ನಿವೃತ್ತ ಉಪನ್ಯಾಸಕ ಪ್ರೊ. ತಿಮ್ಮಪ್ಪಗೌಡ ನಿಧನ

0 432

ತೀರ್ಥಹಳ್ಳಿ : ಪಟ್ಟಣದ ತುಂಗಾ ಮಹಾವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾಗಿದ್ದ ಪ್ರೊ. ತಿಮ್ಮಪ್ಪ ಗೌಡ (68) ಭಾನುವಾರ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.

ಪ್ರೊ.ತಿಮ್ಮಪ್ಪ ಗೌಡ ತಮ್ಮ ಉತ್ತಮ ಬೋಧನೆಯಿಂದಾಗಿ ಕಾಲೇಜಿನಲ್ಲಿ ಅಪಾರ ಶಿಷ್ಯ ವರ್ಗವನ್ನು ಹೊಂದಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಅವರ ಸ್ವಗೃಹ ಸೊಪ್ಪುಗುಡ್ಡೆಯಲ್ಲಿ ಇಡಲಾಗಿದ್ದು, ಸೊಮವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Leave A Reply

Your email address will not be published.

error: Content is protected !!