Categories: Shivamogga

ಗೃಹಲಕ್ಷ್ಮಿ ಯೋಜನೆ ಚಾಲನಾ ಕಾರ್ಯಕ್ರಮ ; ಸಿದ್ದತೆಗೆ ಡಿಸಿ ಸೂಚನೆ


ಶಿವಮೊಗ್ಗ: ಮಹಿಳೆಯರ ಆರ್ಥಿಕ ಸಬಲೀಕರಣ ಧ್ಯೇಯದೊಂದಿಗೆ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ರೂ.2000 ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿಗಳು ಆ.27 ರಂದು ಬೆಳಗಾವಿಯಲ್ಲಿ ಚಾಲನೆ ನೀಡುತ್ತಿದ್ದು, ಏಕಕಾಲದಲ್ಲಿ ಎಲ್ಲ ಗ್ರಾ.ಪಂ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಇಂದು ಜಿಲ್ಲಾಡಳಿತ ಕಚೇರಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ತಹಶೀಲ್ದಾರರರು, ಇಓ ಗಳು, ಸ್ಥಳೀಯ ಸಂಸ್ಥೆ ಮುಖ್ಯಸ್ಥರು, ಸಿಡಿಪಿಓಗಳೊಂದಿಗೆ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮ ಕುರಿತು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಆ.27 ರಂದು ಬೆಳಗಾವಿಯಿಂದ ಮುಖ್ಯಮಂತ್ರಿಗಳು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದು, ಪ್ರತಿ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನ ಹಾಗೂ ನಗರ ಸ್ಥಳೀಯ ಸಂಸ್ಥೆ ವಾರ್ಡ್‍ಗಳಲ್ಲಿ ಈ ಕಾರ್ಯಕ್ರಮವನ್ನು ಏಕ ಕಾಲದಲ್ಲಿ ಹಮ್ಮಿಕೊಳ್ಳಲಾಗುವುದು. ಹಾಗೂ ಬೆಳಗಾವಿ ಕಾರ್ಯಕ್ರಮದ ನೇರ ಪ್ರಸಾರವನ್ನು ಎಲ್ಲ ಗ್ರಾ.ಪಂ, ಸ್ಥಳೀಯ ಸಂಸ್ಥೆಗಳಲ್ಲಿ ಮಾಡಲಾಗುವುದು.
ಆದ್ದರಿಂದ ಗ್ರಾಮ ಪಂಚಾಯ್ತಿ ಹಾಗೂ ಸ್ಥಳೀಯ ಸಂಸ್ಥೆಗಳ ವಾರ್ಡ್‌ಗಳಲ್ಲಿ ಬೆಳಗಾವಿ ಕಾರ್ಯಕ್ರಮದ ನೇರ ಪ್ರಸಾರಕ್ಕೆ ಅಗತ್ಯವಾದ ಎಲ್‍ಇಡಿ ಪರದೆ ಅಥವಾ ಒಂದು ಟಿವಿ ವ್ಯವಸ್ಥೆ ಮಾಡಿಕೊಳ್ಳಬೇಕು. ಫಲಾನುಭವಿಗಳು ಮತ್ತು ಸಾರ್ವಜನಿಕರನ್ನು ಕಾರ್ಯಕ್ರಮಕ್ಕೆ ಸೇರಿಸಿ, ಸರ್ಕಾರಿ ಕಟ್ಟಡಗಳು ಅಥವಾ ಸಭಾ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಬೇಕು. ಈ ಸಮಾರಂಭಕ್ಕೆ ಅಗತ್ಯವಾದ ಮೂಲಭೂತ ಸೌಕರ್ಯಗಳು ಸೇರಿಂದತೆ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.


ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಅತಿಥಿಗಳಾಗಿ ಭಾಗವಹಿಸಲು ಕ್ರಮ ಕೈಗೊಳ್ಳಬೇಕು. ಪ್ರತಿ ಗ್ರಾ.ಪಂ ಗಳಲ್ಲಿ, ಮಹಾನಗರಪಾಲಿಕೆ ಹಾಗೂ ನಗರಸಭೆಗಳಲ್ಲಿ ಪ್ರತಿ ವಾರ್ಡುಗಳು ಹಾಗೂ ಪುರ ಸಭೆಗಳಲ್ಲಿ ಫಲಾನುಭವಿಗಳ ಸಂಖ್ಯೆಗನುಗುಣವಾಗಿ 3 ರಿಂದ 4 ವಾರ್ಡ್‌ಗಳಲ್ಲಿ ಕಾರ್ಯಕ್ರಮ ಆಯೋಜನೆಗೆ ಕ್ರಮ ವಹಿಸಬೇಕು. ಹಾಗೂ ಮಳೆಗಾಲವಾದ್ದರಿಂದ ಈ ಅಂಶವನ್ನು ಗಮನದಲ್ಲಿರಿಸಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು.


ತಾಲ್ಲೂಕು ಪಂಚಾಯ್ತಿ ಹಾಗೂ ಗ್ರಾ.ಪಂ ಗಳಲ್ಲಿ ಕಾರ್ಯಕ್ರಮದ ಮೇಲ್ವಿಚಾರಣೆಗಾಗಿ ಈಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು. ನೋಡಲ್ ಅಧಿಕಾರಿಗಳು ಕಾರ್ಯಕ್ರಮದ ಸಿದ್ದತೆಗಳನ್ನು ಗಮನಿಸಿ ವರದಿ ಸಲ್ಲಿಸಬೇಕೆಂದರು.


ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಮಾತನಾಡಿ, ಆ.27 ರ ಈ ಕಾರ್ಯಕ್ರಮದ ಕುರಿತು ಜಿ.ಪಂ ಯೋಜನಾ ನಿರ್ದೇಶಕರು ಗ್ರಾ.ಪಂ ವಾರು ಉಸ್ತುವಾರಿ ನೋಡಿಕೊಳ್ಳಬೇಕು. ಹೊಸನಗರ, ತೀರ್ಥಹಳ್ಳಿ, ಸಾಗರ ಗಳಲ್ಲಿ ಏನಾದರೂ ನೆಟ್‌ವರ್ಕ್ ಸಮಸ್ಯೆಗಳಿದ್ದರೆ ಸರಿಪಡಿಸಿಕೊಂಡು ಈಗಿನಿಂದಲೇ ಸಿದ್ದತೆ ಆರಂಭಿಸಬೇಕು ಹಾಗೂ ಎಲ್ಲ ತಾಲ್ಲೂಕುಗಳ ಸಿಡಿಪಿಓ ಗಳು ಕಾರ್ಯಕ್ರಮದ ತಯಾರಿ ಕುರಿತು ಮೇಲ್ವಿಚಾರಣೆ ನಡೆಸಿ ಈ ಬಗ್ಗೆ ವರದಿ ಸಲ್ಲಿಸಬೇಕು. ಪ್ರತಿ ಗ್ರಾ.ಪಂ ಯಲ್ಲಿ ಫಲಾನುಭವಿಗಳು, ಸ್ವಸಹಾಯ ಸಂಘಗಳ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಕಾರ್ಯಕ್ರಮಕ್ಕೆ ಹಾಜರಾಗುವಂತೆ ಕ್ರಮ ವಹಿಸಬೇಕೆಂದು ಸೂಚಿಸಿದರು.


ಸಭೆಯಲ್ಲಿ ತಹಶೀಲ್ದಾರ್ ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಸಂತೋಷಕುಮಾರ್, ಸಿಡಿಪಿಓ ಚಂದ್ರಪ್ಪ, ತಾಲ್ಲೂಕುಗಳ ತಹಶೀಲ್ದಾರರು, ಇಓ, ಸಿಡಿಪಿಓ, ಸ್ಥಳೀಯ ಸಂಸ್ಥೆ ಮುಖ್ಯಸ್ಥರು ಹಾಜರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago