Categories: Shivamogga

ಗೀತಾ ಶಿವರಾಜ್‌ಕುಮಾರ್ ನಾಮಪತ್ರ ಸಲ್ಲಿಕೆ ಮೆರವಣಿಗೆ ವೇಳೆ ಎಲ್ಇಡಿ ಸ್ಕ್ರೀನ್ ಬಿದ್ದು ಗಾಯ, ಆಸ್ಪತ್ರೆಗೆ ಸಚಿವರ ಭೇಟಿ

ಶಿವಮೊಗ್ಗ: ಲೋಕಸಭಾ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ನಾಮ ಪತ್ರ ಸಲ್ಲಿಕೆ ಮೆರವಣಿಗೆ ವೇಳೆ ಭದ್ರಾವತಿ ತಾಲ್ಲೂಕಿನ ಮಾವಿನಕೆರೆ ಗ್ರಾಮದ ನಾಗರಾಜಪ್ಪ ಎಂಬುವವರು ಗಾಯಗೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಮೆರವಣಿಗೆಯನ್ನು ಬೃಹತ್‌ ಎಲ್‌ಇಡಿ ಪರದೆಗಳ ಮೂಲಕ ನೇರ ಪ್ರಸಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಕ್ಯಾಂಟರ್‌ ಲಾರಿಗಳಲ್ಲಿ ಈ ಎಲ್‌ಇಡಿ ಪರದೆಗಳನ್ನು ಇರಿಸಲಾಗಿತ್ತು. ಗಾಂಧಿ ಬಜಾರ್‌ನಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಎಲ್‌ಇಡಿ ಪರದೆ ಕೆಳಗೆ ಬಿದ್ದಿದೆ. ಈ ವೇಳೆ ವಾಹನದ ಪಕ್ಕದಲ್ಲಿ ನಡೆದು ಸಾಗುತ್ತಿದ್ದ ಕೆಲವರು ಗಾಯಗೊಂಡಿದ್ದರು. ಗಾಯಳುಗಳನ್ನು ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಷಯ ತಿಳಿದ ಬಳಿಕ ಸಚಿವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ಕಲಗೋಡು ರತ್ನಾಕರ್, ಜಿ.ಡಿ.ಮಂಜುನಾಥ ಇದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago