Categories: Shivamogga

ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ ; ಮೊದಲ ಪ್ರತಿಕ್ರಿಯೆಯಲ್ಲಿ ಏನಂದ್ರು ?

ಶಿವಮೊಗ್ಗ: ತಮ್ಮ ರಾಜಕೀಯ ನಿವೃತ್ತಿ ಕುರಿತಾಗಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ತಾವು ಪತ್ರ ಬರೆದಿರುವುದು ನಿಜ ಎಂದು ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ತಮ್ಮ ಸ್ವಗೃಹದಲ್ಲಿ ಮಾತನಾಡಿದ ಅವರು, ಪತ್ರ ಬರೆದಿರುವುದು ನಿಜ. ಅದನ್ನು ರಾಷ್ಟ್ರಾಧ್ಯಕ್ಷರು ಅಂಗೀಕರಿಸಬೇಕು. ಅಲ್ಲದೇ, ಚುನಾವಣೆಯ ಜವಾಬ್ದಾರಿ ನೀಡಿದರೆ ಅದನ್ನು ನಿರ್ವಹಿಸಲು ಸಿದ್ದನಿದ್ದೇನೆ ಎಂದಿದ್ದಾರೆ.

ಕಾರ್ಯಕರ್ತರು ಇದಕ್ಕೆ ಒಪ್ಪುವುದಿಲ್ಲ ಎಂದು ತಮಗೆ ತಿಳಿದಿತ್ತು. ಹೀಗಾಗಿ, ಯಾರೊಂದಿಗೂ ಚರ್ಚೆ ಮಾಡಲಿಲ್ಲ. ತಮ್ಮ ಈ ನಿರ್ಧಾರದಿಂದ ಕ್ಷೇತ್ರದಲ್ಲಿ ಬಿಜೆಪಿಗೆ ಯಾವುದೇ ತೊಂದರೆಯಾಗುವುದಿಲ್ಲ. ಲಕ್ಷ ಲಕ್ಷ ಕಾರ್ಯಕರ್ತರು ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ. ಅವರೆಲ್ಲ ಶ್ರಮ ಫಲ ನೀಡಲಿದೆ ಎಂದಿದ್ದಾರೆ.

ತಮ್ಮ ಉತ್ತರಾಧಿಕಾರಿ ಕುರಿತಾಗಿ ಮಾತನಾಡಿದ ಅವರು, ವರಿಷ್ಠರು ಹಾಗೂ ಚುನಾವಣಾ ಸಮಿತಿ ಏನು ನಿರ್ಧಾರ ಕೈಗೊಳ್ಳುತ್ತದೆ ಅದಕ್ಕೆ ಎಲ್ಲರೂ ಬದ್ದರಾಗಿರುತ್ತೇವೆ ಎಂದಿದ್ದಾರೆ.

ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಎಲ್ಲ ನಾಯಕರೂ ಒಟ್ಟಾಗಿ ಶ್ರಮಿಸಲಿದ್ದೇವೆ. ಕಾರ್ಯಕರ್ತರು ಇದಕ್ಕೆ ಪೂರಕವಾಗಿ ಶ್ರಮ ವಹಿಸಬೇಕು ಎಂದರು.

ಅಭಿಮಾನಿಗಳ ಆಕ್ರೋಶ‌:
ಕೆ.ಎಸ್. ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿರುವ ಹಿನ್ನೆಲೆ ನಗರದಲ್ಲಿ ಅಭಿಮಾನಿಗಳು ಹೈಕಮಾಂಡ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.

ನಿನ್ನೆಯವರೆಗೂ ಈಶ್ವರಪ್ಪನವರಿಗೆ ಟಿಕೆಟ್ ನಿಶ್ಚಿತ ಎಂದೇ ಹೇಳಲಾಗಿತ್ತು. ಆದರೆ, ಇಂದು ಏಕಾಏಕಿ ಸ್ವತಃ ಅವರೇ ರಾಜಕೀಯ ನಿವೃತ್ತಿ ಘೋಷಿಸಿರುವುದು ಜಿಲ್ಲೆಯ ಹಿರಿಯ ನಾಯಕರು ಹಾಗು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದ್ದು, ನಿವೃತ್ತಿ ಘೋಷಣೆ ಸುದ್ಧಿ ಹೊರಬಿದ್ದ ನಂತರ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಈಶ್ವರಪ್ಪ ನವರ ನಿವಾಸಕ್ಕೆ ದೌಡಾಯಿಸಿದ್ದು, ತಮ್ಮ ಈ ನಿರ್ಧಾರವನ್ನು ಬದಲಾಯಿಸಿಕೊಳ್ಳಬೇಕೆಂದು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಬಿಜೆಪಿ ವರಿಷ್ಠರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾರ್ಯಕರ್ತರು ಟೈರಿಗೆ ಬೆಂಕಿ ಹಚ್ಚಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

Malnad Times

Recent Posts

ಕಾದ ಕಾವಲಿಯಂತಾದ ಮಲೆನಾಡು, ಬಿಸಿಲಿನ ಜಳಕ್ಕೆ ಜನ ಸುಸ್ತೋ ಸುಸ್ತು

ಶಿವಮೊಗ್ಗ : ಮಲೆನಾಡೆಂದರೆ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ ಕರ್ನಾಟಕ ಮಾತ್ರವಲ್ಲ ಅದರಿಂದಾಚೆಗೂ ಮಲೆನಾಡನ್ನು ಪ್ರೀತಿಸುವವರು, ಇರಲು ಇಚ್ಛಿಸುವವರು ಇದ್ದಾರೆ.…

55 mins ago

ಅಭಿವೃದ್ಧಿ ಮಾಡದೇ ಮತದಾರರಿಗೆ ಮುಖ ತೋರಿಸಲು ಆಗದೇ ಮೋದಿ ಹೆಸರಿನಲ್ಲಿ ಮತ ಕೇಳಲು ನಾಚಿಕೆಯಾಗಬೇಕು ; ಬಿ.ವೈ.ಆರ್. ವಿರುದ್ಧ ಹರಿಹಾಯ್ದ ಬೇಳೂರು

ರಿಪ್ಪನ್‌ಪೇಟೆ: ಕಳೆದ 10 ವರ್ಷಗಳಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರದಿಂದ ಯಾವುದೇ ಅನುದಾನವನ್ನು ತರದೇ ಅಭಿವೃದ್ದಿಯನ್ನು ಮಾಡದೇ ನಿರ್ಲಕ್ಷ್ಯ ವಹಿಸಿರುವ…

4 hours ago

Arecanut Price | ಏಪ್ರಿಲ್ 29ರ ಶಿವಮೊಗ್ಗ ಮಾರುಕಟ್ಟೆಯ ಅಡಿಕೆ ರೇಟ್

ಶಿವಮೊಗ್ಗ : ಏ. 29 ಸೋಮವಾರ ನಡೆದ ಶಿವಮೊಗ್ಗ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ಶಿವಮೊಗ್ಗ ಮಾರುಕಟ್ಟೆ :ರಾಶಿ…

7 hours ago

ಪ್ರವಾಸಕ್ಕೆ ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಕೃಷಿ ಹೊಂಡದಲ್ಲಿ ಮುಳುಗಿ ಸಾವು !

ಪ್ರವಾಸಕ್ಕೆ ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಕೃಷಿ ಹೊಂಡದಲ್ಲಿ ಮುಳುಗಿ ಸಾವು ! ಮೂಡಿಗೆರೆ : ಪ್ರವಾಸಕ್ಕೆ ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ…

8 hours ago

ಸಿ.ಟಿ.ರವಿ ವಿರುದ್ಧ ಸುಳ್ಳು ಎಫ್‌ಐಆರ್ | ಸರ್ಕಾರದಿಂದ ವಿರೋಧ ಪಕ್ಷಗಳನ್ನು ಹತ್ತಿಕ್ಕುವ ಯತ್ನ, ಖಂಡನೆ

ಚಿಕ್ಕಮಗಳೂರು: ಮಾಜಿ ಸಚಿವ ಡಾ.ಸಿ.ಟಿ.ರವಿ ವಿರುದ್ಧ ಸುಳ್ಳು ಮತ್ತು ಅಸಂಬದ್ಧವಾಗಿ ಎಫ್‌ಐಆರ್ ದಾಖಲಿಸುವ ಮೂಲಕ ವಿರೋಧ ಪಕ್ಷಗಳ ಮಾತನಾಡು ಹಕ್ಕು…

18 hours ago

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಮಾಜಿ ಸಚಿವ ಸಿ.ಟಿ.ರವಿ ಸಂತಾಪ

ಚಿಕ್ಕಮಗಳೂರು: ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ (77) ಅವರ ನಿಧನಕ್ಕೆ ಮಾಜಿ ಸಚಿವ ಡಾ.ಸಿ.ಟಿ.ರವಿ ಸೇರಿದಂತೆ ಜಿಲ್ಲಾ ಬಿಜೆಪಿ ಕಂಬನಿ…

19 hours ago