ಕುಸ್ತಿಪಟುಗಳ ಲೈಂಗಿಕ ಕಿರುಕುಳದ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

0 43

ಶಿವಮೊಗ್ಗ : ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧಿಸುವಂತೆ ಒತ್ತಾಯಿಸಿ ಜಯಕರ್ನಾಟಕ ಸಂಘಟನೆ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಎದುರು ಪ್ರತಿಭಟನೆ ನಡೆಸಿ ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸಿದರು.

ಒಲಂಪಿಕ್ ಪದಕ ವಿಜೇತರು, ವಿಶ್ವ ಚಾಂಪಿಯನ್ ಕುಸ್ತಿ ಪಟುಗಳು ಸೇರಿದಂತೆ ದೇಶದ ಹೆಮ್ಮೆಯ ಕುಸ್ತಿ ಕ್ರೀಡಾಪಟುಗಳು.‌ 2023 ಏಪ್ರಿಲ್ 24ರಿಂದ ನವದೆಹಲಿಯ ಜಂತರ್-ಮಂಥರ್‌ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪೊಲೀಸ್ ದೂರು ನೀಡಿದ್ದರೂ ಸಹ ಎಫ್.ಐ.ಆರ್ ದಾಖಲಾಗಿಲ್ಲ‌. ಸುಪ್ರೀಂಕೋರ್ಟ್‌ನ ಮಧ್ಯ ಪ್ರವೇಶದ ನಂತರವಷ್ಟೇ ಎಫ್.ಐ.ಆರ್ ದಾಖಲಾಗಿದೆ.

ಈ ಪ್ರತಿಭಟನಾ ಕುಸ್ತಿಪಟುಗಳು ತಮ್ಮ ಮೇಲಾಗಿರುವ
ಲೈಂಗಿಕ ಕಿರುಕುಳ ಹಾಗೂ ಹಿಂಸೆ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Leave A Reply

Your email address will not be published.

error: Content is protected !!