ಶಿವಮೊಗ್ಗ : ತಾಲ್ಲೂಕು ಸಕ್ರೆಬೈಲ್ ಆನೆ ಬಿಡಾರದ ಬಳಿ ಇಂದು ಸಂಜೆ ಐದು ಗಂಟೆ ಸುಮಾರಿಗೆ ಖಾಸಗಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಖಾಸಗಿ ಬಸ್ಗೆ ಶಿವಮೊಗ್ಗದ ಕಡೆಯಿಂದ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಇನ್ನು ಖಾಸಗಿ ಬಸ್ ರಸ್ತೆಯ ಇನ್ನೊಂದು ಪಕ್ಕಕ್ಕೆ ಸರಿದು ನಿಂತಿದೆ.
ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. https://fb.watch/lzU5YN9NyL/?mibextid=ZbWKwL
ಆನೆ ಕ್ಯಾಂಪ್ ಗೂ ಮೊದಲು ಸಿಗುವ ಫಿಶ್ ಹೋಟೆಲ್ನ ಸಮೀಪ ಘಟನೆ ಸಂಭವಿಸಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರಿಗೂ ಗಾಯಗಳಾಗಿದ್ದು, ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ತಕ್ಷಣವೇ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರು ತೀರ್ಥಹಳ್ಳಿಗೆ ಹೋಗುತ್ತಿದ್ದು ತೀರ್ಥಹಳ್ಳಿ ಕಡೆಯಿಂದ ಖಾಸಗಿ ಬಸ್ ಶಿವಮೊಗ್ಗಕ್ಕೆ ಬರುತ್ತಿತ್ತು. ಇನ್ನೂ ಗಾಯಾಳುಗಳ ಗುರುತು ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…