ಚುನಾವಣಾ ಕರ್ತವ್ಯಕ್ಕೆ ಪಾನಮತ್ತರಾಗಿ ಆಗಮಿಸಿದ್ದ ಇಬ್ಬರು ಸಿಬ್ಬಂದಿಗಳು ಅಮಾನತು

0 37

ಶಿವಮೊಗ್ಗ: ಚುನಾವಣಾ ಕರ್ತವ್ಯಕ್ಕೆ ಪಾನಮತ್ತರಾಗಿ ಆಗಮಿಸಿದ್ದ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಅಮಾನತುಗೊಂಡವರನ್ನು ಮಾಲತೇಶ್ ಹಾಗು ರಮೇಶ್ ಎಂದು ಗುರುತಿಸಲಾಗಿದೆ. ರಮೇಶ್ ತೋಟಗಾರಿಕೆ ಇಲಾಖೆಯ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರೆ ಮಾಲತೇಶ್ ಶಿಕ್ಷಕರಾಗಿದ್ದರು.

ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಬಳಿಕ ಇವರಿಬ್ಬರೂ ಪಾನಮತ್ತರಾಗಿರುವುದು ಸಾಬೀತಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಸ್ಟರಿಂಗ್‌ನಲ್ಲಿ ಇಬ್ಬರೂ ಪಾನಮತ್ತರಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಇದನ್ನು ಗಮನಿಸಿದ ಚುನಾವಣಾಧಿಕಾರಿ ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿದ್ದರು. ಇದೀಗ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

Leave A Reply

Your email address will not be published.

error: Content is protected !!