Categories: Shivamogga

ಡಿಸಿ ಕಚೇರಿ ಮುಂದೆ ಆಜಾನ್ ಕೂಗಿ ಸೊಕ್ಕಿನಿಂದ ಮೆರೆದಿರುವ ಸಮುದಾಯದ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ; ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ಡಿಸಿ ಕಚೇರಿಯ ಮುಂದೆ ಆಜಾನ್ ಕೂಗಿ ಸೊಕ್ಕಿನಿಂದ ಮೆರೆದಿರುವ ಸಮುದಾಯದ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕಿದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದರು.


ಇಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸಿ ಕಚೇರಿ ಮುಂದೆ ಆಜಾನ್ ಕೂಗಿರುವುದು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಅಷ್ಟಲ್ಲದೇ ವಿಧಾನಸೌಧದಲ್ಲೂ ಆಜಾನ್ ಕೂಗುತ್ತೇವೆ ಎಂದಿದ್ದಾರೆ. ಇದನ್ನು ರಾಜ್ಯ ಸರ್ಕಾರ ಮಾತ್ರವಲ್ಲ, ಕೇಂದ್ರ ಸರ್ಕಾರ ಕೂಡ ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದರು.


ಮಾ.17 ರಂದು ಅಂಜುಮಾನ್ ಸಂಸ್ಥೆ ನಡೆಸಿದ ಪ್ರತಿಭಟನೆ ವೇಳೆ ಆಜಾನ್ ಕೂಗಿದ ಯುವಕನ ವಿರುದ್ಧ ಸೆಕ್ಷನ್ 107 ಹಾಕಿ ಬಿಡುಗಡೆ ಮಾಡಲಾಗಿದೆ. ಸ್ಟೇಷನ್ ಬೇಲ್ ಮೇಲೆ ಆತನನ್ನು ಬಿಡುಗಡೆ ಮಾಡಲಾಗಿದೆ. ಡಿಸಿ ಕಚೇರಿಯ ಮುಂದೆ ಕೋಮು ಸೌಹಾರ್ದತೆ ಹಾಳು ಮಾಡಿದ್ದಾನೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಆಜಾನ್ ವಿಚಾರದಲ್ಲಿ ಪೊಲೀಸ್ ಬಿಗಿ ಕ್ರಮ ಕೈಗೊಳ್ಳಬೇಕಿತ್ತು ಎಂದರು.


ಅಲ್ಲಾಹುವಿಗೆ ನಾನು ಅಪಮಾನ ಮಾಡಿಲ್ಲ. ಅವರೇ ಅಪಮಾನ
ಮಾಡಿದ್ದಾರೆ. ನಾಲ್ಕು ಮೈಕ್‌ನಲ್ಲಿ ಕೂಗಿ ದೇವರನ್ನ ತೃಪ್ತಿಪಡಿಸುತ್ತೀರಾ? ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಆಜಾನ್ ಕೂಗಬೇಕು ಎಂಬುದು ನನ್ನ ಹೇಳಿಕೆಯಾಗಿದೆ. ಆಜಾನ್ ಕೂಗಲು ಕಾನೂನು ಇದೆ. ಅದೇ ರೀತಿ ಕೂಗಬೇಕು ಎಂಬುದು ನನ್ನ ನಿಲುವು ಎಂದು ಹೇಳಿದರು.


ಪತ್ರಿಕಾಗೋಷ್ಠಿಯಲ್ಲಿ ಎಸ್.ಎನ್. ಚನ್ನಬಸಪ್ಪ, ಸಂತೋಷ್ ಬಳ್ಳೆಕೆರೆ, ಚಂದ್ರಶೇಖರ್, ಕೆ.ವಿ. ಅಣ್ಣಪ್ಪ ಮೊದಲಾದವರಿದ್ದರು.

Malnad Times

Recent Posts

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

2 hours ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

15 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

18 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

18 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

23 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

1 day ago