ಖಾಸಗಿ ಶಾಲೆ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ; ಮಧು ಬಂಗಾರಪ್ಪ

0 224

ಶಿಕಾರಿಪುರ : ಮಾಜಿ ಮುಖ್ಮಮಂತ್ರಿ ದಿ|| ಎಸ್ ಬಂಗಾರಪ್ಪರವರು ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯರವರು ಯಾವುದೇ ಖಾಸಗಿ ಶಾಲೆಯಲ್ಲಿ ಶಿಕ್ಷಣ ಪಡೆಯದೆ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ರಾಜ್ಯದ ಉನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ. ಅದೇ ರೀತಿ ವಿದ್ಯಾರ್ಥಿಗಳು ಖಾಸಗಿ ಶಾಲೆಯ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದರೆ ಯಾವುದಾದರೂ ಉತ್ತಮ ಹುದ್ದೆಯನ್ನು ಪಡೆಯಬಹುದು ಎಂದು ವಿದ್ಯಾರ್ಥಿಗಳಿಗೆ ಸಾಕ್ಷರತಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಿವಿಮಾತು ಹೇಳಿದರು.

ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಸೋಮವಾರ ಸಚಿವರ ಹುಟ್ಟುಹಬ್ಬದ ಅಂಗವಾಗಿ ಬಂಗಾರಪ್ಪ ಅಭಿಮಾನಿ ಬಳಗದ ವತಿಯಿಂದ ರೈತರಿಗೆ ವಿವಿಧ ಬಗೆಯ ಸಸಿ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರಿ, ಅರೆ ಸರ್ಕಾರಿ ಹಾಗೂ ಅನುದಾನಿತ ಶಾಲೆ ಸೇರಿದಂತೆ ಒಟ್ಟು 76 ಸಾವಿರ ಶಾಲೆಗಳಿದ್ದು, ಇವುಗಳಲ್ಲಿ 56 ಲಕ್ಷಕ್ಕೂ ಹೆಚ್ಚಿನ  ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಸಮವಸ್ತ್ರ, ಪುಸ್ತಕ, ಹಾಲು, ಮೊಟ್ಟೆ, ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಬಡ ವಿದ್ಯಾರ್ಥಿಗಳಿಗೆ ಸರ್ಕಾರ ಕೋಟ್ಯಂತರ ಹಣ ಖರ್ಚು ಮಾಡುತ್ತಿದೆ. ಶಾಲಾ ಕೊಠಡಿಗಳು‌ ಮತ್ತು ಶಿಕ್ಷರ ಕೊರತೆಯಿದ್ದು ಅವುಗಳನ್ನು ಹಂತ ಹಂತವಾಗಿ ಸರಿ ದೂಗಿಸಲಾಗುವುದು. ಅಲ್ಲದೇ ಮಾಜಿ ಮುಖ್ಮಮಂತ್ರಿ ದಿವಂಗತ ಎಸ್ ಬಂಗಾರಪ್ಪರವರು ಮತ್ತು ಹಾಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರವರನ್ನೊಳಗೊಂಡಂತೆ ಅನೇಕ ಉನ್ನತ ಹುದ್ದೆಯನ್ನು ಅಲಂಕರಿಸಿದವರು. ಯಾವುದೇ ಖಾಸಗಿ ಶಾಲೆಯಲ್ಲಿ ಶಿಕ್ಷಣ ಪಡೆಯದೆ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ರಾಜ್ಯದ ಮತ್ತು ದೇಶದ ಉನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ. ಅದೇರೀತಿ ವಿದ್ಯಾರ್ಥಿಗಳು ಖಾಸಗಿ ಶಾಲೆಯ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದರೆ ಮುಂದಿನ ದಿನಗಳಲ್ಲಿ ಯಾವುದಾದರೂ ಉತ್ತಮ ಹುದ್ದೆಯನ್ನು ಪಡೆಯಬಹುದು. ಇಂತಹ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಪ್ರಸಕ್ತ ಸಾಲಿನಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಒತ್ತಡ ಕಡಿಮೆಗೊಳಿಸಲು 3 ಹಂತದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ್ದು, ಈ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಯಾವ ಪರಿಕ್ಷೆಯಲ್ಲಿ ಅತಿ ಹೆಚ್ಚಿನ ಅಂಕ ಪಡೆಯುತ್ತಾರೋ ಅದನ್ನು ಗಣನೆಗೆ ತೆಗೆದುಕೊಂಡು ಅವರಿಗೆ ಉತ್ತೀರ್ಣಗೊಳಿಸಲಾಗುವುದು ಎಂದರು.

ಬಿಜೆಪಿಗರು ರಾಮ ಮಂದಿರದ ನಿರ್ಮಾಣವಾಗಿದೆ ಎಂದು ದೇಶದಲ್ಲಿ ರಾಮನ ಹೆಸರಲ್ಲಿ ಮತ ಕೇಳಲು ಹೊರಟಿದ್ದಾರೋ ಈ ಕೆಲಸವನ್ನು 32 ವರ್ಗಗಳ ಹಿಂದೆಯೇ ಬಂಗಾರಪ್ಪರವರು ಆರಾಧನಾ ಯೋಜನೆಯನ್ನು ಜಾರಿಗೆ ತಂದು ರಾಜ್ಯದ ಅನೇಕ ದೇವಾಲಯಗಳಲ್ಲಿ ದೀಪ ಬೆಳಗಿಸುವ ಮಾಡಲಾಗಿದೆ. ರಾಜ್ಯ ಸರ್ಕಾರದ 5 ಗ್ಯಾರಂಟಿ  ಯೋಜನೆ ಬಗ್ಗೆ ಟೀಕಿಸುತ್ತಿರುವ ಬಿಜೆಪಿಯವರು ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಮತ್ತು ಯುವನಿಧಿ ಸೌಲಭ್ಯಗಳನ್ನ ಅವರೇ ಹೆಚ್ಚಿನ ಫಲಾನುಭವಿಗಳಾಗಿದ್ದಾರೆ ಎಂದು ಟೀಕಿಸಿದ ಅವರು, ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಸರಬರಾಜು ಆಗುತ್ತಿದೆ ಎಂದರೆ ಅದು ಬಂಗಾರಪ್ಪರವರ ಕೊಡುಗೆ. ಇದನ್ನು ಯಾರಿಂದಲೂ ರದ್ದು ಪಡಿಸಲಾಗುವುದಿಲ್ಲ. ತಾಲ್ಲೂಕಿನ ನೀರಾವರಿ ಯೋಜನೆಗಾಗಿ ಎರಡು ಬಾರಿ ಪಾದಯಾತ್ರೆ ನಡೆಸಿ ದರ ಫಲವಾಗಿ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ನೀರಾವರಿ ಸಚಿವರಾಗಿದ್ದ ಡಿ ಕೆ ಶಿವಕುಮಾರ್ ರವರಿಂದ ಏತ ನೀರಾವರಿಗೆ ಹಣ ಬಿಡುಗಡೆ ಮಾಡಲಾಯಿತು.

ರಾಜ್ಯದಿಂದ ಕೇಂದ್ರಕ್ಕೆ ನಾಲ್ಕೂವರೆ ಲಕ್ಷ ಕೋಟಿ ಜನತೆಯ ತೆರಿಗೆ ಹಣ ಹೋಗುತ್ತಿದ್ದು ಅದರ ಫಲವಾಗಿ ಕೇಂದ್ರದಿಂದ ಬಂದಿದ್ದು ಒಂದೂವರೆ ಲಕ್ಷ ಕೋಟಿ ಮಾತ್ರ ಇನ್ನುಳಿದ ಹಣ ನಮಗೆ ವಾಪಾಸ್ ಬರಬೇಕಲ್ಲವೇ ? ಎಂದು ಪ್ರಶ್ನಸಿದ ಅವರು, ಜಿಲ್ಲೆಯಲ್ಲಿ ವಿಮಾನ ನಿಲ್ದಾಣವನ್ನು ಇವರ ಮನೆಯಿಂದ ತಂದು ನಿರ್ಮಾಣ ಮಾಡಿಲ್ಲ ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪರವರಿಗೆ ದಿವಂಗತ ಎಸ್ ಬಂಗಾರಪ್ಪ ಅಭಿಮಾನಿ ಬಳಗದಿಂದ ಸನ್ಮಾನಿಸಲಾಯಿತಲ್ಲದೇ, ಅನೇಕ ರೈತರಿಗೆ ಶ್ರೀಗಂಧ, ಸಾಗುವಾನಿ, ತೆಂಗಿನ ಸಸಿ ವಿತರಿಸಲಾಯಿತಲ್ಲದೆ, ಸಚಿವರಿಂದ ಕೇಕ್ ಕತ್ತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡ ರವಿ ಕುಮಾರ್, ಅನಿತಾ ಕುಮಾರಿ, ಕೆಪಿಸಿಸಿ ಸದಸ್ಯ ಗೋಣಿ ಮಾಲತೇಶ, ಭದ್ರ ಅಚ್ಚುಕಟ್ಟು ಪ್ರಾಧಿಕಾರದ ಮಾಜಿ ಹಾಗೂ ಜಿಲ್ಲಾ ಕಿಸಾನ್ ಸೆಲ್ ಅಧ್ಯಕ್ಷ ನಗರದ ಮಹಾದೇವಪ್ಪ, ತಾಲ್ಲೂಕು ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ಮಹೇಶ್ ಹುಲ್ಮಾರ್, ಶಿರಾಳಕೊಪ್ಪ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಕೌಲಿ ಗಂಗಾಧರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್ ಬಿ ನಾಗರಾಜ್ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಶಿವಕುಮಾರ್, ಪುರಸಭಾ ಸದಸ್ಯರಾದ ಉಳ್ಳಿ ದರ್ಶನ್, ಗೋಣಿ ಪ್ರಕಾಶ್, ರೋಷನ್, ಮುಖಂಡರಾದ ರಂಗನಾಥ್, ರಾಘವೇಂದ್ರ ನಾಯ್ಕ್, ವೀರೇಶ್, ಬಡಗಿ ಪಾಲಾಕ್ಷಪ್ಪ, ಗಾಯಿತ್ರಮ್ಮ, ಸೌಭಾಗ್ಯಮ್ಮ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave A Reply

Your email address will not be published.

error: Content is protected !!