Categories: Shivamogga

ಚುನಾವಣಾ ಜಾಹೀರಾತು ; ಪೂರ್ವಾನುಮತಿ ಕಡ್ಡಾಯ


ಶಿವಮೊಗ್ಗ: ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಮೇ 10 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೇ 9 ಹಾಗೂ 10 ರಂದು ಅಭ್ಯರ್ಥಿಗಳು/ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ದಿನಪತ್ರಿಕೆಗಳಲ್ಲಿ ಯಾವುದೇ ರೀತಿಯ ಚುನಾವಣಾ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯ(ಎಂಸಿಎಂಸಿ) ಕಡೆಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.


ಚುನಾವಣಾ ಜಾಹೀರಾತು ಪ್ರಕಟಿಸಲು ಬಯಸುವ ಅಭ್ಯರ್ಥಿಗಳು ಮೇ 9 ಹಾಗೂ 10 ರಂದು ಮುದ್ರಣ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿನ ಎರಡು ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಮೇ 7 ರೊಳಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎಂಸಿ)ಗೆ ಅರ್ಜಿ ಸಲ್ಲಿಸಬೇಕು.


ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಜಾಹೀರಾತುಗಳನ್ನು ಪ್ರಕಟಿಸಲು ಜಿಲ್ಲಾ ಮಟ್ಟದ ಎಂಸಿಎಂಸಿ ಕಡೆಯಿಂದ ಪೂರ್ವಾನುಮತಿ ಪಡೆಯದ ಅಭ್ಯರ್ಥಿಗಳ ಜಾಹೀರಾತುಗಳನ್ನು ಸ್ಥಳೀಯ, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ದಿನಪತ್ರಿಕೆಗಳು ಪ್ರಕಟಿಸಬಾರದು ಎಂದು ಚುನಾವಣಾ ಆಯೋಗ ತಿಳಿಸಿದೆ.


ಪೂರ್ವಾನುಮತಿಗೆ ಅರ್ಜಿ ಲಭ್ಯ:
ಮೇ 09 ಹಾಗೂ 10 ರಂದು ಮುದ್ರಣ ಮಾಧ್ಯಮದಲ್ಲಿ ಪ್ರಕಟಿಸಲು ಅಗತ್ಯವಿರುವ ನಿಗದಿತ ನಮೂನೆಯ ಅರ್ಜಿ ನಮೂನೆಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ, ಸರ್ ಎಂ.ವಿ. ರಸ್ತೆ, ಶಿವಮೊಗ್ಗ ಈ ಕಚೇರಿಯಿಂದ ಪಡೆಯಬಹುದು.

Malnad Times

Recent Posts

ಪತಿ ಸಾವಿನ ನೋವಿನಲ್ಲೂ ಮತದಾನ ಮಾಡಿದ ಮಹಿಳೆ !

ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…

2 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆ | ಶೇ. 78.24 ಮತದಾನ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…

3 hours ago

Accident | ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಸಾವು !

ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

5 hours ago

ಹೊಸನಗರ ಪಟ್ಟಣದ ಮತಗಟ್ಟೆ ಸಂಖ್ಯೆ 258 ರಲ್ಲಿ ಮತಯಂತ್ರ ದೋಷ, ಅರ್ಧ ಗಂಟೆ ಸ್ಥಗಿತಗೊಂಡ ಮತದಾನ

ಹೊಸನಗರ: ಪಟ್ಟಣದ ಹೈಸ್ಕೂಲ್‌ನಲ್ಲಿನ ಮತಗಟ್ಟೆ ಸಂಖ್ಯೆ 258 ರಲ್ಲಿ ಅಲ್ಪ ಸಮಯದ ಕಾಲ ಇ.ವಿ.ಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತಗೊಂಡ…

5 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಸಂಜೆ 5:00 ಗಂಟೆವರೆಗೆ‌ ಶೇ. 72.36 ಮತ ಚಲಾವಣೆ, ಎಲ್ಲೆಲ್ಲಿ ಎಷ್ಟೆಷ್ಟು ?

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಮತದಾನ ನಡೆಯುತ್ತಿದ್ದು ಸಂಜೆ 5:00 ಗಂಟೆವರೆಗೆ‌ ಶೇ. 72.36 ಮತ ಚಲಾವಣೆಯಾಗಿದೆ.…

6 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಈವರೆಗಿನ ಶೇಕಡಾವಾರು ಮತದಾನದ ವಿವರ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ…

7 hours ago