ಶಿವಮೊಗ್ಗ : ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ. ಅದೇ ಉದ್ದೇಶದಿಂದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಅವರಿಗೆ ಮತ ನೀಡಿ ಹರಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ಕುಮಾರ್ ಸೋಮವಾರ 2ನೇ ಬಾರಿಗೆ ನಾಮಪತ್ರ ಸಲ್ಲಿಸಿದ್ದು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆ ಬಗ್ಗೆ ಜರಿದಿದ್ದಾರೆ. ಹಳ್ಳಿಯ ಹೆಣ್ಣು ಮಕ್ಕಳು ಗ್ಯಾರಂಟಿಗಳಿಂದ ಹಾದಿ ತಪ್ಪುತ್ತಿದ್ದಾರೆ ಎಂದು ದೂರಿದ್ದಾರೆ. ಇದು ಖಂಡನೀಯ. ರಾಜ್ಯದೆಲ್ಲೆಡೆ ಈ ಬಗ್ಗೆ ಹೋರಾಟ ಮಾಡಬೇಕು ಎಂದರು.
ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಮಹಿಳೆಯರ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರಣಾಳಿಕೆಯಲ್ಲಿ ಸಾಮಾಜಿಕ ನ್ಯಾಯ, ಲಿಂಗ ಸಮಾನತೆ, ಅಲ್ಪಸಂಖ್ಯಾತರ ವೈಯಕ್ತಿಕ ಕಾನೂನುಗಳ ಸುಧಾರಣೆ, ಹಿರಿಯ ನಾಗರಿಕರು, ಅಂಗವಿಕಲರ ಅಭ್ಯುದಯಕ್ಕೆ ಒತ್ತು ನೀಡಲಾಗಿದೆ ಎಂದರು.
ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕನುಸುಗಳಿಗೆ ಜೀವ ತುಂಬಲು ಗೀತಾ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದರು.
ಸಚಿವ ಮಧು ಬಂಗಾರಪ್ಪ, ಶಾಸಕರಾದ ಗೋಪಾಲಕೃಷ್ಣ ಬೇಳೂರು, ಬಿ.ಕೆ.ಸಂಗಮೇಶ್, ಡಾ.ಆರ್.ಎಂ. ಮಂಜುನಾಥ ಗೌಡ, ನಟ ಶಿವರಾಜ್ಕುಮಾರ್ ಮತ್ತಿತರರು ಹಾಜರಿದ್ದರು.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…