ಜೀವನ ಸಂಘರ್ಷಕ್ಕೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳು ಅಷ್ಟೇ ಮುಖ್ಯ

0 317

ಹೊಸನಗರ : ಜೀವನ ಸಂಘರ್ಷಕ್ಕೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳು ಅಷ್ಟೇ ಮುಖ್ಯವೆಂದು
ತಹಶೀಲ್ದಾರ್ ರಶ್ಮಿ ಹಾಲೇಶ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಪಟ್ಟಣದ ಶ್ರೀ ರಾಮಕೃಷ್ಣ ವಿದ್ಯಾಲಯದ ವಾರ್ಷಿಕೋತ್ಸವದ ಅಂಗವಾಗಿ ಏರ್ಪಡಿಸಿದ ಚಿಣ್ಣರ ಕ್ರೀಡಾಕೂಟವನ್ನು ಕ್ರೀಡಾ ಧ್ವಜಾರೋಹಣ ಗೈದು ಪಥಸಂಚನದ ವಂದನೆ ಹಾಗೂ ಕ್ರೀಡಾ ಜ್ಯೋತಿ ಸ್ವೀಕರಿಸಿ ಉದ್ಘಾಟಿಸಿ ಮಾತನಾಡಿ, ಜೀವನ ಸಂಘರ್ಷಕ್ಕೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳು ಅಷ್ಟೇ ಮುಖ್ಯವಾಗಿದೆ. ಸ್ಪರ್ಧೆಗಳಲ್ಲಿ ಸೋಲು-ಗೆಲುವು ಮುಖ್ಯವಲ್ಲ ಸ್ಪರ್ಧಾತ್ಮಕ ಮನೋಭಾವ ಮುಖ್ಯ. ಇತ್ತೀಚೆಗೆ ಮಕ್ಕಳಲ್ಲಿ ಕೌಶಲ್ಯತೆ ಕ್ಷೀಣಿಸುತ್ತಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿ, ಮಕ್ಕಳು ಜಂಕ್ ಫುಡ್ ಕಡೆ ಗಮನಹರಿಸಿರುವುದು ಬಿಟ್ಟು ಪೌಷ್ಟಿಕ ಆಹಾರ ಸೇವನೆ ಮಾಡುವ ಮೂಲಕ ಸದೃಢ ಆಗುವ ಮೂಲಕ ಮಾನಸಿಕ ಆರೋಗ್ಯದೊಂದಿಗೆ ದೈಹಿಕ ಆರೋಗ್ಯದ ಕಡೆ ಗಮನ ಹರಿಸಬೇಕೆಂದರು.

ಶ್ರೀ ರಾಮಕೃಷ್ಣ ವಿದ್ಯಾಲಯದ ಸಂಸ್ಥಾಪಕ ಅಧ್ಯಕ್ಷ ಡಿ.ಎಂ ದೇವರಾಜ್ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಿ.ಆರ್.ಪಿ ಮಂಜಪ್ಪ, ಮಲೆನಾಡು ವಾಯ್ಸ್ ಪತ್ರಿಕೆಯ ಸಂಪಾದಕ ನಗರ ರಾಘವೇಂದ್ರ, ಹಿರಿಯ ಪತ್ರಕರ್ತ ಉಡುಪಿ ಎಸ್ ಸದಾನಂದ, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಕು|| ಅಶ್ವಿನಿ ಸ್ವಾಗತಿಸಿದರು. ಅಮೃತ ಕಾರ್ಯಕ್ರಮ ನಿರೂಪಿಸಿದರು‌. ಸುಮಂತ್ ವಂದಿಸಿದರು.

Leave A Reply

Your email address will not be published.

error: Content is protected !!