಾರೆ. ಇವರ ಲೇಖನಗಳು 350ಕ್ಕೂ ಹೆಚ್ಚು ಸಂಶೋಧನಾ ಮರು ಉಲ್ಲೇಖಗಳನ್ನು ಪಡೆದುಕೊಂಡಿವೆ. 2006ರಲ್ಲಿ ಇವರ ಶೈಕ್ಷಣಿಕ ಸಾಧನೆಗಾಗಿ ಕಾಮನ್ವೆಲ್ತ್ ವಿಶ್ವವಿದ್ಯಾಲಯಗಳು ಒಕ್ಕೂಟದ ವತಿಯಿಂದ ‘ಕಾಮನ್‌ವೆಲ್ತ್ ಶೈಕ್ಷಣಿಕ ಸಿಬ್ಬಂದಿ ಫೆಲೋಶಿಪ್’ ಗೌರವವನ್ನು ನೀಡಲಾಗಿದೆ.

ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಕುವೆಂಪು ಹೆಸರಿನ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕಗೊಂಡಿರುವುದು ಅತ್ಯಂತ ಹೆಮ್ಮೆಯ ವಿಷಯ. ಅವರ ವೈಚಾರಿಕತೆ, ಆದರ್ಶಗಳೇ ನನಗೆ ಮಾರ್ಗದರ್ಶಿ. ವಿಶ್ವವಿದ್ಯಾಲಯದಲ್ಲಿ ಶೈಕ್ಷಣಿಕ ವಾತಾವರಣವನ್ನು ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ, ಸಂವಾದಗಳು ನಡೆಯಬೇಕು. ವಿವಿಯನ್ನು ವಿದ್ಯಾರ್ಥಿಗಳು ಮತ್ತು ಅಧ್ಯಾಪಕ ಕೇಂದ್ರಿತವನ್ನಾಗಿಸಿ ಮುಕ್ತ ಮತ್ತು ನಿರ್ಭಿಡೆಯ ವಾತಾವರಣ ನಿರ್ಮಿಸುವುದರತ್ತ ಗಮನಹರಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ವಿವಿಯ ನಿಕಟಪೂರ್ವ ಪ್ರಭಾರ ಕುಲಪತಿ ಪ್ರೊ. ಎಸ್ ವಿ ಕೃಷ್ಣಮೂರ್ತಿ, ಕುಲಸಚಿವ ಎ ಎಲ್ ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್ ಎಂ ಗೋಪಿನಾಥ್, ಹಣಕಾಸು ಅಧಿಕಾರಿ ಜಿ.‌ ಬಂಗಾರಪ್ಪ, ಪ್ರೊ.‌ ಗುರುಲಿಂಗಯ್ಯ, ಡಾ. ಸತ್ಯಪ್ರಕಾಶ್. ಎಂ. ಆರ್ ಮತ್ತಿತರರು ಹಾಜರಿದ್ದರು.

Malnad Times

Recent Posts

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

4 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

6 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

19 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

21 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

22 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

22 hours ago