ಕೈಗೆಟಕುವ ದರದಲ್ಲಿ ನಿವೇಶನ ಹಂಚಿಕೆ ಗುರಿ ; ಸೂಡಾ ಅಧ್ಯಕ್ಷ ಸುಂದರೇಶ್

ಶಿವಮೊಗ್ಗ : ತಮ್ಮ ಅಧಿಕಾರಾವಧಿಯಲ್ಲಿ ಬಡ ಮತ್ತು ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ ಸುಮಾರು 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ ಎಂದು ನೂತನ ಸೂಡಾ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ತಿಳಿಸಿದರು.

ಇಂದು ಸೂಡಾ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ, ನನ್ನನ್ನು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಸೂಡಾ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ನಿವೇಶನ ಹಂಚಿಕೆಯಾಗಿಲ್ಲ. ತಮ್ಮ ಅವಧಿಯಲ್ಲಿ ಬಡ-ಮಧ್ಯಮ ವರ್ಗದವರಿಗೆ ಅನುಕೂಲವಾಗುವಂತೆ ನಿವೇಶನ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು. ಸೂಡಾ ಪರಿಷ್ಕೃತ ಮಹಾಯೋಜನೆ (ಸಿಡಿಪಿ) ಕಾರ್ಯ ಪ್ರಗತಿಯಲ್ಲಿದೆ. ಪ್ರಾಧಿಕಾರದ ವತಿಯಿಂದ ಶಿವಮೊಗ್ಗ ನಗರದ ಊರಗಡೂರು ಗ್ರಾಮದಲ್ಲಿ ವಸತಿ ಬಡಾವಣೆಯನ್ನು ನಿರ್ಮಿಸುತ್ತಿದ್ದು ಸಿವಿಲ್ ಕಾಮಗಾರಿ ಪ್ರಗತಿಯಲ್ಲಿರುತ್ತದೆ. ಕಾಮಗಾರಿಗಳು ಪೂರ್ಣಗೊಂಡ ನಂತರ ಲಭ್ಯವಾಗುವ ಒಟ್ಟು 684 ನಿವೇಶನಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲು ಅರ್ಜಿ ಆಹ್ವಾನಿಸಿ ಕ್ರಮ ತೆಗೆದುಕೊಳ್ಳಲಾಗುವುದು.

ಸೋಮಿನಕೊಪ್ಪದ ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿ ಲಭ್ಯವಿರುವ 01 ಎಕರೆ 09 ಗುಂಟೆ ಪ್ರದೇಶದಲ್ಲಿ ವಸತಿ ಸಮುಚ್ಚಯ (ಜಿ+3) ನಿರ್ಮಾಣ ಹಾಗೂ ಊರಗಡೂರು ವಸತಿ ಬಡಾವಣೆಯಲ್ಲಿ ಲಭ್ಯವಿರುವ 04 ಎಕರೆ ಜಾಗದಲ್ಲಿ ವಸತಿ ಸಮುಚ್ಚಯ ನಿರ್ಮಾಣ ಮಾಡಲಾಗುವುದು.

2023-24 ನೇ ಸಾಲಿನಲ್ಲಿ ಪ್ರಾಧಿಕಾರದ ವತಿಯಿಂದ ಪ್ರಾಧಿಕಾರದ ಬಡಾವಣೆಗಳಲ್ಲಿ ರಸ್ತೆ ಡಾಂಬರೀಕರಣ, ಒಳಚರಂಡಿ, ಉದ್ಯಾನವನ ಅಭಿವೃದ್ದಿ, ನಗರದ ಸರ್ಕಲ್ ಅಭಿವೃದ್ದಿ ಇತ್ಯಾದಿ ಕಾಮಗಾರಿಗಳನ್ನು ತೆಗೆದುಕೊಂಡಿದ್ದು, ಅಂದಾಜು ರೂ.25 ಕೋಟಿ ವೆಚ್ಚದಲ್ಲಿ ಟೆಂಡರ್ ಕರೆದು ಕಾಮಗಾರಿಗಳನ್ನು ಅನುಷ್ಟಾನಗೊಳಿಸಲು ಕ್ರಮ ವಹಿಸಲಾಗುತ್ತಿದೆ.

ಪ್ರಾಧಿಕಾರದ ಸ್ಥಳೀಯ ಪ್ರದೇಶಾಭಿವೃದ್ದಿ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಕೆರೆಗಳನ್ನು ಅಂದಾಜು ರೂ.35 ಕೋಟಿ ವೆಚ್ಚದಲ್ಲಿ ಅಭಿವೃದ್ದಿಪಡಿಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ. ಪ್ರಾಧಿಕಾರವು ಮುಂದಿನ ದಿನಗಳಲ್ಲಿ ಆರ್ಥಿಕ ಸದೃಢತೆ ಹೊಂದುವ ನಿಟ್ಟಿನಲ್ಲಿ ಪ್ರಾಧಿಕಾರದ ಬಡಾವಣೆಗಳಲ್ಲಿ ಲಭ್ಯವಿರುವ ವಾಣಿಜ್ಯ ನಿವೇಶನಗಳನ್ನು ಗುರುತಿಸಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲಾಗುವುದು.

ನಗರದ ಪ್ರಮುಖ ವೃತ್ತಗಳನ್ನು ಗುರುತಿಸಿ ಸೌಂದರ್ಯೀಕರಣ ಮತ್ತು ಅಭಿವೃದ್ದಿ ಮಾಡಲಾಗುವುದು. ಹಾಗೂ ಮುಂದಿನ ದಿನಗಳಲ್ಲಿ ಹೊಸ ಬಡಾವಣೆಗಳನ್ನು ರಚಿಸಿ ಸಾರ್ವಜನಿಕರಿಗೆ/ನಿವೇಶನ ರಹಿತರಿಗೆ/ಬಡವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ಹಂಚಿಕೆಗೆ ಕ್ರಮ ವಹಿಸಲಾಗುವುದು.

ಖಾಸಗಿ ಲೇಔಟ್‍ಗಳಿಗೆ ಮೂಲಸೌಕರ್ಯ ಒದಗಿಸಲು ಕ್ರಮ ವಹಿಸಲಾಗುವುದು. ಪ್ರಾಧಿಕಾರದಲ್ಲಿ ಲಭ್ಯವಿರುವ ನಾಗರೀಕ ಸೌಲಭ್ಯ(ಸಿಎ) ನಿವೇಶನಗಳನ್ನು ವಿವಿಧ ಸಂಘ ಸಂಸ್ಥೆಗಳಿಗೆ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು. ಹಾಗೂ ಪ್ರಾಧಿಕಾರದಿಂದ ಈಗಾಗಲೇ ಮೂಲೆ/ಮಧ್ಯಂತರ ನಿವೇಶನಗಳನ್ನು ಇ-ಹರಾಜು ಮೂಲಕ ವಿಲೇವಾರಿ ಮಾಡಲು ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸಲಾಗಿರುತ್ತದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಸೂಡಾ ಆಯುಕ್ತರಾದ ವಿಶ್ವನಾಥ ಮುದಜ್ಜಿ, ಎಇಇ ಬಸವರಾಜಪ್ಪ ಹಾಜರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago