Categories: Shivamogga

ಗಡಿಬಿಡಿಯಲ್ಲಿ ಬಿವೈಆರ್ ಶಿಷ್ಟಚಾರ ಉಲಂಘಿಸಿದ್ದಾರೆ ; ಆಯನೂರು ಮಂಜುನಾಥ್

ಶಿವಮೊಗ್ಗ : ಸಂಸದ ಬಿ.ವೈ.ರಾಘವೇಂದ್ರರವರು (B.Y Raghavendra) ಗಡಿಬಿಡಿಯಲ್ಲಿ ಶಿಷ್ಟಚಾರವನ್ನು ಉಲಂಘಿಸಿ ಬೈಪಾಸ್ ರಸ್ತೆಯ ಸೇತುವೆಯನ್ನು ಉದ್ಘಾಟಿಸಿದ್ದಾರೆ. ಇದು ಸರ್ಕಾರಿ ಕಾರ್ಯಕ್ರಮವಾಗದೆ ಬಿಜೆಪಿ ಕಾರ್ಯಕ್ರಮವಾಗಿದೆ ಎಂದು ಕೆ.ಪಿ.ಸಿ.ಸಿ.ವಕ್ತಾರ ಆಯನೂರು ಮಂಜುನಾಥ್ (Ayanuru Manjunath) ಆರೋಪಿಸಿದರು.


ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಸದ ಬಿ.ವೈ.ರಾಘವೇಂದ್ರರವರು ಇತ್ತೀಚೆಗೆ ಕಾಮಗಾರಿಗಳು ಮುಗಿಯದೇ ಮತ್ತು ಮುಗಿದಿದೆ ಎಂದು ಅಧಿಕಾರಿಗಳ ಪ್ರಮಾಣ ಪತ್ರ ಇಲ್ಲದೆ ಗಡಿಬಿಡಿಯಲ್ಲಿ ತಾವೇ ಟೇಪು ಕಟ್ಟು ಮಾಡಿ ಉದ್ಘಾಟನೆ ಮಾಡುತ್ತಾರೆ. ಇಂತಹ ಉದ್ಘಾಟನ ಕಾರ್ಯಕ್ರಮಗಳಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಗೊತ್ತಿರುವುದಿಲ್ಲ. ಕೆಲವು ಬಿಜೆಪಿ ಮುಖಂಡರನ್ನು ಹಿಂಬಾಲಕರನ್ನು ಕರೆದುಕೊಂಡು ಹೋಗಿ ಉದ್ಘಾಟನೆ ಮಾಡುವ ಈ ಪರಿ ಅತ್ಯಂತ ಕೆಟ್ಟ ಸಂಸ್ಕೃತಿಯಾಗಿದೆ ಎಂದು ಟೀಕಿಸಿದರು.


ನಿನ್ನೆ ಕೂಡ ಸೇತುವೆಯನ್ನು ಸಂಸದರು ಉದ್ಘಾಟಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಬಿಜೆಪಿಯ ಶಾಸಕರುಗಳಾದ ರುದ್ರೇಗೌಡರಾಗಲಿ, ಅರುಣ್‌ರವರಾಗಲಿ, ಚನ್ನಬಸಪ್ಪನವರಾಗಲಿ ಕರೆದಿಲ್ಲ. ಅಧಿಕಾರಿಗಳನ್ನು ಕೇಳಿದರೆ, ನಮಗೆ ಗೊತ್ತೇ ಇಲ್ಲ ಎನ್ನುತ್ತಾರೆ. ಇದು ಸರ್ಕಾರದ ಕಾರ್ಯಕ್ರಮವಲ್ಲವೇ, ಅಧಿಕಾರಿಗಳು ಈ ಕಾರ್ಯಕ್ರಮವನ್ನು ರೂಪಿಸಬೇಕು. ಅದನ್ನು ಬಿಟ್ಟು ಕೇವಲ ಕೆಲವು ಬಿಜೆಪಿ ಮುಖಂಡರನ್ನು ಇಟ್ಟುಕೊಂಡು ಈ ರೀತಿ ಉದ್ಘಾಟನೆಗಳನ್ನು ಚುನಾವಣೆಯ ಹಿನ್ನೆಲೆಯಲ್ಲಿ ಮಾಡುತ್ತಾ ಹೊರಟಿರುವುದು ಸರಿಯಲ್ಲ ಎಂದರು.


ಇಡೀ ಶಿವಮೊಗ್ಗದಲ್ಲಿ ನಡೆಯುತ್ತಿರುವ ಕಾಮಗಾರಿಗಳೆಲ್ಲವೂ ಬಿಜೆಪಿ ನಾಯಕರ, ಮನೆಗಳ ಇಲ್ಲವೇ ಆಸ್ತಿಗಳ ಸುತ್ತ ತಿರುಗಿ ಅತ್ಯಂತ ಶೀಘ್ರವಾಗಿ ನಡೆಯುತ್ತವೆ. ರಿಂಗ್‌ರೋಡ್‌ ಆಗಲಿ, ರಸ್ತೆಗಳಾಗಲಿ, ಬಿಜೆಪಿ ನಾಯಕರಿಗೆ ಅನುಕೂಲವಾಗುವಂತೆ ರೂಪುಗೊಳ್ಳುತ್ತವೆ ಎಂದು ಆರೋಪಿಸಿದ ಅವರು, ಈ ಕಾಮಗಾರಿಗಳು ಪೂರ್ಣ ಮುಗಿಯದೇ ಇದ್ದರೂ ಕೂಡ ಏಕೆ ಅವಸರದಿಂದ ಉದ್ಘಾಟನೆ ಮಾಡುತ್ತಾರೋ ಗೊತ್ತಿಲ್ಲ . ಕಾಟಾಚಾರಕ್ಕೆ ಯಾವುದು ಉದ್ದೇಶದಿಂದ ಶಿಷ್ಟಚಾರಗಳನ್ನು ಉಲ್ಲಂಘಿಸಿ ಮಾಡುವ ಇಂತಹ ಕೆಲಸಗಳು ಸಾರ್ವಜನಿಕರಿಗೆ ಸಂಶಯ ತರುತ್ತವೆ. ಇವರೇನು ತಮ್ಮ ಮನೆಯಿಂದ ದುಡ್ಡು ಹಾಕಿ ಕಾಮಗಾರಿಗಳನ್ನು ಮಾಡಿರುವುದಿಲ್ಲ. ಇದು ಜನರ ದುಡ್ಡು, ಜನರ ಪಾಲ್ಗೊಳ್ಳುವಿಕೆ ಮುಖ್ಯವಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ, ಸರ್ಕಾರಿಯ ಯಾವುದೇ ಅಧಿಕಾರಿಗಳನ್ನು ಇದರಲ್ಲಿ ಪಾಲ್ಗೊಳ್ಳುವಂತೆ ನಡೆದುಕೊಂಡಿಲ್ಲ ಎಂದರು.


ಸಿಗಂದೂರು ಸೇತುವೆಗೆ ಬಿಜೆಪಿಯ ರಾಷ್ಟ್ರೀಯ ನಾಯಕ ಗಡ್ಕಾರಿರವರೇ ಶಂಕು ಸ್ಥಾಪನೆ ಮಾಡಿದ್ದರು. ಆ ಕೆಲಸ ಎಲ್ಲಿ ಸಾಗಿದೆ ಅಲ್ಲೇಕೆ ವೇಗವಾಗಿ ಮಾಡುತ್ತಿಲ್ಲ. ತಾಳಗುಪ್ಪದಿಂದ ಲಯನ್ ಸಫಾರಿಯವರೆಗೆ 4 ಪಥ ರಸ್ತೆಗೆ 650 ಕೋಟಿ ರೂ. ಎಂದು ಹೇಳಲಾಗುತ್ತಿದೆ. ಹಿಂದೆ 6 ಸಾವಿರ ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ಎಂದಿದ್ದರು. ಹೀಗೇ ಒಂದೊಂದು ಕಾಮಗಾರಿಗೆ ಪದೇ ಪದೇ ಪ್ರತ್ಯೇಕವಾಗಿ ಹೆಸರಿಸುತ್ತ ತಾವು ಬಹಳ ಸಂಖ್ಯೆಯಲ್ಲಿ ಕಾಮಗಾರಿಗಳನ್ನು ಮಾಡಿರುವೆ ಎಂದು ಸಂಸದರು ಹೇಳಲು ಹೊರಟಂತೆ ಇದೆ ಎಂದರು.


ಪತ್ರಿಕಾಗೋಷ್ಠಿಯಲ್ಲಿ ಕೆ.ಪಿ.ಸಿ.ಸಿ. ಸದಸ್ಯ ವೈ.ಹೆಚ್.ನಾಗರಾಜ್ ಪ್ರಮುಖರಾದ ಹಿರಣ್ಣಯ್ಯ, ಜಿ.ಪದ್ಮನಾಬ್, ಶಿ.ಜು.ಪಾಶ, ಧೀರರಾಜ್ ಹೊನ್ನಾವಿಲೆ, ಲೋಕೇಶ್, ಆಯನೂರು ಸಂತೋಷ್, ಕೃಷ್ಣ, ಐಡಿಯಲ್ ಗೋಪಿ ಇದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago