Categories: Shivamogga

ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ಆರೋಪಿಗಳ ಬಂಧನ !


ಶಿವಮೊಗ್ಗ: ಹೊಳೆಹೊನ್ನೂರಿನ ಗಾಂಧಿ ಸರ್ಕಲ್‍ನಲ್ಲಿ ಆ.20 ರ ತಡರಾತ್ರಿಯಲ್ಲಿ ಗಾಂಧೀಜಿಯವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ಇಂದು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಹೊಳೆಹೊನ್ನೂರು ಗಾಂಧಿ ಸರ್ಕಲ್‍ನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸಗೈದ ಆರೋಪಿಗಳ ಕುರಿತು ಮಾಹಿತಿ ನೀಡಿ ಮಾತನಾಡಿದರು.
ಆರೋಪಿಗಳು ಚಿತ್ರದುರ್ಗ ಜಿಲ್ಲೆಯ ಪಂಡರಹಳ್ಳಿಯ ಗಣೇಶ್ (24) ಮತ್ತು ವಿನಯ್ (25) ಇವರು ಕೃಷಿ ಮತ್ತು ಕೂಲಿ ಕೆಲಸ ಮಾಡಿಕೊಂಡಿರುತ್ತಾರೆ. ಈ ಆರೋಪಿಗಳು ಆ.20 ರ ರಾತ್ರಿ ಜೋಗ ಜಲಪಾತಕ್ಕೆ ತೆರಳುವ ಮಾರ್ಗಮಧ್ಯೆ ಈ ಕೃತ್ಯವನ್ನು ಎಸಗಿದ್ದಾಗಿ ಒಪ್ಪಿಕೊಂಡಿರುತ್ತಾರೆ.


ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು 50 ಜನ ಪೊಲೀಸರ ವಿಶೇಷ ತಂಡ ರಚನೆ ಮಾಡಿ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಅಧಿಕಾರಿ/ಸಿಬ್ಬಂದಿಗಳು ಕ್ಷಿಪ್ರವಾಗಿ ಕಾರ್ಯೋನ್ಮುಖರಾಗಿ ಆರೋಪಿಗಳನ್ನು ಬಂಧಿಸಿ, ಉತ್ತಮ ಕೆಲಸ ಮಾಡಿದ್ದಾರೆ.


ಆರೋಪಿಗಳು ಯಾವ ಉದ್ದೇಶದಿಂದ ಈ ಕೃತ್ಯವನ್ನು ಎಸಗಿದ್ದಾರೆ ಮತ್ತು ಇತರೆ ಮಾಹಿತಿಯನ್ನು ಕಲೆ ಹಾಕಲು ತನಿಖೆ ಕೈಗೊಳ್ಳಲಾಗುವುದು. ಇವರು ತೆರಳುತ್ತಿದ್ದ ಬೈಕ್‍ನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.


ಸ್ಥಳೀಯರು, ಗ್ರಾಮಸ್ಥರು ಗಾಂಧಿ ಪ್ರತಿಮೆಯನ್ನು ಪುನಃ ಪ್ರತಿಷ್ಟಾಪಿಸುವ ಕುರಿತು ಮನವಿ ಮಾಡಿದ್ದು, ಈ ವಿಷಯವನ್ನು ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದರು.


ಸುದ್ದಿಗೋಷ್ಟಿಯಲ್ಲಿ ಎಎಸ್‍ಪಿ ಅನಿಲ್‍ಕುಮಾರ್ ಭೂಮರೆಡ್ಡಿ, ಡಿವೈಎಸ್‍ಪಿ ನಾಗರಾಜ್, ಇತರೆ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

22 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago