ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವ ಸಂಪನ್ನ, ದೇವಿಗೆ ವಿಶೇಷ ಪೂಜೆ ; ಮನೆ-ಮನೆಗೆ ಪ್ರಸಾದ ವಿತರಣೆ

0 924

ಸೊರಬ : ಮಲೆನಾಡಿನ ಶಕ್ತಿ ಕೇಂದ್ರವಾದ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿದ್ದು ದೇವಸ್ಥಾನದ ಆಡಳಿತದಿಂದ ಶುಕ್ರವಾರ ದೇಗುಲದಲ್ಲಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

ಈ ಬಾರಿ ಶ್ರೀ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿದ್ದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ವಿ.ಎಲ್ ಶಿವಪ್ರಸಾದ್ ಅವರ ನೇತೃತ್ವದಲ್ಲಿ ದೇವಸ್ಥಾನಕ್ಕೆ ಬಂದ ಭಕ್ತರಿಗೆ ಮತ್ತು ಚಂದ್ರಗುತ್ತಿ ಗ್ರಾಮದ ಪ್ರತಿಯೊಂದು ಮನೆಗಳಿಗೂ ಸಹ ಪ್ರಸಾದ ವಿತರಿಸಲಾಯಿತು.

ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ವಿ.ಎಲ್ ಶಿವಪ್ರಸಾದ್ ಮಾತನಾಡಿ, ಶ್ರೀ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವ ವೈಭವದಿಂದ ಸಂಪನ್ನಗೊಂಡಿದ್ದು
ಹಿನ್ನೆಲೆಯಲ್ಲಿ ನಾಡಿನ ಸಮಸ್ತ ಜನತೆಗೆ ಶೀ ರೇಣುಕಾಂಬ ದೇವಿಯು ಸುಖ, ಶಾಂತಿ, ನೆಮ್ಮದಿ ಮತ್ತು ಆರೋಗ್ಯ, ಆಯಸ್ಸು, ಜೀವನದಲ್ಲಿ ನೀಡಲಿ ಹಾಗೂ ಕಾಲಕ್ಕೆ ತಕ್ಕಂತೆ ಮಳೆ, ಬೆಳೆ, ಆಗಲಿ ಎಂದು ಶ್ರೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದ್ದೇವೆ ಎಂದು ತಿಳಿಸಿದರು.

ದೇವಸ್ಥಾನದ ಪ್ರಧಾನ ಅರ್ಚಕರಾದ ಅರವಿಂದ್ ಭಟ್ ಅವರು ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.

ಈ ವರ್ಷ ಶ್ರೀ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವ ಮುಗಿದ ನಂತರ ಗ್ರಾಮದ ಪ್ರತಿ ಮನೆಗಳಿಗೆ ದೇವಸ್ಥಾನದ ಆಡಳಿತದಿಂದ ಪ್ರಸಾದ ವಿತರಣೆ ಮಾಡಿದ್ದು ಸಾರ್ವಜನಿಕರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ದೇವಸ್ಥಾನದ ಸಿಬ್ಬಂದಿಗಳು ಪ್ರತಿ ಮನೆಗಳಿಗೆ ತೆರಳಿ ಪ್ರಸಾದ ವಿತರಿಸಿದರು.

Leave A Reply

Your email address will not be published.

error: Content is protected !!