Categories: Shivamogga

ದೇಹ ಮತ್ತು ಮನಸ್ಸುಗಳ ವ್ಯವಸ್ಥಿತ ನಿರ್ವಹಣೆಗೆ ಯೋಗ ಸಹಕಾರಿ ; ಡಾ||ಆರ್.ಸೆಲ್ವಮಣಿ


ಶಿವಮೊಗ: ದೇಹ ಮತ್ತು ಮನಸ್ಸನ್ನು ಆರೋಗ್ಯವಾಗಿಟ್ಟುಕೊಂಡಾಗ ದಿನನಿತ್ಯದ ಕೆಲಸ-ಕಾರ್ಯಗಳನ್ನು ನಿರೀಕ್ಷೆಯಂತೆ ನಿರ್ವಹಿಸಲು, ಸದಾ ಲವಲವಿಕೆಯಿಂದಿರಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಯೋಗಭ್ಯಾಸವನ್ನು ನಿಯಮಿತವಾಗಿ ರೂಢಿಸಿಕೊಳ್ಳುವುದು ಎಂದು ಶ್ರೇಯಸ್ಕರ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು.


ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.


ದಶಕದಿಂದೀಚೆಗೆ ಯೋಗದ ಮಹತ್ವದ ಜನರಿಗೆ ಅರಿವಾಗಿದ್ದು, ಹೆಚ್ಚಿನ ಜನ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಹೊಂದಿದ್ದು, ಯೋಗಾಭ್ಯಾಸದ ಕಡೆಗೆ ಒಲವು ಹೊಂದಿದ್ದಾರೆ. ಸರ್ಕಾರ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸಾರ್ವಜನಿಕರಲ್ಲಿ ಯೋಗದ ಕುರಿತು ಅರಿವು ಮೂಡಿಸುವಲ್ಲಿ ಸಕ್ರಿಯವಾಗಿವೆ. ಅಲ್ಲದೇ ನಗರದ ಹಲವೆಡೆ ಯೋಗ ತರಬೇತಿ ಕೇಂದ್ರಗಳು ಮಾರ್ಗದರ್ಶನ ನೀಡುತ್ತಿದ್ದು, ಆರೋಗ್ಯವಂತ ಸಮಾಜ ನಿರ್ಮಿಸುವಲ್ಲಿ ಪ್ರಮುಖಪಾತ್ರ ವಹಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದವರು ನುಡಿದರು.
ವ್ಯಾಯಾಮದ ಮೂಲಕ ಶರೀರದ ಮಾಂಸ ಖಂಡಗಳನ್ನು ಪುಷ್ಟಿಗೊಳಿಸಿ ಶರೀರಕ್ಕೆ ಗಂಭೀರ ನೋಡ ಕೊಡಿಸಬಹುದು. ಆದರೆ, ಯೋಗಾಸನದ ಮೂಲಕ ಶರೀರ, ಮನಸ್ಸು ಮತ್ತು ನರ-ನಾಡಿಗಳನ್ನು ಸದಾ ಕ್ರಿಯಾಶೀಲವಾಗಿಡುವಲ್ಲಿ ಸಹಕಾರಿಯಾಗಿದೆ. ಮಾತ್ರವಲ್ಲ ದೇಹದಲ್ಲಿ ಮೆದುಳು, ಹೃದಯ, ಶ್ವಾಸಕೋಶ, ಪಿತ್ತಕೋಶ, ಕಿಡ್ನಿ ಮುಂತಾದವುಗಳು ಪರಿಪೂರ್ಣವಾಗಿ ಕಾರ್ಯನಿರ್ವಹಿಸುವಂತೆ ಮಾಡಲು ಯೋಗಾಭ್ಯಾಸ ಉತ್ತಮವಾದುದಾಗಿದೆ ಎಂದವರು ತಿಳಿಸಿದರು.


ಕಾರ್ಯಕ್ರಮದಲ್ಲಿ ಶಿವಯೋಗ ಯೋಗ ಕೇಂದ್ರದ ತರಬೇತುದಾರ ಗೋಪಾಲಕೃಷ್ಣ ಅವರು ಸರಳ, ಸುಲಭ ಹಾಗೂ ಎಲ್ಲರೂ ಕಲಿಯಬಹುದಾದ ಯೋಗಾಸನ ಮತ್ತು ಪ್ರಾಣಾಯಾಮಗಳ ಕುರಿತು ಮಾಹಿತಿಯುಕ್ತ ಪ್ರಾತ್ಯಕ್ಷಿತೆ ಮತ್ತು ತರಬೇತಿ ನೀಡಿದರು. ಇದೇ ಸಂದರ್ಭದಲ್ಲಿ ಸಿದ್ಧಯೋಗ ಧ್ಯಾನ ಕೇಂದ್ರದ ಚಂದ್ರಶೇಖರ್ ಅವರು ಧ್ಯಾನ, ಅದರ ಮಹತ್ವ ಹಾಗೂ ಅನುಸರಣಾ ನಿಯಮಗಳ ಬಗ್ಗೆ ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್, ನೆಹರೂ ಯುವ ಕೇಂದ್ರದ ಸಮನ್ವಯಾಧಿಕಾರಿ ಕೆ.ಟಿ.ಕೆ.ಉಲ್ಲಾಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಸೇರಿದಂತೆ ಸಹಸ್ರಾರು ಸಂಖ್ಯೆಯ ಯೋಗಪಟುಗಳು, ಕಲಿಕಾರ್ಥಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ-ಸಿಬ್ಬಂಧಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago