Thirthahalli | ಗ್ರಾ.ಪಂ.ಅಧ್ಯಕ್ಷರ ಅಧಿಕಾರ ಮೊಟಕು ಪ್ರಯತ್ನ ; 15ನೇ ಹಣಕಾಸಿನ ಕ್ರಿಯಾ ಯೋಜನೆ ಮಂಜೂರಾತಿಗೆ ಅಡ್ಡಿ !

ತೀರ್ಥಹಳ್ಳಿ : ಸರ್ಕಾರ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆಯ ಅಧಿಕಾರಿಗಳು ಹಂತ-ಹಂತವಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರುಗಳ ಅಧಿಕಾರವನ್ನು ಮೊಟಕುಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಗ್ರಾಮ ಪಂಚಾಯತ್ ಒಕ್ಕೂಟದ ಅಧ್ಯಕ್ಷ ಅನಿಲ್ ತಿಳಿಸಿದ್ದಾರೆ.

ಇದೀಗ 15ನೇ ಹಣಕಾಸು ಕ್ರಿಯಾಯೋಜನೆಯ ಮಂಜೂರಾತಿಗೆ ಅಡ್ಡಿಪಡಿಸುವ ಮೂಲಕ ಕೇಂದ್ರ ಸರ್ಕಾರ ನೀಡುತ್ತಿರುವ ಅನುದಾನದಲ್ಲಿ ಕಾಮಗಾರಿಗಳನ್ನು ಮಾಡಲು ಅಡಚಣೆಯನ್ನುಂಟು ಮಾಡುತ್ತಿರುವುದು ಖಂಡನೀಯ ಎಂದರು.

ಕೇಂದ್ರ ಸರ್ಕಾರ ಗ್ರಾಮ ಪಂಚಾಯತಿಗಳಿಗೆ ಬಿಡುಗಡೆ ಮಾಡುವ 15ನೇ ಹಣಕಾಸಿಗೆ ಗ್ರಾಮ ಪಂಚಾಯತಿಯಲ್ಲಿ ನಿಯಮಾನುಸಾರ ಕ್ರಿಯಾಯೋಜನೆ ತಯಾರಿಸಿ ಇ ಗ್ರಾಮ್ ಸ್ವರಾಜ್ ಗೆ ಆನ್‌ಲೈನ್‌ನಲ್ಲಿ ಅಪ್ ಲೋಡ್ ಮಾಡುವ ಮೂಲಕ ಅಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳೇ ಕಾಮಗಾರಿಗಳಿಗೆ ಅನುಮೋದನೆ ನೀಡುವಂತಹ ಅವಕಾಶವಿದೆ ಎಂದು ಹೇಳಿದರು.

ಆದರೆ ಇದೀಗ ಕ್ರಿಯಾ ಯೋಜನೆ ತಯಾರಿಸಿ ಅನುಮೋದನೆಗಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಕಳುಹಿಸಬೇಕೆಂದು ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಮೌಖಿಕವಾಗಿ ತಿಳಿಸಿದ್ದಾರೆ ಎಂದು ಅಭಿವೃದ್ಧಿ ಅಧಿಕಾರಿಗಳು ತಾಲೂಕಿನ ಎಲ್ಲಾ ಪಂಚಾಯತಿಯ ಕ್ರಿಯಾ ಯೋಜನೆ ಮಂಜೂರಾತಿಗೆ ಅಡ್ಡಿಪಡಿಸುತ್ತಿದ್ದು ಕಳೆದ ಮೂರ್ನಾಲ್ಕು ತಿಂಗಳ ಹಿಂದೆಯೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ 15ನೇ ಹಣಕಾಸಿನ ಹಣಕ್ಕೆ ಕ್ರಿಯಾಯೋಜನೆ ತಯಾರಿಸಿದ್ದರೂ ಕಾಮಗಾರಿ ಮಾಡಿಸದಂತಾಗಿದೆ ಎಂದು ತಿಳಿಸಿದರು.

ಮಳೆಗಾಲದ ಆರಂಭದಲ್ಲೇ ಹಲವು ಗ್ರಾಮ ಪಂಚಾಯತಿಗಳಲ್ಲಿ ಕ್ರಿಯಾ ಯೋಜನೆ ತಯಾರಾಗಿದ್ದರೂ ಮೇಲಾಧಿಕಾರಿಗಳ ಮೌಖಿಕ ಆದೇಶವನ್ನು ಪಾಲಿಸಬೇಕೆಂದು, ಅಭಿವೃದ್ಧಿ ಅಧಿಕಾರಿಗಳು ಕೆಲಸ ನಿರ್ವಹಿಸಲು ಬಿಡುತ್ತಿಲ್ಲ. ಕ್ರಿಯಾ ಯೋಜನೆಯನ್ನು ತಾಲೂಕು ಪಂಚಾಯತಿಗೆ ಕಳುಹಿಸಲಾಗಿದೆ ಜಿಲ್ಲಾ ಪಂಚಾಯತ್ ನಿಂದ ಆನುಮೋದನೆ ಆಗಿಲ್ಲ ಎಂದು ಅಭಿವೃದ್ದಿ ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ ಎಂದರು.

ಜಿಲ್ಲಾ ಪಂಚಾಯತ್‌ನಲ್ಲಿ ಅದಕ್ಕೆ ಸಂಬಂಧಿಸಿದ ಕೇಸ್ ವರ್ಕರ್ ಇಲ್ಲ ಎಂಬುದಾಗಿ ಗ್ರಾಮ ಪಂಚಾಯತಿಯ ಅಧ್ಯಕ್ಷರುಗಳು ಆರೋಪಿಸುತ್ತಿದ್ದು, ಪಂಚಾಯಿತಿಯಲ್ಲಿ 15ನೇ ಹಣಕಾಸು ಯೋಜನೆಯಡಿ ಹಣವಿದ್ದರೂ ಕಾಮಗಾರಿ ನಿರ್ವಹಿಸದಂತಾಗಿದ್ದು,ಅಭಿವೃದ್ದಿ ಕುಂಟಿತವಾಗಿದೆ ಎಂದು ಹೇಳಿದರು.

ಯಾವುದೇ ಜಿಲ್ಲೆಯಲ್ಲೂ ಕಾರ್ಯರೂಪದಲ್ಲಿ ಇಲ್ಲದ ನಿಯಮವನ್ನು ಜಾರಿಗೊಳಿಸಲು ಮೌಖಿಕ ಆದೇಶವನ್ನು ನೀಡಿರಿವ ಸಿಇಓ ಸ್ನೇಹಲ್ ಸುಧಾಕರ್ ಆದನ್ನು ಹಿಂಪಡೆಯ ಬೇಕಿದೆ. ನಿಯಮಾನುಸಾರ ಅಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳೇ 15ನೇ ಹಣಕಾಸು ಯೋಜನೆಯ ಕಾಮಗಾರಿಗಳ ಅನುಮೋದನೆಗೆ ಕ್ರಮ ಕೈಗೊಳ್ಳಬೇಕಾಗಿದ್ದರೂ ವಿನಾಃ ಕಾರಣ ಮಂಜೂರಾತಿಗಾಗಿ ಜಿಲ್ಲಾ ಪಂಚಾಯತ್‌ಗೆ ಕಳುಹಿಸಿ ಎಂದು ಹೇಳಿರುವುದು ಖಂಡನೀಯವಾಗಿದ್ದು ಯಾವುದೇ ಲಿಖಿತ ಆದೇಶವಿಲ್ಲದೆ ಅಭಿವೃದ್ಧಿ ಅಧಿಕಾರಿಗಳಿಗೆ ಈ ರೀತಿ ಸೂಚನೆ ನೀಡಿರುವುದು ಸಮಂಜಸವಲ್ಲ. (ಒಂದು ವೇಳೆ ಸರ್ಕಾರದ ಆದೇಶವಿದ್ದರು ಅದು ಅವೈಜ್ಞಾನಿಕ) ಇದರಿಂದ ಕಾಮಗಾರಿ ನಿರ್ವಹಿಸಲು ಸಾಕಷ್ಟು ವಿಳಂಬವಾಗುತ್ತಿರುವುದಲ್ಲದೆ ಅಡಚಣೆಯೂ ಉಂಟಾಗಿದೆ.

ಜೊತೆಗೆ ಈ ರೀತಿ ಅನುಮೋದನೆ ಜಿಲ್ಲಾ ಪಂಚಾಯತ್ ಗೆ ಕಳುಹಿಸಿ ಎನ್ನುವ ಮೂಲಕ ಗ್ರಾಮ ಪಂಚಾಯತಿಯ ಅಧ್ಯಕ್ಷರುಗಳ ಅಧಿಕಾರವನ್ನು ಮೊಟಕುಗೊಳಿಸುವ ಹುನ್ನಾರವೂ ಇದಾಗಿದೆಯೆಂದು ತಿಳಿಸಿರುವ ಒಕ್ಕೂಟದ ಅಧ್ಯಕ್ಷ ಅನಿಲ್, ಕೂಡಲೇ ಎಲ್ಲಾ ಗ್ರಾಮ ಪಂಚಾಯತಿಯ ಅಭಿವೃದ್ದಿ ಅಧಿಕಾರಿಗಳಿಗೆ ಹಿಂದಿನಂತೆ ಕ್ರಿಯಾಯೋಜನೆಯ ಮಂಜೂರಾತಿಗೆ ಅನುಮೋದನೆ ನೀಡುವಂತೆ ಮಾಡಿ ಕಾಮಗಾರಿಗಳನ್ನು ನಡೆಸಲು ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಬೇಕಿದೆ ಎಂದು ಅವರು ಒತ್ತಾಯಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago