Categories: ShivamoggaSoraba

ದುಗ್ಲಿ ಸುಕ್ಷೇತ್ರದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ | ಯುಗಮಾನೋತ್ಸವಶ್ರೀ ಜಗದ್ಗುರು ರೇವಣಸಿದ್ಧೇಶ್ವರ ರಥೋತ್ಸವ ಶ್ರೀ ಮಠದ 48ನೇ ವರ್ಷದ ವಾರ್ಷಿಕೋತ್ಸವ

ಸೊರಬ : ತಾಲೂಕಿನ ದುಗ್ಲಿ ಸುಕ್ಷೇತ್ರದ ಶ್ರೀ ಗುರು ರೇವಣಸಿದ್ಧೇಶ್ವರ ಮಠದಲ್ಲಿ ಮಾ. 30ರಂದು ಸಂಜೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಶ್ರೀ ಜಗದ್ಗುರು ರೇವಣಸಿದ್ಧೇಶ್ವರ ರಥೋತ್ಸವ ಶ್ರೀ ಮಠದ 48ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಜರುಗಲಿದೆ.

ಸುಳ್ಳ ಪಂಚಗೃಹ ಹಿರೇಮಠದ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮಿಗಳು ಅಧ್ಯಕ್ಷತೆ ವಹಿಸುವರು. ದುಗ್ಲಿ-ಕಡೆನಂದಿಹಳ್ಳಿ ಕ್ಷೇತ್ರದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸುವರು. ಬೊಮ್ಮನಹಳ್ಳಿ ವಿರಕ್ತಮಠದ ಶಿವಯೋಗಿ ಸ್ವಾಮಿಗಳು, ಜಡೆ ಮಹಾಂತ ಸ್ವಾಮಿಗಳು, ಶಾಂತಪುರ ಶಿವಾನಂದ ಶಿವಾಚಾರ್ಯರು, ಸಿಂಧನೂರು-ಕನ್ನೂರು ಸೋಮನಾಥ ಶಿವಾಚಾರ್ಯರು, ಹಾರನಹಳ್ಳಿ ಶಿವಯೋಗಿ ಶಿವಾಚಾರ್ಯರು, ಕಾರ್ಜುವಳ್ಳಿ ಸದಾಶಿವ ಶಿವಾಚಾರ್ಯರು, ಚನ್ನಗಿರಿ ಕೇದಾರ ಶಿವಶಾಂತವೀರ ಶಿವಾಚಾರ್ಯರು, ಯಲಬುರ್ಗಾದ ಶಿವಲಿಂಗ ಸ್ವಾಮಿಗಳು ಉಪದೇಶಾಮೃತ ನೀಡುವರು.

ವಿಶೇಷ ಆಹ್ವಾನಿತರಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಶಿವರಾಮ ಹೆಬ್ಬಾರ್ ಆಗಮಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಶಾಸಕರಾದ ಕುಮಾರ್ ಬಂಗಾರಪ್ಪ, ವಿ.ಎಸ್.ಪಾಟೀಲ್, ಶಿವಮೊಗ್ಗದ ಕೆ.ಪಿ.ರುದ್ರೇಗೌಡ ಗಿಣಿವಾಲ, ಸೊರಬದ ಗಣಪತಿ ಹುಲ್ಲಿಕೊಪ್ಪ, ನಾಗರಾಜಗೌಡ್ರ ಚಿಕ್ಕಾವಲಿ, ಬಸವರಾಜಪ್ಪ ಬಾರಂಗಿ, ಸಿ.ಪಿ.ಈರೇಶಗೌಡ್ರ, ಶಿರಸಿಯ ಬಸವರಾಜ ಚಕ್ರಸಾಲಿ, ಶಿವಲಿಂಗಯ್ಯ ಎಸ್.ಅಲ್ಲಯ್ಯನವರಮಠ, ಶಂಕರ್ ಶೇಟ್, ಆನಂದಪ್ಪ, ಲತಾ ಹೆಚ್.ಡಿ., ಮಲ್ಲಮ್ಮ ಕಬ್ಬೂರು, ಚಂದ್ರಪ್ಪ ಹೊಸೂರು, ರೂಪಾ ಪರಶುರಾಮ ಪಾಲ್ಗೊಳ್ಳುವರು.

ಬೆಳಗ್ಗೆ ಕ್ಷೇತ್ರದ ದೈವಗಳಿಗೆ ಲಿಂ.ಶ್ರೀ ಮುರುಘೇಂದ್ರ ಸ್ವಾಮಿಗಳವರ ಗದ್ದುಗೆಗೆ ಮಹಾರುದ್ರಾಭಿಷೇಕ ನಡೆಯುವುದು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀ ಜಗದ್ಗುರು ರೇವಣಸಿದ್ಧೇಶ್ವರ ಪಲ್ಲಕ್ಕಿ ಉತ್ಸವವು ಸಕಲ ವಾದ್ಯ ವೈಭವಗಳೊಂದಿಗೆ ನಡೆಯುವುದು.

ಇದೇ ಸಂದರ್ಭದಲ್ಲಿ ರೇವಣಸಿದ್ಧೇಶ್ವರ ಶಿವಾಚಾರ್ಯರ ಜನ್ಮ ವರ್ಧತ್ಯೋತ್ಸವ, ಕಾಳಸರ್ಪದೋಷ ನಿವಾರಣೆಗೆ ಸರ್ಪ ಶಾಂತಿ ಜರುಗುವುದು. ಸಂಜೆ ಶ್ರೀ ಜಗದ್ಗುರು ರೇವಣಸಿದ್ಧೇಶ್ವರ ರಥೋತ್ಸವ ಜರುಗಲಿದೆ. ರಾತ್ರಿ ಸಂಗೀತ-ಭರತನಾಟ್ಯ, ವಿಶೇಷ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

18 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

21 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

22 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

24 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago