ಸೊರಬ : ಇಲ್ಲಿನ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾಪನೆಯ 5ನೇ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದವು.
ದೇವಾಲಯದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಮೂಲ ಮಂತ್ರ ಜಪಾ ಹೋಮ ಹವನಗಳು, ಶ್ರೀ ಚೌಡೇಶ್ವರಿ ದೇವಿಗೆ ಅಭಿಷೇಕ, ಕುಂಕುಮಾರ್ಚನೆ, ಅಲಂಕಾರಿಕ ಪೂಜೆ, ಮಹಾಮಂಗಳಾರತಿ ಜರುಗಿದವು.
ಗ್ರಾಮದ ಶ್ರೀ ಮಹಾಗಣಪತಿ ದೇವಸ್ಥಾನದಿಂದ ಮುಖ್ಯ ರಸ್ತೆ ಮಾರ್ಗವಾಗಿ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದವರೆಗೆ ಗುಗ್ಗಳ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಆನವಟ್ಟಿ ಸಮೀಪದ ನೇರಲಗಿ ಗ್ರಾಮದ ಶ್ರೀ ವೀರಭದ್ರೇಶ್ವರ ತಂಡದವರು ಗುಗ್ಗಳ ಕಾರ್ಯಕ್ರಮ ನಡೆಸಿಕೊಟ್ಟರು.
ಮಧ್ಯಾಹ್ನ ಮಹಾ ಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ನಂತರ ಭಕ್ತರಿಗೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಸಲಾಯಿತು. ಶ್ರೀ ವೀರಭದ್ರೇಶ್ವರ ದೇವಸ್ಥಾನ ಸಮಿತಿಯವರು, ಗ್ರಾಮಸ್ಥರು ಸೇರಿದಂತೆ ಸುತ್ತಲಿನ ಹತ್ತಾರು ಗ್ರಾಮಗಳ ಸಾವಿರಾರು ಭಕ್ತರು ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…