ಗಾಂಜಾ ಮಾರಾಟ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್ !

0 51

ಭದ್ರಾವತಿ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಬಂಧಿಸಿದ್ದಾರೆ.

ಆ. 11 ರಂದು ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ.ಕೆ ರಸ್ತೆ ಫ್ಲೈ ಓವರ್ ಕೆಳಭಾಗದಲ್ಲಿ ಯಾರೋ ಮೂವರು ನಿಂತುಕೊಂಡು ಅಕ್ರಮವಾಗಿ ಗಾಂಜಾವನ್ನು ಸಾರ್ವಜನಿಕರಿಗೆ ಮರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳಾದ ಭದ್ರಾವತಿ ನಿವಾಸಿಗಳಾದ ಮುಬಾರಕ್ @ ಡಿಚ್ಚಿ (27), ಬಾಬು (20) ಮತ್ತು ಪರ್ವಿಜ್ (25) ರವರುಗಳನ್ನು ಬಂಧಿಸಿ ಆರೋಪಿಗಳಿಂದ ಅಂದಾಜು 50 ಸಾವಿರ ರೂ. ಮೌಲ್ಯದಒಟ್ಟು 1 ಕೆಜಿ 408 ಗ್ರಾಂ ತೂಕದ ಒಣ ಗಾಂಜಾ ಮತ್ತು 300  ರೂ. ನಗದನ್ನು ಅಮಾನತು ಪಡಿಸಿಕೊಂಡು ಆರೋಪಿಗಳ ವಿರುದ್ಧ ಕಲಂ 20(b)(ii)(b) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಈ ದಾಳಿಯಲ್ಲಿ ಜಿತೇಂದ್ರ ಕುಮಾರ್ ದಯಾಮ, ಐಪಿಎಸ್, ಹಿರಿಯ ಸಹಾಯಕ ಪೊಲೀಸ್ ಅದೀಕ್ಷಕರು, ಭದ್ರಾವತಿ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ಚಂದ್ರಶೇಖರ್ ನಾಯ್ಕ್, ಪಿಎಸ್ಐ ಭದ್ರಾವತಿ ಹಳೆ ನಗರ ಪೊಲೀಸ್ ಠಾಣೆ ರವರ ನೇತೃತ್ವದ ಸಿಬ್ಬಂದಿಗಳನ್ನೊಳಗೊಂಡ ಪಾಲ್ಗೊಂಡಿತ್ತು.

Leave A Reply

Your email address will not be published.

error: Content is protected !!