ಶಿವಮೊಗ್ಗ: ಚುನಾವಣಾ ಕರ್ತವ್ಯಕ್ಕೆ ಪಾನಮತ್ತರಾಗಿ ಆಗಮಿಸಿದ್ದ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಅಮಾನತುಗೊಂಡವರನ್ನು ಮಾಲತೇಶ್ ಹಾಗು ರಮೇಶ್ ಎಂದು ಗುರುತಿಸಲಾಗಿದೆ. ರಮೇಶ್ ತೋಟಗಾರಿಕೆ ಇಲಾಖೆಯ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರೆ ಮಾಲತೇಶ್ ಶಿಕ್ಷಕರಾಗಿದ್ದರು.
ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಬಳಿಕ ಇವರಿಬ್ಬರೂ ಪಾನಮತ್ತರಾಗಿರುವುದು ಸಾಬೀತಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಸ್ಟರಿಂಗ್ನಲ್ಲಿ ಇಬ್ಬರೂ ಪಾನಮತ್ತರಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಇದನ್ನು ಗಮನಿಸಿದ ಚುನಾವಣಾಧಿಕಾರಿ ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿದ್ದರು. ಇದೀಗ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…