ತೀರ್ಥಹಳ್ಳಿ : ಕಳೆದ 08 ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ (Love Marriage) ನವವಿವಾಹಿತೆ ನೇಣು (Hang) ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ನಾಲೂರು ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನಡೆದಿದೆ.
ಶಮಿತಾ ಬಿ.ಯು (24) ಮೃತ ದುರ್ಧೈವಿ. ಮೃತರ ಪತಿ ವಿದ್ಯಾರ್ಥ್ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ವೃತ್ತಿ ಮಾಡುತ್ತಿದ್ದಾರೆ. ಮಂಗಳವಾರ ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ. ಕಳೆದ ಮಾರ್ಚ್ ನಲ್ಲಿ ಶಮಿತಾ ಹಾಗೂ ವಿದ್ಯಾರ್ಥ್ ಪ್ರೀತಿಸಿ ಮದುವೆಯಾಗಿದ್ದರು. ಮಂಗಳವಾರ ರಾತ್ರಿ ಅತ್ತೆ ಮಾವನಿಗೆ ತಿಳಿಸಿ ಶಮಿತಾ ರಾತ್ರಿ ಊಟ ಮಾಡಿ ಮಲಗಲು ಉಪ್ಪರಿಗೆ ಮೇಲೆ ತೆರಳಿದ್ದರು. ಆದರೆ ಬುಧವಾರ ಬೆಳಗ್ಗೆ ಬಾಗಿಲು ತೆರೆಯದಿದ್ದ ಹಿನ್ನಲೆಯಲ್ಲಿ ಕುಟುಂಬದವರು, ಕೆಲಸದವರು ಕಿಟಕಿಯಿಂದ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಯುವತಿಯ ಪೋಷಕರು ಆಗಮಿಸಿದ ನಂತರ ಬಾಗಿಲು ಒಡೆಯಲಾಗಿದೆ. ಮೃತದೇಹದ ಬಳಿ ಡೆತ್ನೋಟ್ ಲಭ್ಯವಾಗಿದ್ದು ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ ಎನ್ನಲಾಗಿದೆ. ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ತಹಶೀಲ್ದಾರ್ ಜಕ್ಕನ್ ಗೌಡರ್ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…