ತಾಯಿ-ಮಗುವಿನ ಸಂಬಂಧ ಅನನ್ಯವಾದದ್ದು ; ಡಾ|| ಮಾರ್ಷಲ್ ಶರಾಂ

ಹೊಸನಗರ: ತಾಯಿ-ಮಗುವಿನ ಸಂಬಂಧ ಕರುಳು ಬಳ್ಳಿಯ ಸಂಬಂಧ ಹಾಗಾಗಿ ತಾಯಿ-ಮಗುವಿನ ಸಂಬಂಧ ಅನನ್ಯವಾದದ್ದು ಎಂದು ಕೊಡಚಾದ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಮಾರ್ಷಲ್ ಶರಾಂ ಹೇಳಿದರು.

ಪಟ್ಟಣದ ಕೊಡಚಾದ್ರಿ ಕಾಲೇಜಿವ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ನಡೆದ ದಿ.ಸುಬ್ಬಲಕ್ಷ್ಮಿ ಕೆ ಸೀನಪ್ಪ ಇವರ ದತ್ತಿನಿಧಿ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯದಲ್ಲಿ ತಾಯಿ ಮತ್ತು ಮಗು ಎಂಬ ವಿಷಯ ಕುರಿತು ಮಾತನಾಡಿದರು.

ಮಗು ಗರ್ಭಾವಸ್ಥೆಯಿಂದ ಹಿಡಿದು ಮಗ/ಮಗಳು ಬದುಕಿರುವವರೆಗೂ ತಾಯಿಯ ವಾತ್ಸಲ್ಯದ ಗುಣಗಳನ್ನು ಕಾಣಬಹುದಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ತ.ಮ.ನರಸಿಂಹ ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡ ಭಾಷೆಗೂ ನಮ್ಮ ಕರ್ನಾಟಕ ರಾಜ್ಯಕ್ಕೂ ತಾಯಿ-ಮಗುವಿನ ಸಂಬಂಧದಂತೆ ಬೆಳೆದಿದ್ದು ಕನ್ನಡಿಗರು ರಾಜ್ಯ-ದೇಶದಿಂದ ಹೊರಗೆ ಹೋದರು ಅಲ್ಲಿಯು ಕನ್ನಡದ ಕಂಪು ಪಸರಿಸುತ್ತಾರೆ ಇದೇ ತಾಯಿ-ಮಕ್ಕಳ ಸಂಬಂಧ ಎನ್ನುವುದು ಎಂದರು.

ಹೊಸನಗರ ತಾಲ್ಲೂಕಿನ ಹಿರಿಯ ಸಾಹಿತಿ ನಾಗರಕೊಡಿಗೆ ಗಣೇಶ್ ಮೂರ್ತಿಯವರು ದೀಪ ಹಚ್ಚುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಕೊಡಚಾದ್ರಿ ಕಾಲೇಜಿನ ಉಪನ್ಯಾಸಕರಾದ ಡಾ.ಶ್ರೀಪತಿ ಹಳಗುಂದ, ದತ್ತಿನಿಧಿಗಳಾದ ಕೆ.ಎಸ್. ವಿನಾಯಕರವರು ಆಗಮಿಸಿ ತಾಯಿ ಮತ್ತು ಮಕ್ಕಳ ಸಂಬಂಧದ ಬಗ್ಗೆ ಮಾತನಾಡಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ|| ಉಮೇಶ್‌ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಕಸಾಪ ಗೌರವ ಕಾರ್ಯದರ್ಶಿ ಎಂ.ಕೆ.ವೆಂಕಟೇಶ್‌ಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಕುಬೇಂದ್ರಪ್ಪ, ಹೆಚ್.ಆರ್ ಪ್ರಕಾಶ್, ಹಿರಿಯ ಸದಸ್ಯರಾದ ಕೆ.ಸುರೇಶ್‌ಕುಮಾರ್, ಕೆ.ಜಿ.ನಾಗೇಶ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ತಾಯಿ-ಮಗುವಿನ ಸಂಬಂಧದ ಬಗ್ಗೆ ಹಾಡಿದರು. ಈ ಹಾಡಿಗೆ ತಕ್ಕಂತೆ ಸ್ಥಳೀಯ ಕಲಾವಿದರಾದ ವಿದ್ಯಾ ನಾಗೇಂದ್ರ ತಾಯಿ ಮಗುವಿನ ಸಂಬಂಧದ ಕುರಿತು ಕುಂಚದಿಂದ ಚಿತ್ರ ಬಿಡಿಸಿದರು.

ಕಾರ್ಯಕ್ರಮದಲ್ಲಿ ಕುಮಾರಿ ವಿಭ ಪ್ರಾರ್ಥಿಸಿದರು. ಕಸಾಪ ಸದಸ್ಯ ಹೆಚ್.ಆರ್. ಪ್ರಕಾಶ್ ಸ್ವಾಗತಿಸಿದರು.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

7 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

10 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

11 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

15 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

17 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago