Categories: Shivamogga

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯ್ಕೆ ಸ್ಪರ್ಧೆ


ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2023-24 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಆಯ್ಕೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.


ಸೆ. 03ರಂದು ಸೊರಬ ತಾಲೂಕು ಕ್ರೀಡಾಂಗಣ, ಸೆ. 07ರಂದು ಹೊಸನಗರ ತಾಲೂಕು ಕ್ರೀಡಾಂಗಣ, ಸೆ.10 ರಂದು ಭದ್ರಾವತಿ ವಿ.ಐ.ಎಸ್.ಎಲ್ ಕ್ರೀಡಾಂಗಣ ಮತ್ತು ಸಾಗರ ನೆಹರೂ ಮೈದಾನ, ಸೆ.22 ರಂದು ಶಿವಮೊಗ್ಗ ನೆಹರೂ ಕ್ರೀಡಾಂಗಣ, ಸೆ.24 ರಂದು ಶಿಕಾರಿಪುರ ತಾಲೂಕು ಕ್ರೀಡಾಂಗಣ, ಸೆ.30 ರಂದು ತೀರ್ಥಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದೆ.


ಅಥ್ಲೇಟಿಕ್ಸ್, ವಾಲಿಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್ ಸ್ಪರ್ಧೆಗಳನ್ನು ಮಾತ್ರ ಏರ್ಪಡಿಸಲಾಗಿದ್ದು, ಆಯಾ ತಾಲೂಕಿನ ಕ್ರೀಡಾಪಟುಗಳು ಆಯಾ ತಾಲೂಕಿನ ಸ್ಪರ್ಧೆಗಳಲ್ಲಿ ಮಾತ್ರ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ. ಭಾಗವಹಿಸುವ ಸಮಯದಲ್ಲಿ ಆಧಾರ್ ಕಾರ್ಡ್ ಕಡ್ಡಾಯವಾಗಿ ತರಬೇಕು. ಗುಂಪು ಸ್ಪರ್ಧೆಗಳನ್ನೇರ್ಪಡಿಸಲು ಕನಿಷ್ಠ 4 ತಂಡಗಳು ಇರಬೇಕು, ಇಲ್ಲದಿದ್ದಲ್ಲಿ ಆಯ್ಕೆ ನಡೆಸಿ ಮುಂದಿನ ಹಂತಕ್ಕೆ ಕಳುಹಿಸಲಾಗುವುದು. ಒಬ್ಬರಿಗೆ ಎರಡು ವೈಯುಕ್ತಿಕ ಹಾಗೂ ಒಂದು ಗುಂಪು ಸ್ಫರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.

ಆಸಕ್ತ ಕ್ರೀಡಾಪಟುಗಳು ಆಯಾ ದಿನಾಂಕಗಳಂದು ಆಯಾ ತಾಲೂಕಿನ ಕ್ರೀಡಾಂಗಣದಲ್ಲಿ ಬೆಳಗ್ಗೆ 10 ಗಂಟೆ ಒಳಗಾಗಿ ಹಾಜರಿದ್ದು, ಸಂಬಂಧಪಟ್ಟವರಲ್ಲಿ ವರದಿ ಮಾಡಿಕೊಂಡು ಹೆಸರು ನೊಂದಾಯಿಸಿಕೊಳ್ಳುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago