Categories: Shivamogga

ಗಣರಾಜ್ಯೋತ್ಸವ ದಿನಾಚರಣೆ, ಸಕಲ ಸಿದ್ದತೆಗೆ ಶಿವಮೊಗ್ಗ ಡಿಸಿ ಸೂಚನೆ


ಶಿವಮೊಗ್ಗ : ಜನವರಿ 26 ರಂದು ನಗರದ ಡಿಎಆರ್ ಕವಾಯತು ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ದಿನಾಚರಣೆ (Republic Day) ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ (Shivamogga DC) ಡಾ.ಆರ್.ಸೆಲ್ವಮಣಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ವಿತರಿಸಲು ಕ್ರಮವಹಿಸುವಂತೆ ಅಪರ ಜಿಲ್ಲಾಧಿಕಾರಿಗಳು, ಪಾಲಿಕೆ ಆಯುಕ್ತರು, ಜಿ.ಪಂ ಉಪಕಾರ್ಯದರ್ಶಿಗಳು ಹಾಗೂ ತಹಶೀಲ್ದಾರರಿಗೆ ತಿಳಿಸಿದರು.

ಪೆರೇಡ್ ಹಾಗೂ ಸುತ್ತಮುತ್ತಲಿನ ಜಾಗವನ್ನು ಮುಂಚಿತವಾಗಿ ಸ್ವಚ್ಚಗೊಳಿಸಿ ಸಿದ್ದಗೊಳಿಸುವುದು, ನೀರಿನ ವ್ಯವಸ್ಥೆ, ಆಸನ ವ್ಯವಸ್ಥೆ, ವೇದಿಕೆ ಸಿದ್ದತೆ, ಸೌಂಡ್ ಸಿಸ್ಟಂ, ವೇದಿಕೆ ಅಲಂಕಾರ ಮಾಡುವಂತೆ ಪಾಲಿಕೆ, ಸಶಸ್ತ್ರ ಮೀಸಲು ಪಡೆ, ಲೋಕೋಪಯೋಗಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ಕ್ರೀಡಾ ಯುವಜನ ಸಬಲೀಕರಣ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು.

ಸರ್ಕಾರದ ಸುತ್ತೋಲೆಯಂತೆ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮತ್ತು ಕಚೇರಿಗಳಲ್ಲಿ ಪ್ರತಿ ವರ್ಷದಂತೆ ಧ್ವಜಾರೋಹಣಕ್ಕೆ ಸಿದ್ದತೆ ಮಾಡಿಕೊಳ್ಳಬೇಕು.

ಸ್ವಾಗತ ಕಮಾನು ಸಿದ್ದತೆ, ಸೂಕ್ತ ಪೊಲೀಸ್ ಭದ್ರತೆ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುದೀಪ ಅಲಂಕಾರ ವ್ಯವಸ್ಥೆ, ಆಂಬುಲೆನ್ಸ್, ಅಗ್ನಿಶಾಮಕ ವಾಹನದ ವ್ಯವಸ್ಥೆ, ಮಕ್ಕಳಿಗೆ ಸಿಹಿ ಹಂಚಿಕೆ ಹಾಗೂ ಆಸ್ಪತ್ರೆ ಮತ್ತು ಇತರೆ ಸಂಸ್ಥೆಗಳಲ್ಲಿ ಹಣ್ಣು, ಸಿಹಿ ಹಂಚಿಕೆ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಿದರು.

ಗಣರಾಜ್ಯೋತ್ಸವದ ಪ್ರಮುಖ ಆಕರ್ಷಣೆಯಾದ ಪೆರೇಡ್ ಪ್ರದರ್ಶನವನ್ನು ಪೊಲೀಸ್ ಇಲಾಖೆ, ಕೆ.ಎಸ್‍.ಆರ್‍.ಪಿ, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ ಸೇವಾದಳ, ಎನ್‍ಸಿಸಿ, ಅಗ್ನಿಶಾಮಕ ದಳ, ಹೋಂಗಾರ್ಡ್ಸ್ ಹಾಗೂ ವಿದ್ಯಾರ್ಥಿಗಳಿಂದ ಏರ್ಪಡಿಸಲು ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಿದರು.

ಧ್ವಜಾರೋಹಣದ ನಂತರ ವಿದ್ಯಾರ್ಥಿಗಳಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಿ, ನಿಗದಿತ ವೇಳೆಯಲ್ಲಿ ಮುಗಿಯುವಂತೆ ಕ್ರಮ ಕೈಗೊಳ್ಳಲು ಡಿಡಿಪಿಐ ಮತ್ತು ಬಿಇಓ ಅವರಿಗೆ ಸೂಚನೆ ನೀಡಿದರು.

ಗಣರಾಜ್ಯೊತ್ಸವ ಆಚರಣೆಯ ಪೂರ್ವಸಿದ್ದತೆಗಳನ್ನು ಕೈಗೊಳ್ಳಲು ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಉಪ ಸಮಿತಿ ರಚಿಸಿಲು ತೀರ್ಮಾನಿಸಿದ ಅವರು ಉಪವಿಭಾಗಾಧಿಕಾರಿಗಳು ಗಣರಾಜ್ಯೋತ್ಸವದ ಪೂರ್ವಸಿದ್ದತೆಯನ್ನು ಪರಿಶೀಲಿಸುವಂತೆ ತಿಳಿಸಿದರು. ಹಾಗೂ ಅಂದು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಭಾಗವಹಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago