Categories: Shivamogga

ಚರಂಡಿಗೆ ಮುಚ್ಚಿದ ಸ್ಲ್ಯಾಬ್ ಕುಸಿದು ವ್ಯಕ್ತಿ ಸ್ಥಳದಲ್ಲೇ ಸಾವು !

ಶಿವಮೊಗ್ಗ : ಚರಂಡಿಗೆ ಮುಚ್ಚಿದ ಸ್ಲ್ಯಾಬ್ ಕುಸಿದು ಬಿದ್ದು ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ವಿನೋಬನಗರ ರೈಲ್ವೆ ಬ್ಯಾರಲಲ್ ರಸ್ತೆಯಲ್ಲಿಂದು ನಡೆದಿದೆ.

ಶಿವಮೊಗ್ಗ ನಗರದ ಬೊಮ್ಮನಕಟ್ಟೆ ನಿವಾಸಿ ಮುತ್ತಪ್ಪ (45) ಮೃತ ವ್ಯಕ್ತಿ. ಇವರು ಗುಜರಿ ವ್ಯಾಪಾರ ಮಾಡುತ್ತಿದ್ದರು. ಮತ್ತಪ್ಪ ಅವರು ಮೂತ್ರ ವಿಸರ್ಜನೆ ವೇಳೆ ಸ್ಲ್ಯಾಬ್ ಕುಸಿದಿದೆ. ಹತ್ತು ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದಾರೆ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕಳಪೆ ಕಾಮಗಾರಿಯೇ ಘಟನೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಲಾಗಿದೆ.

ಈ ಘಟನೆ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Malnad Times

Recent Posts

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

5 mins ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

2 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

15 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

17 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

18 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

18 hours ago