Categories: Shivamogga

ಕೋಟೆಗಂಗೂರು ಗ್ರಾ.ಪಂ. ಅಧ್ಯಕ್ಷ ಡಾ. ಡಿ.ಬಿ. ವಿಜಯಕುಮಾರ್ ಇನ್ನಿಲ್ಲ !

ಶಿವಮೊಗ್ಗ : ತಾಲ್ಲೂಕಿನ ಕೋಟಿಗಂಗೂರು ಗ್ರಾಮ ಪಂಚಾಯತಿ ಅಧ್ಯಕ್ಷ, ದೇವಕಾತಿಕೊಪ್ಪ (ಜಕಾತಿಕೊಪ್ಪ) ದ ಮುಖಂಡರು, ಶಿವಮೊಗ್ಗ ಗ್ರಾಮಾಂತರ ವೀರಶೈವ ಸಮಾಜದ ಅಧ್ಯಕ್ಷರೂ ಆದ ಡಾ. ಡಿ.ಬಿ. ವಿಜಯ ಕುಮಾರ್ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅವರಿಗೆ 64 ವರ್ಷ ವಯಸ್ಸಾಗಿತ್ತು. ಸರಳ ಸಜ್ಜನಿಕೆ ಹಾಗೂ ಎಲ್ಲರ ಜೀವನಾಡಿಯಾಗಿ ಸ್ಪಂದಿಸುತ್ತಿದ್ದ ವಿಜಯಕುಮಾರ್ (ಎಲ್ಲರ ಅಚ್ಚುಮೆಚ್ಚಿನ ವಿಜಯಣ್ಣ) ಅವರು ಪ್ರಸಕ್ತ ಕೋಟೆಗಂಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಇತ್ತೀಚೆಗಷ್ಟೆ ಗ್ರಾಪಂನ ನೂತನ ಕಟ್ಟಡದ ಕಾಮಗಾರಿ ಮುಗಿಸಿ ಉದ್ಘಾಟಿಸಿದ್ದರು.

ಜಾತಿ, ಮತ ಬೇಧವಿಲ್ಲದೇ, ಎಲ್ಲರೊಳಗೊಂದಾಗಿ ಇರುತ್ತಿದ್ದ ಅವರು ಎಂದೆಂದೂ ಲವಲವಿಕೆಯಿಂದ ಇರುತ್ತಿದ್ದರು. ಅವರು ತುಂಗಾತರಂಗ ದಿನಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾಗಿದ್ದರು.

ವಿಜಯಣ್ಣ ಅವರು ಪತ್ನಿ ಶೋಭಾ, ಇಬ್ಬರು ಪುತ್ರಿಯರು, ಸಹೋದರರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಇಂದು ಮಧ್ಯಾಹ್ನ 2 ಗಂಟೆಗೆ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂತಾಪ:
ವಿಜಯಣ್ಣ ಅವರ ನಿಧನಕ್ಕೆ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್, ದೇವಕಾತಿಕೊಪ್ಪ ಗ್ರಾಮಸ್ಥರು, ಗ್ರಾಪಂ ಬಳಗ, ವೀರಶೈವ ಸಮಾಜ, ತುಂಗಾತರಂಗ ಪತ್ರಿಕಾ ಬಳಗ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲೆಂದು ಪ್ರಾರ್ಥಿಸಿದ್ದಾರೆ.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

29 mins ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

3 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

4 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

9 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

10 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

23 hours ago