Categories: ShivamoggaSoraba

ಚಂದ್ರಗುತ್ತಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ, ಎರಡೆ ತಿಂಗಳಲ್ಲಿ ₹ 31 ಲಕ್ಷಕ್ಕೂ ಅಧಿಕ ಕಾಣಿಕೆ ಸಂಗ್ರಹ

ಸೊರಬ: ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಛೇರಿಯಲ್ಲಿ ಗುರುವಾರ ನಡೆಯಿತು.

ಹುಂಡಿ ಎಣಿಕೆ ಕಾರ್ಯಕ್ಕೆ ನೂತನ ಸಾಗರ ಉಪ ವಿಭಾಗಾಧಿಕಾರಿ ಆರ್ ಯತೀಶ್ ಭೇಟಿ ನೀಡಿ ಪರಿಶೀಲಿಸಿದರು. ನಂತರ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಭಕ್ತರ ಮೂಲಕ ದೇವಾಲಯಕ್ಕೆ ಕಾಣಿಕೆ ರೂಪದಲ್ಲಿ ಸಾಕಷ್ಟು ದವಸ ಧಾನ್ಯಗಳು ಬರುತ್ತದೆ. ಹುಣ್ಣಿಮೆ ಮತ್ತು ವಿಶೇಷ ದಿನಗಳಲ್ಲಿ ದೇವಿಯ ದರ್ಶನಕ್ಕೆ ಬರುವಂತಹ ಭಕ್ತರಿಗೆ ಉಪಹಾರದ ವ್ಯವಸ್ಥೆ ಮಾಡಬೇಕು. ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಜೊತೆಗೆ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಅನುಗುಣವಾಗಿ ಬೇಕಾಗುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ಚರ್ಚಿಸಿದರು. ಇದಕ್ಕೂ ಮೊದಲು ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದರು.

ನೂತನ ಸಾಗರ ಉಪ ವಿಭಾಗಾಧಿಕಾರಿ ಆರ್ ಯತೀಶ್ ಅವರನ್ನು ತಾಲ್ಲೂಕು ದಂಡಾಧಿಕಾರಿಗಳು ಹಾಗೂ ದೇವಸ್ಥಾನ ಕಾರ್ಯನಿರ್ವಹಣಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.

ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಕಾಣಿಕೆ ಹುಂಡಿ ಎಣಿಸಿದಾಗ 25,08,680 ರೂ. ಸಂಗ್ರಹವಾಗಿತ್ತು.ಈ ಬಾರಿ ದೇವಸ್ಥಾನದ ಹುಂಡಿಯಲ್ಲಿ 31,35,360 ರೂ.
ಕಾಣಿಕೆ ಸಂಗ್ರಹವಾಗಿದೆ,

ಎಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿಸಿ ಕ್ಯಾಮೆರಾ ಅಳವಡಿಸಲಾಗಿತ್ತು. ಸ್ಥಳೀಯ ಗ್ರಾ.ಪಂ. ಸದಸ್ಯ ಎಂ.ಪಿ. ರತ್ನಾಕರ್ ಎಣಿಕೆ ಕಾರ್ಯಕ್ಕೆ ಭೇಟಿ ನೀಡಿದರು.

ಹುಂಡಿ ಎಣಿಕೆ ಕಾರ್ಯದಲ್ಲಿ ತಾಲ್ಲೂಕು ದಂಡಾಧಿಕಾರಿ ಹುಸೇನ್ ಸರಕಾವಸ್, ಶಿರಸ್ತೇದಾರ್ ಎಸ್. ನಿರ್ಮಲ ಪ್ರಭಾಕರ್, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ವಿ.ಎಲ್ ಶಿವಪ್ರಸಾದ್, ಮುಜರಾಯಿ ಇಲಾಖೆ ವಿಷಯ ನಿರ್ವಾಹಕಿ ಎಂ‌.ಶೃತಿ, ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು, ದೇವಾಲಯದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Malnad Times

Recent Posts

Rain Alert | ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಮೇ 7ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ…

5 mins ago

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿಯಲ್ಲಿ ಮುಳುಗಿ ಸಾವು !

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿಯಲ್ಲಿ ಮುಳುಗಿ ಸಾವು ! ಕಳಸ : ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ…

2 hours ago

ತನ್ನೊಂದಿಗೆ ಚರ್ಚೆಗೆ ಬರುವಂತೆ ಅಣ್ಣಾಮಲೈಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್ !

ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…

11 hours ago

ಮತದಾನದಲ್ಲೂ ಶಿವಮೊಗ್ಗ ಎತ್ತರಕ್ಕೇರಲಿ ; ಸ್ನೇಹಲ್ ಸುಧಾಕರ್ ಲೋಖಂಡೆ

ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…

12 hours ago

ಹೃದಯಾಘಾತ ; ಮಮತಾ ನಿಧನ

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…

12 hours ago

ಶ್ರೀಮನ್ಮಹಾರಥೋತ್ಸವ ಜಾತ್ರೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಪನ್ನ

ರಿಪ್ಪನ್‌ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…

13 hours ago