ಕೋಡೂರು ಗ್ರಾ‌‌.ಪಂ‌. ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್ ಕೆ.ವೈ. ನಿಧನ !

ರಿಪ್ಪನ್‌ಪೇಟೆ : ಕೋಡೂರು ಗ್ರಾ.ಪಂ‌‌. ಮಾಜಿ ಅಧ್ಯಕ್ಷ ಕರಿಗೆರಸು ನಿವಾಸಿ ಜಯಂತ್ ಕೆ.ವೈ. (50) ಹೃದಯಾಘಾತದಿಂದ ಸೋಮವಾರ ರಾತ್ರಿ 10:45ರ ಸುಮಾರಿಗೆ ನಿಧನರಾದರು.

ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಇವರು 2005ರಿಂದ ಕರಿಗೆರಸು ಕ್ಷೇತ್ರದಿಂದ ಸತತ ಮೂರು ಬಾರಿ ಕೋಡೂರು ಗ್ರಾ.ಪಂ.ಗೆ ಆಯ್ಕೆಯಾಗಿದ್ದರು. 2015 ರಲ್ಲಿ 5 ವರ್ಷಗಳ ಅವಧಿಗೆ ಕೋಡೂರು ಗ್ರಾಪಂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಜನಾನುರಾಗಿಯಾಗಿದ್ದ ಇವರು ಅಪಾರ ಸಂಖ್ಯೆಯ ಸ್ನೇಹ ವಲಯವನ್ನು ಹೊಂದಿದ್ದರು.

ಮೃತರು ತಾಯಿ, ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಸಹೋದರರು, ಇಬ್ಬರು ಸಹೋದರಿಯರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಸಾರ್ವಜನಿಕರ ಅಂತಿಮ ದರ್ಶನಕ್ಕೆ ಕರಿಗೆರಸುವಿನ ಅವರ ಸ್ವಗೃಹದಲ್ಲಿ ವ್ಯವಸ್ಥೆ ಮಾಡಲಾಗಿದೆ. ಮೃತರ ಅಂತ್ಯಕ್ರಿಯೆಯು ಮಂಗಳವಾರ ಸಂಜೆ ಅವರ ಜಮೀನಿನಲ್ಲಿ ನೆರವೇರಲಿದೆ ಎಂದು ತಿಳಿದು ಬಂದಿದೆ.

ಸಂತಾಪ :
ಜಯಂತ್ ರವರ ಅಕಾಲಿಕ ನಿಧನಕ್ಕೆ ಶಾಸಕ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ತಾಪಂ ಮಾಜಿ ಸದಸ್ಯ ಬಿ.ಜಿ. ಚಂದ್ರಮೌಳಿ, ಕೋಡೂರು ಗ್ರಾಪಂ ಅಧ್ಯಕ್ಷ ಉಮೇಶ್, ಉಪಾಧ್ಯಕ್ಷ ಸುಧಾಕರ್ ಹಾಗೂ ಗ್ರಾಪಂನ ಸರ್ವ ಸದಸ್ಯರು, ಪಿಡಿಒ, ಸಿಬ್ಬಂದಿ ವರ್ಗ ಮತ್ತಿತರರು ತೀವ್ರ ಸಂತಾಪ ಸೂಚಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

Malnad Times

Recent Posts

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

38 mins ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

1 hour ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

6 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

8 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

21 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

23 hours ago