Categories: Crime NewsShivamogga

ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಬಿಗಿ ಭದ್ರತೆಯಲ್ಲಿ ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರು

ಶಿವಮೊಗ್ಗ : ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಅವರನ್ನು ಬಿಗಿ ಭದ್ರತೆಯಲ್ಲಿ ಇಂದು ಇಲ್ಲಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ತೀರ್ಥಹಳ್ಳಿ ಠಾಣೆ ಇನ್‌ಸ್ಪೆಕ್ಟರ್ ಅಶ್ವಥ್ ಗೌಡ ನೇತೃತ್ವದಲ್ಲಿ ಕೋರ್ಟ್‌ಗೆ ಹಾಜರುಪಡಿಸಿದರು.

ಮಾವೋವಾದಿ ನಕ್ಸಲ್ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಬಿ.ಜಿ.ಕೃಷ್ಣಮೂರ್ತಿ, ಸಾಕೇತ್ ರಾಜನ್ ಸಾವಿನ ಬಳಿಕ ರಾಜ್ಯದಲ್ಲಿ ನಕ್ಸಲ್ ಹೋರಾಟವನ್ನು ಮುನ್ನಡೆಸಿದ್ದರು ಎಂದು ತಿಳಿದುಬಂದಿದೆ.

ತೀರ್ಥಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಎರಡು ಹಾಗೂ ಆಗುಂಬೆ ಠಾಣೆಯ ವ್ಯಾಪ್ತಿಯಲ್ಲಿ ಮೂರು ಪ್ರಕರಣಗಳಲ್ಲಿ ಬಿ.ಜಿ.ಕೃಷ್ಣಮೂರ್ತಿ ಪ್ರಮುಖ ಆರೋಪಿಯಾಗಿದ್ದಾರೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ನೆಮ್ಮಾರು ಬುಕ್ಕಡಿಬೈಲ್ ಗ್ರಾಮದ ನಿವಾಸಿ ಬಿ.ಜಿ.ಕೃಷ್ಣಮೂರ್ತಿ 2021ರ ನವೆಂಬರ್‌ನಲ್ಲಿ ಕೇರಳ ಪೊಲೀಸರಿಂದ ಬಂಧಿತರಾಗಿದ್ದರು.

ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ಬಾಡಿ ವಾರೆಂಟ್ ಮೇಲೆ ಮಂಗಳವಾರ ರಾತ್ರಿ ಶಿವಮೊಗ್ಗಕ್ಕೆ ಕರೆತಂದಿದ್ದ ಪೊಲೀಸರು ನ್ಯಾಯಾಲಯದ ಎದುರು ಹಾಜರುಪಡಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago