Categories: Shivamogga

ನಟ ದರ್ಶನ್ ಪ್ರಚಾರಕ್ಕೆ ಹೋಗುವುದರಲ್ಲಿ ತಪ್ಪೇನಿಲ್ಲ ; ಹೆಚ್‌ಡಿಕೆ

ಶಿವಮೊಗ್ಗ : ನಟ ದರ್ಶನ್ ಪ್ರಚಾರಕ್ಕೆ ಹೋಗುವುದರಲ್ಲಿ ತಪ್ಪೇನಿಲ್ಲ. ಪ್ರಜಾಪ್ರಭುತ್ವದಲ್ಲಿ ಯಾರು ಯಾರ ಪರ ಬೇಕಾದರೂ ಪ್ರಚಾರ ಮಾಡಬಹುದು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ದರ್ಶನ್ ಪ್ರಚಾರ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿ, ದರ್ಶನ್ ಪ್ರಚಾರಕ್ಕೆ ಹೋಗುವುದರಲ್ಲಿ ತಪ್ಪೇನಿಲ್ಲ. ಅವರ ಕರ್ತವ್ಯ ಅವರು ಮಾಡುತ್ತಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡುವಂಥದ್ದು ಏನೂ ಇಲ್ಲ ಎಂದರು.

ಜೆಡಿಎಸ್, ಬಿಜೆಪಿ ಒಗ್ಗಟ್ಟಾಗಿ ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದೇವೆ. ಶಿವಮೊಗ್ಗ ಕ್ಷೇತ್ರದಲ್ಲಿ ಉತ್ತಮವಾಗಿ ಹೊಂದಾಣಿಕೆ ನಡೆದಿದೆ. ಬಿಜೆಪಿ ಅಭ್ಯರ್ಥಿ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸಬೇಕು ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಚಾರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹೇಳಿಕೆ ಬಗ್ಗೆ ಮಾತನಾಡಿ, ಕುಮಾರಸ್ವಾಮಿ, ದೇವೇಗೌಡರು ಹೇಳಿದ್ದು 30-35 ವರ್ಷದ ಕಥೆ. ಅದಕ್ಕೆ ದಾಖಲೆ ಇದೆ ಎಂದು ದೇವೇಗೌಡ್ರು ಹೇಳಿದ್ದಾರೆ ಎಂದರು.

ರಾಜ್ಯದಲ್ಲಿ ಎಲ್ಲಾ 28 ಕ್ಷೇತ್ರಗಳಲ್ಲಿ ಮೈತ್ರಿಕೂಟ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಬಿಜೆಪಿಯಲ್ಲಿ ಭಿನ್ನಮತದ ವಿಚಾರ. ಬಿಜೆಪಿ ಹೈಕಮಾಂಡ್ ಇದು ಬಗೆಹರಿಸುತ್ತಿದೆ. ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿ ವಿಚಾರದ ಬಗ್ಗೆ ಅದೆಲ್ಲಾ ನಿಧಾನವಾಗಿ ಮಾತಾನಾಡೋಣ ಬನ್ನಿ. ವಿಚಾರದ ಬಗ್ಗೆ ಆಮೇಲೆ ಚರ್ಚೆ ಮಾಡೋಣ. ರಾಹುಲ್ ಗಾಂಧಿ ಪಾಪ ಪ್ರಚಾರ ಮಾಡಿದ್ದಾರೆ. ಅಧ್ಯಕ್ಷರು ಯಾರು, ಮುಖ್ಯಮಂತ್ರಿ ಯಾರು ಎಂಬುದು ಅವರಿಗೆ ಗೊತ್ತಿಲ್ಲ. ಇನ್ಯಾವ ರೀತಿ ಪ್ರಚಾರ ಮಾಡಿದ್ದಾರೆಂದು ನೀವು ತಿಳಿದುಕೊಳ್ಳಿ ಎಂದರು.

Malnad Times

Recent Posts

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

1 hour ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

2 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

7 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

8 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

21 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

24 hours ago