Categories: Sagara NewsShivamogga

ಜ.14 ಮತ್ತು 15 ರಂದು ಸಿಗಂದೂರು ಶ್ರೀ ಚೌಡೇಶ್ವರಿ ಜಾತ್ರಾ ಮಹೋತ್ಸವ

ಸಾಗರ : ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಜನವರಿ 14 ಮತ್ತು 15ರಂದು ಮಕರ ಸಂಕ್ರಮಣ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ದೇವಳದ ಆಡಳಿತ ಮಂಡಳಿ ತಿಳಿಸಿದೆ.

ಜ.14ರಂದು ಬೆಳಿಗ್ಗೆ 4 ಗಂಟೆಗೆ ಮಹಾಭಿಷೇಕ, ಅಲಂಕಾರ, ಆಭರಣ ಪೂಜೆ, ಚಂಡಿಕಾ ಹೋಮ ನೆರವೇರಲಿದೆ.

ದೇವಸ್ಥಾನದ ಧರ್ಮದರ್ಶಿ ಎಸ್.ರಾಮಪ್ಪ ನೇತೃತ್ವದಲ್ಲಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ಆರ್ಯ ಈಡಿಗ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ. ತಿಮ್ಮೇಗೌಡ ಚಾಲನೆ ನೀಡಲಿದ್ದಾರೆ.

ಅಂದು ಬೆಳಿಗ್ಗೆ 8 ಗಂಟೆಗೆ ರಥ ಪೂಜೆಯೊಂದಿಗೆ ದೇವಿಯು ಮೂಲ ಸ್ಥಾನಕ್ಕೆ ಹೊರಡಲಿದ್ದು, ಕೇರಳದ ಶಿವಗಿರಿಯ ಬ್ರಹ್ಮಶ್ರೀ ನಾರಾಯಣ ಗುರು ಮಠದ ಪೀಠಾಧಿಪತಿ ಸಚ್ಚಿದಾನಂದ ಸ್ವಾಮೀಜಿಯವರು ಸೀಗೇ ಕಣಿವೆಯಲ್ಲಿ ಧರ್ಮ ಜ್ಯೋತಿಗೆ ಚಾಲನೆ ನೀಡಲಿದ್ದಾರೆ. ರಂಭಾಪುರಿ ಮಳಲಿಮಠದ ಗುರು ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಅದೇ ದಿನ ರಾತ್ರಿ 9.30ಕ್ಕೆ ಸಿಗಂದೂರು ಮೇಳದಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ.

15ರ ಬೆಳಿಗ್ಗೆ 5ರಿಂದ ನವ ಚಂಡಿಕಾ ಹೋಮ, ರಾತ್ರಿ 8 ಗಂಟೆಗೆ ದುರ್ಗಾ ದೀಪ ನಮಸ್ಕಾರ, ಗುರು ಪೂಜೆ, ದೇವಿ ಪಾರಾಯಣ, ರಂಗಪೂಜೆ, ರಾತ್ರಿ 8.30ರಿಂದ ಕುದ್ರೋಳಿ ಗಣೇಶ ಮತ್ತು ಬಳಗದಿಂದ ಮ್ಯಾಜಿಕ್ ಶೋ ನಡೆಯಲಿದೆ. ಜಾತ್ರೆಯ ಅಂಗವಾಗಿ 2 ದಿನಗಳವರೆಗೆ ವಿವಿಧ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

7 days ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

1 week ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 week ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

1 week ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago