Categories: Sagara NewsShivamogga

ನೀವು ತಿಪ್ಪರಲಾಗ ಹಾಕಿದರೂ ಈ ಪ್ರಶ್ನೆಗೆ ಉತ್ತರ ಕೊಡೆಲ್ಲ ; ಪತ್ರಕರ್ತರ ಪ್ರಶ್ನೆಗೆ ಗರಂ ಸಚಿವ ಮಧು ಬಂಗಾರಪ್ಪ

ಸಾಗರ : ಪತ್ರಕರ್ತರ ಪ್ರಶ್ನೆಗೆ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ‌ ಮಧು ಬಂಗಾರಪ್ಪ (Madhu Bangarappa) ಗರಂ ಆದ ಪ್ರಸಂಗ ನಡೆದಿದೆ.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಬರ ನಿರ್ವಹಣೆ ಮತ್ತು ಕುಡಿಯುವ ನೀರು ಸಮಸ್ಯೆ ಕುರಿತು ಕರೆಯಲಾಗಿದ್ದ ಸಭೆಯಲ್ಲಿ, ಸ್ಥಳೀಯ ಶಾಸಕರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿಲ್ಲವಲ್ಲಾ ? ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಗರಂ ಆದ ಸಚಿವ ಮಧು ಬಂಗಾರಪ್ಪ ‘ಅದಕ್ಕೆಲ್ಲಾ ನಾನು ಉತ್ತರ ಕೊಡುವುದಿಲ್ಲ. ನಿಮ್ಮ ಬಳಿ ಬೇರೆ ಪ್ರಶ್ನೆ ಇಲ್ಲವೇ ?, ನೀವು ತಿಪ್ಪರಲಾಗ ಹಾಕಿದರೂ ಈ ಪ್ರಶ್ನೆಗೆ ಉತ್ತರ ಕೊಡುವುದಿಲ್ಲ’ ಎಂದು ಧಮ್ಕಿ ರೀತಿಯಲ್ಲಿ ಪತ್ರಕರ್ತರ ಬಾಯಿ ಮುಚ್ಚಿಸುವ ಕೆಲಸ ಮಾಡಿದ್ದು ಕಂಡು ಬಂದಿತು.

ಇದರ ಜೊತೆಗೆ ವಾರ್ತಾಧಿಕಾರಿ ತಾರತಮ್ಯ ನೀತಿ ವಿರುದ್ದ ಪತ್ರಕರ್ತರು ಸಚಿವರ ಗಮನಕ್ಕೆ ತಂದರೂ ಗಂಭೀರವಾಗಿ ಪರಿಗಣಿಸದೆ ಅವರ ಪರವಾಗಿಯೆ ಮಧು ಬಂಗಾರಪ್ಪ ಬ್ಯಾಟಿಂಗ್ ಮಾಡಿದ್ದು ಕಂಡು ಬಂದಿತು. ಪತ್ರಕರ್ತರ ಜೊತೆ ಕೇವಲವಾಗಿ ನಡೆದುಕೊಂಡ ವಾರ್ತಾಧಿಕಾರಿ ಮಾರುತಿ ಅವರ ವರ್ತನೆಯನ್ನು ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ.

ನರೇಗಾ ಸದ್ಬಳಕೆ ಮಾಡಿಕೊಳ್ಳಿ :
ಇನ್ನೂ ಬರದ ಪರಿಸ್ಥಿತಿಯಲ್ಲಿ ಕೂಲಿಯೂ ದೊರೆಯುತ್ತಿಲ್ಲ, ಕೆಲಸವೂ ಇಲ್ಲದ ಸ್ಥಿತಿ ಇದ್ದು, ನರೇಗಾ ಯೋಜನೆ ಮೂಲಕ ಉದ್ಯೋಗ ಕಲ್ಪಿಸುವತ್ತ ಗಮನ ಹರಿಸುವ ಅಗತ್ಯವಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
ನರೇಗಾ ಯೋಜನೆಯಡಿ ಹೆಚ್ಚಿನ ಮಾನವ ದಿನಗಳನ್ನು ನೀಡಲಾಗುತ್ತದೆ. ಗ್ರಾಮೀಣ ಪ್ರದೇಶದ ಜನರು ಇದರ ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.

ಕುಡಿಯುವ ನೀರಿಗೆ ತೊಂದರೆ ಆಗದು :
ಜಿಲ್ಲೆಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳು ಪ್ರಗತಿಯಲ್ಲಿದೆ. ಇದು ಪೂರ್ಣಗೊಳ್ಳಲು ಸಮಯ ತೆಗೆದುಕೊಳ್ಳುತ್ತದೆ. ಆದ್ದರಿಂದ ಜಲಜೀವನ್ ಮಿಷನ್ ಯೋಜನೆಯಲ್ಲಿ ಮನೆಮನೆ ಗಂಗೆ ಮೂಲಕ ಗ್ರಾಮೀಣ ಭಾಗಕ್ಕೆ ಕುಡಿಯುವ ನೀರು ಪೂರೈಸಲಾಗುತ್ತದೆ. ಯಾವ್ಯಾವ ಗ್ರಾಮಗಳು ಯೋಜನೆಯಲ್ಲಿ ಕೈಬಿಟ್ಟು ಹೋಗಿದೆಯೋ ಅಂತಹ ಪ್ರದೇಶಗಳ ಪಟ್ಟಿ ಮಾಡಿ ಕೊಡಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಜನರಿಗೆ ಕುಡಿಯುವ ನೀರು ಪೂರೈಕೆಗೆ ಯಾವುದೇ ತೊಂದರೆ ಆಗಬಾರದು ಎಂದರು.

ಕೆಲವು ಕಡೆಗಳಲ್ಲಿ ಟ್ರಾನ್ಸ್‌ಫಾರ್ಮರ್ ತೊಂದರೆಯಿಂದಾಗಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಇದರಿಂದ ಜಮೀನಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ಪಡವಗೋಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಮೂರು ತಿಂಗಳಿನಿಂದ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಎನ್ನುವ ದೂರು ನನಗೆ ಬಂದಿದ್ದು ತಕ್ಷಣ ಸರಿಪಡಿಸಿ ಎಂದು ತಾಕೀತು ಮಾಡಿದರು.

ಬಿಡಿಗಾಸು ಬಿಡುಗಡೆ ಮಾಡಿಸಲು ಆಗಿಲ್ಲ:
ಬರ ಪರಿಹಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿಯವರು ಅಧ್ಯಯನ ಪ್ರವಾಸ ನಡೆಸಿದ್ದಾರೆ. ಆದರೆ ಕೇಂದ್ರ ಸರ್ಕಾರದಿಂದ ಒಂದು ಬಿಡಿಗಾಸು ಬಿಡುಗಡೆ ಮಾಡಿಸಲು ಅವರಿಂದ ಆಗಿಲ್ಲ. ರಾಜ್ಯ ಸರ್ಕಾರ ಬರಪರಿಹಾರಕ್ಕೆ 17ಸಾವಿರ ಕೋಟಿ ರೂ. ಅಂದಾಜು ನಷ್ಟದ ವರದಿಯನ್ನು ಕೇಂದ್ರಕ್ಕೆ ನೀಡಿ ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ. ರಾಜ್ಯದ 16 ಜಿಲ್ಲೆಗಳಲ್ಲಿ ವಿಪರೀತ ಬರದ ಸ್ಥಿತಿ ಇದ್ದು ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಬಿಜೆಪಿಯವರು ಕೇಂದ್ರದ ಮೇಲೆ ಒತ್ತಡ ಹಾಕಿ ಹಣ ಬಿಡುಗಡೆ ಮಾಡಿಸಲಿ ಎಂದರು.

ಬಾಂಬ್ ಬೆದರಿಕೆ :
ರಾಜ್ಯದ 15 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಗೃಹ ಸಚಿವರಿಗೆ ತಿಳಿಸಲಾಗಿದೆ. ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಇತಿಹಾಸ ಪ್ರಸಿದ್ದವಾದ ಗಣಪತಿ ಕೆರೆಯ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಸ್ಥಳೀಯ ಶಾಸಕರು ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಸಚಿವರ ಗಮನಕ್ಕೆ ತರಲಾಗಿದ್ದು ತನಿಖೆ ನಡೆಸಲಾಗುತ್ತದೆ. ಜಿಲ್ಲೆಯಲ್ಲಿ ಯಾವುದೇ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದ್ದರೂ ನಿರ್ಧಾಕ್ಷಿಣ್ಯವಾಗಿ ತನಿಖೆ ನಡೆಸಲಾಗುತ್ತದೆ ಎಂದರು.

ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ, ಉಪ ಕಾರ್ಯದರ್ಶಿ ಸುಜಾತ, ತಹಶೀಲ್ದಾರ್ ಚಂದ್ರಶೇಖರ್, ಕಾರ್ಯನಿರ್ವಾಹಣಾಧಿಕಾರಿ ನಾಗೇಶ್ ಬ್ಯಾಲದ್ ಇನ್ನಿತರೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

15 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

19 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

19 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

22 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

22 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago