ಕೆಎಸ್‍ಐಐಡಿಸಿ ಅಧ್ಯಕ್ಷರಿಂದ ಶಿವಮೊಗ್ಗ ವಿಮಾನ ನಿಲ್ದಾಣ ಪರಿವೀಕ್ಷಣೆ

0 69


ಶಿವಮೊಗ್ಗ : ಕೆಎಸ್‍ಐಐಡಿಸಿ ನಿಗಮದ ಅಧ್ಯಕ್ಷರಾದ ಡಾ.ಕೆ.ಶೈಲೇಂದ್ರ ಬೆಲ್ದಾಳೆ ಅವರು ಫೆ. 27 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿರವರಿಂದ ಉದ್ಘಾಟನೆಗೊಳ್ಳುವ ಸೋಗಾನೆಯ ವಿಮಾನ ನಿಲ್ದಾಣದ ಕಾಮಗಾರಿಗಳ ಪರಿವೀಕ್ಷಣೆಯನ್ನು ಇಂದು ಮಾಡಿದರು.


3050 ಮೀ ಉದ್ದ, 45 ಮೀ ಅಗಲದ ರನ್‍ವೇ, ಆರ್‍ಇಎಸ್‍ಎ, ಬಾಹ್ಯ(ಪೆರಿಫಿರಲ್) ರಸ್ತೆ, ಎಪ್ರಾನ್, ಟ್ಯಾಕ್ಸಿ ವೇ, ಕಾಂಪೌಂಡ್, ಕಾರ್ ಪಾರ್ಕಿಂಗ್ ಏರಿಯಾ, ಇತರೆ ಕಾಮಗಾರಿಗಳು ಹಾಗೂ 4340 ಚದುರ ಮೀಟರ್ ಅಳತೆಯಲ್ಲಿ ಪ್ಯಾಸೆಂಜರ್ ಟರ್ಮಿನಲ್ ಬಿಲ್ಡಿಂಗ್, 2347 ಚದುರ ಮೀಟರ್ ಅಳತೆಯಲ್ಲಿ ಎಟಿಸಿ ಕಟ್ಟಡ, 02 ಎಲೆಕ್ಟ್ರಿಕ್ ಸಬ್ ಸ್ಟೇಷನ್, 01 ಫೈರ್ ಸ್ಟೇಷನ್ ಹಾಗೂ ಇತರೆ ಕಾಮಗಾರಿಗಳನ್ನು ಅವರು ಪರಿವೀಕ್ಷಿಸಿದರು.


ಪ್ರಧಾನಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ವಿಮಾನ ಹಾರಾಟದ ಅನುಮತಿಗೆ ಬೇಕಾದ ಪ್ರಕ್ರಿಯೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಹಾಗೂ ಅತ್ಯಂತ ಶೀಘ್ರ ಗತಿಯಲ್ಲಿ ವಿಮಾನ ನಿಲ್ದಾಣದ ಕಾಮಗಾರಿಯನ್ನು ಪೂರ್ಣಗೊಳಿಸಲು ಶ್ರಮಿಸಿದ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಾಗೂ ಸಂಸದರಾದ ಬಿ.ವೈ.ರಾಘವೇಂದ್ರರವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.


ಈ ಸಂದರ್ಭದಲ್ಲಿ ಜಿಲ್ಲಾ ಧಿಕಾರಿ ಡಾ.ಆರ್.ಸೆಲ್ವಮಣಿ, ಕೆಎಸ್‍ಐಐಡಿಸಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಎಂ.ಆರ್ ರವಿ, ನಿಗಮದ ನಿರ್ದೇಶಕರುಗಳಾದ ಸಿ.ಎನ್.ಗಾಯತ್ರಿ ದೇವಿ, ಭಾರತಿ ಮಲ್ಲಿಕಾರ್ಜುನಪ್ಪ ಅಲವಂಡಿ, ಎಸ್ ಮಹಾದೇವಿಸ್ವಾಮಿ ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!