Categories: Shivamogga

ಪಾರದರ್ಶಕ-ತ್ವರಿತ-ಜನಪರ ಸೇವೆ ನೀಡಬೇಕು ; ಸಚಿವ ಕೃಷ್ಣಬೈರೇಗೌಡ


ಶಿವಮೊಗ್ಗ :‌ ಜನರ ನಿರೀಕ್ಷೆಯನ್ನು ಅರ್ಥ ಮಾಡಿಕೊಂಡು ತ್ವರಿತವಾಗಿ, ಜನಪರ ಸೇವೆಯನ್ನು ನೀಡಬೇಕೆಂದು ಕಂದಾಯ ಇಲಾಖೆ ಅಧಿಕಾರಿಗಳು/ಸಿಬ್ಬಂದಿಗಳಿಗೆ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಸೂಚಿಸಿದರು.


ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗದ್ದ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರ ಇರುವುದು ಜನ ಜೀವನ ಸುಲಲಿತಗೊಳಿಸುವುದಕ್ಕೆ. ಜನರು ಹೆಚ್ಚಾಗಿ ಬರುವುದು ಮಾತೃ ಇಲಾಖೆಯಾಗಿರುವ ಕಂದಾಯ ಇಲಾಖೆಗೆ. ಆದ್ದರಿಂದ ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಂಡು ಅವರನ್ನು ಹೆಚ್ಚು ಅಲೆದಾಡಿಸದೇ ಗುಣಮಟ್ಟದ ಮತ್ತು ತ್ವರಿತ ಸೇವೆಯನ್ನು ನೀಡಬೇಕು. ಈ ನಿಟ್ಟಿನಲ್ಲಿ ಆಡಳಿತ ಯಂತ್ರದಲ್ಲಿ ಬದಲಾವಣೆಗಳನ್ನು ತರಲಾಗುತ್ತಿದೆ, ಅದನ್ನು ಪರಿಣಾಮಕಾರಿಯಾಗಿ ಅಧಿಕಾರಿ/ಸಿಬ್ಬಂದಿ ವರ್ಗದವರು ಅನುಷ್ಟಾನಕ್ಕೆ ತರಬೇಕೆಂದರು.
2019 ರಿಂದ 2022 ರವರೆಗೆ ನೆರೆಸಂತ್ರಸ್ಥರ ಪುನರ್ವಸತಿ ಯೋಜನೆಯಡಿ ಶುರು ಮಾಡದೇ ಇರುವ ಮನೆಗಳ ಕುರಿತು ತಹಶೀಲ್ದಾರ್ ಪರಿಶೀಲಿಸಿ, ನೋಟಿಸ್ ನೀಡಿ ಪ್ರಕರಣ ಇತ್ಯರ್ಥಪಡಿಸಬೇಕು. ಹಾಗೂ ಬಾಕಿ ಉಳಿಸಿರುವ ಶಾಲೆ-ಅಂಗನವಾಡಿ ಸಣ್ಣಪುಟ್ಟ ಕೆಲಸಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕೆಂದು ಸಂಬಂಧಿಸಿದ ಅಧಿಕಾರಿಗೆ ತಾಕೀತು ಮಾಡಿದರು.


ಸಮಸ್ಯಾತ್ಮಕ ಪೈಕಿ ಆರ್‍ ಟಿಸಿ ಗಳನ್ನು ಒಂದುಗೂಡಿಸಿ ಸರ್ವೇ ಮಾಡಿಸಲು ಕ್ರಮ ವಹಿಸಲಾಗುತ್ತಿದ್ದು ಜನರ ಬಹಳ ವರ್ಷಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಸುಧಾರಣೆ ಕ್ರಮಗಳು ಆಗುತ್ತಿವೆ. ಆದರೆ ಇನ್ನೂ ಹಲವಾರು ಸವಾಲುಗಳಿವೆ ಎಂದರು.
ಜಿಲ್ಲೆಯಲ್ಲಿ 97 ಸಾವಿರ ಫಾರ್ಮ್ 57 ಅರ್ಜಿಗಳು ಬಂದಿವೆ. ಇವನ್ನು ಇತ್ಯರ್ಥಪಡಿಸಲು ಸಮಿತಿ ರಚನೆ ಮಾಡಲಾಗುವುದು. ಸದರಿ ಸಮಿತಿಯು ನಿಜವಾದ ಬಡ ಸಾಗುವಳಿದಾರರನ್ನು ಗುರುತಿಸಿ ಅವರ ಜಮೀನಿಗೆ ತ್ವರಿತವಾಗಿ ಹಕ್ಕುಪತ್ರ ನೀಡುವ ಕೆಲಸ ಆಗಬೇಕು. ರೈತರ ಹೆಸರಿನಲ್ಲಿ ಬೇರೆಯವರು ಭೂಮಿ ಕಬಳಿಸುವಂತಾಗಬಾರದು. ಕಡೂರು ತಾಲ್ಲೂಕಿನಲ್ಲಿ ಅನರ್ಹರಿಗೆ ಸಾವಿರಾರು ಎಕರೆ ಜಮೀನು ಮಂಜೂರು ಮಾಡಿದ ಅಧಿಕಾರಿಗಳ ವಿರುದ್ದ ಶಿಸ್ತಿನ ಕ್ರಮ ವಹಿಸಲಾಗಿದೆ. ಆದ್ದರಿಂದ ಬಹಳ ಎಚ್ಚರಿಕೆಯಿಂದ ಅಧಿಕಾರಿಗಳು ಕೆಲಸ ಮಾಡಬೇಕು. ಅರ್ಹರಿಗೆ ಅನುಕೂಲ ಮಾಡಿಕೊಡಬೇಕೆಂದು ಸೂಚಿಸಿದರು.


ಫಾರಂ 57 ವಿಲೇ ಮಾಡಲು ತಹಶೀಲ್ದಾರರಿಗೆ ಹೊಸ ಆ್ಯಪ್ ನೀಡಲಾಗುವುದು. ಇದರಲ್ಲಿ ಡಾಟಾ ಅಪ್‍ಲೋಡ್ ಮಾಡಿದಾಗ ಅದು ಸರ್ಕಾರಿ ಅಥವಾ ಅರಣ್ಯ ಭೂಮಿ ಎಂದು ಗೊತ್ತಾಗುತ್ತದೆ. 15 ವರ್ಷದ ಸ್ಯಾಟಲೈಟ್ ಇಮೇಜ್ ಸಿಗಲಿದೆ. ಗ್ರಾಮ ಲೆಕ್ಕಿಗರು ಪ್ರತಿ ಮೂರು ತಿಂಗಳಿಗೆ ಕ್ಷೇತ್ರ ಭೇಟಿ ನೀಡಿ ಒತ್ತುವರಿ ಬಗ್ಗೆ ಪರಿವೀಕ್ಷಿಸಿ ವರದಿ ನೀಡಬೇಕು ಎಂದ ಅವರು ನಿಜವಾದ ಬಗರ್‍ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವುದು ಮತ್ತು ಸರ್ಕಾರಿ ಜಾಗವನ್ನು ಭದ್ರಪಡಿಸುವ ಕೆಲಸವನ್ನು ಕಂದಾಯ ಇಲಾಖೆ ಅಧಿಕಾರಿ/ಸಿಬ್ಬಂದಿ ಮಾಡಬೇಕು ಎಂದರು.
ಜೆಸ್ಲಿಪ್ ಮತ್ತು ಪೌತಿ ಖಾತೆ ಬಿಟ್ಟು ಉಳಿದ ಖಾತೆಗಳನ್ನು ಸ್ವಯಂಚಾಲಿತವಾಗಿ ಮಾಡುವ ಯೋಜನೆ ಇದೆ. ವಿವಾದಿತ ಮ್ಯುಟೇಷನ್‍ಗಳ ಪೆಂಡಿನ್ಸಿ ಜಿಲ್ಲೆಯಲ್ಲಿ ಕಡಿಮೆ ಇದೆ. ಇಂತಹ ಪ್ರಕರಣ ಇತ್ಯರ್ಥಕ್ಕೆ ಸರಾಸರಿ 1 ವರ್ಷ ತೆಗೆದುಕೊಂಡಿದ್ದ ಸಮಯವನ್ನು 135 ದಿನಗಳಿಗೆ ಇಳಿಸಿದ್ದೀರಿ. ಉತ್ತಮ ಬೆಳಿವಣಿಗೆ ಆದರೆ ಇದು ಗರಿಷ್ಟ 90 ದಿನಗಳಲ್ಲಿ ವಿಲೇ ಆಗಬೇಕು. ತಾವು 60 ರಿಂದ 65 ದಿನಗಳಲ್ಲಿ ವಿಲೇ ಮಾಡಲು ಪ್ರಯತ್ನಿಸಬೇಕು.
ಶಿವಮೊಗ್ಗದಲ್ಲಿ ಭೂಮಿ ಮಂಜೂರಾತಿ ವಿಷಯದಲ್ಲಿ ಹೆಚ್ಚಿನ ಸಮಸ್ಯೆಗಳಿವೆ. ಜಿಲ್ಲಾಧಿಕಾರಿಗಳು ಶರಾವತಿ ಸಂತ್ರಸ್ತರು, ಹಾಗೂ ಇತರೆ ಭೂಮಿ ಮಂಜೂರಾತಿ ಕುರಿತು ನನ್ನ ಗಮನಕ್ಕೆ ತಂದಿದ್ದಾರೆ. ಅರಣ್ಯ ಮತ್ತು ಕಂದಾಯ ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ ಇದನ್ನು ಬಗೆಹರಿಸಲು ಕ್ರಮ ವಹಿಸಲಾಗುವುದು.
ಶರಾವತಿ ಸಂತ್ರಸ್ತರಿಗೆ ಪರಿಹಾರ ಒದಗಿಸಲು ತಜ್ಞರ ಸಮಿತಿ ರಚಿಸಿ ಪರಿಹಾರಕ್ಕೆ ಪ್ರಯತ್ನಿಸಲಾಗುತ್ತಿದೆ. ಸರ್ಕಾರದಿಂದ ಈ ಕುರಿತು ಸೆಟ್ಲ್ಮೆಂಟ್ ಮಾಡಲು ‘ಸೆಟ್ಲ್ಮೆಂಟ್ ಆಫೀಸರ್’ ನೇಮಕ ಮಾಡಲಾಗುತ್ತಿದೆ. ಶೇ.50 ಕಂದಾಯ ಭೂಮಿ ಇದ್ದರೆ, ಶೇ.50 ಅರಣ್ಯ ಭೂಮಿ ಈ ರೀತಿ ಸಮಸ್ಯೆಗಳಿವೆ. ಭೂಮಿ ಸರ್ವೇ ಕಾರ್ಯ ತ್ವರಿತವಾಗಿ ಆಗಬೇಕಿದೆ.ಅದಕ್ಕೆ ಲೈಸನ್ಸ್ಡ್ ಸರ್ವೇಯರ್ ಅಗತ್ಯವಿದೆ ಎಂದು ಜಿಲ್ಲಾಧಿಕರಿಗಳು ತಿಳಿಸಿದ್ದು, ಭೂಮಾಪನ ಇಲಾಖೆ ಆಯುಕ್ತರು ಅಕ್ಕಪಕ್ಕದ ಜಿಲ್ಲೆಯ ಸರ್ವೇಯರ್ ಅಥವಾ ನೇಮಕಾತಿ ಹೊಂದಿದ ಸರ್ವೇಯರ್‍ ಅನ್ನು ನಿಯೋಜಿಸುವಂತೆ ಹಾಗೂ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಹಕರಿಸುವಂತೆ ತಿಳಿಸಿದರು.


ಆರ್‍ ಟಿಸಿ ಮಿಸ್‍ಮ್ಯಾಚ್ 5313 ಪ್ರಕರಣಗಳು ಬಾಕಿ ಇವೆ. ಇದರಲ್ಲಿ ಅರಣ್ಯಕ್ಕೆ ಸಂಬಂಧಿಸಿದ ಸುಮಾರು 2000 ಜಟಿಲ ಪ್ರಕರಣಗಳಿವೆ ಎಂದು ಡಿಸಿ ಯವರು ತಿಳಿಸಿದ್ದು, ಇನ್ನುಳಿದ ಪ್ರಕರಣಗಳನ್ನು ತ್ವರಿತವಾಗಿ ವಿಲೇ ಮಾಡುವಂತೆ ಸೂಚಿಸಿದ್ದೇನೆ.


ಗ್ರಾಮ ಲೆಕ್ಕಿಗರ ನೇಮಕಾತಿ ಆದಾಗಿನಿಂದ ಅವರಿಗೆ ತರಬೇತಿ ನೀಡಿಲ್ಲ. ಗುಣಮಟ್ಟದ ಮತ್ತು ತ್ವರಿತ ಸೇವೆ ನೀಡಲು ಅನುವಾಗುವಂತೆ ಅವರಿಗೆ ತರಬೇತಿ ನೀಡಬೇಕು. ಡಿಸಿ, ಎಸಿ, ತಹಶೀಲ್ದಾರ್‍ರವರು ತಾವು ನಡೆಸುವ ಕೋರ್ಟ್‍ಗಳಲ್ಲಿ ನೀಡುವ ಆದೇಶಗಳ ಗುಣಮಟ್ಟ ಸುಧಾರಿಸಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ತಜ್ಞರನ್ನೊಳಗೊಂಡು ಒಂದು ಅರ್ಧ ದಿನದ ಕಾರ್ಯಾಗಾರ ಏರ್ಪಡಿಸಬೇಕು. ಜನರಿಗೆ ಅನುಕೂಲವಾಗುವಂತೆ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು.
– ಕೃಷ್ಣಬೈರೇಗೌಡ, ಕಂದಾಯ ಸಚಿವರು

ಸರ್ವೇಯರ್‍ಗಳ ಕೊರತೆ ಹೆಚ್ಚಿದೆ. ಆದ್ದರಿಂದ ಸರ್ವೇ ಇಲಾಖೆ ವಯಿತಿಯಿಂದ 2000 ಲೈಸೆನ್ಸ್ಡ್ ಸರ್ವೇಯರ್ ಮತ್ತು 354 ಸರ್ಕಾರಿ ಸರ್ವೇಯರ್ ನೇಮಕಕ್ಕೆ ಸೂಚಿಸಲಾಗಿದ್ದು, ಜಿಲ್ಲೆಗೆ ಅಗತ್ಯವಾದ ಸರ್ವೇಯರ್‍ಗಳನ್ನು ಅಕ್ಕಪಕ್ಕದ ಜಿಲ್ಲೆಯಿಂದ ಒದಗಿಸಲು ಹಾಗೂ ಹೊಸದಾಗಿ ನೇಮಕಗೊಂಡ ಸರ್ವೇಯರ್ ನಿಯೋಜಿಸುವಂತೆ ಇಲಾಖೆ ಆಯುಕ್ತರಿಗೆ ತಿಳಿಸಿದ್ದೇನೆ. ಹಾಗೂ 1500 ರಿಂದ 1700 ಗ್ರಾಮ ಲೆಕ್ಕಿಗರನ್ನು ನೇಮಕ ಮಾಡಲು ಸೂಚಿಸಲಾಗಿದೆ.


ಇ-ಆಫೀಸ್ ಅನುಷ್ಟಾನ:

ಆಡಳಿತದಲ್ಲಿ ವೇಗ ಮತ್ತು ಪಾರದರ್ಶಕತೆ ತರಲು ಹಾಗೂ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಇ-ಆಫೀಸ್ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ತಹಶೀಲ್ದಾರ್ ಕಚೇರಿಯಿಂದ ಮೇಲ್ ಹಂತದ ಕಚೇರಿವರೆಗೆ ಜಾರಿಗೆ ತರಬೇಕು. ಇಂದು ಶಿವಮೊಗ್ಗ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿದ ವೇಳೆ ಇ-ಆಫೀಸ್ ಪರಿಣಾಕಾರಿಯಾಗಿ ಜಾರಿಯಾಗದ ಬಗ್ಗೆ ಗಮನಿಸಿದ್ದೇನೆ. ಜನಪರವಾದ ಮತ್ತು ವೇಗದ ಸೇವೆ ನೀಡಲು ಇ-ಆಫೀಸ್ ಅತ್ಯವಶ್ಯವಾಗಿದ್ದು ಜಿಲ್ಲಾಧಿಕಾರಿಗಳು ಇನ್ನು 15 ದಿನಗಳಲ್ಲಿ ಅನುಷ್ಟಾನಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ ಎಂದರು.


ನೋಂದಣಿ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಮಾತನಾಡಿದ ಸಚಿವರು, ಇಲಾಖೆಯಲ್ಲಿ ಸುಮಾರು ಐದು ವರ್ಷಗಳಿಂದ ಮಾರುಕಟ್ಟೆ ಬೆಲೆ ಪರಿಷ್ಕರಣೆಯಾಗಿರಲಿಲ್ಲ. ಗೈಡೆನ್ಸ್ ದರ ಮತ್ತು ಮಾರುಕಟ್ಟೆ ದರಕ್ಕೆ ಸುಮಾರು ನಾಲ್ಕು ಪಟ್ಟು ವ್ಯತ್ಯಾಸವಿದೆ. ಗೈಡೆನ್ಸ್ ದರಕ್ಕಿಂತ ಮಾರುಕಟ್ಟೆ ದರ 3 ರಿಂದ 4 ನಾಲ್ಕು ಹೆಚ್ಚಿದೆ. ಈ ತಾರತಮ್ಯ ಸರಿಪರಿಸುವ ಪ್ರಕ್ರಿಯೆ ನಡೆಯುತ್ತಿದೆ. ಮಾರುಕಟ್ಟೆ ದರವನ್ನು ಪರಿಷ್ಕರಿಸಲಾಗಿದ್ದು, ಆಕ್ಷೇಪಣೆಗಳಿಗೆ ಆಹ್ವಾನ ನೀಡಲಾಗಿದೆ. ಈ ಕುರಿತು ಆಕ್ಷೇಪಣೆಗಳನ್ನು ಜನರು ಸಲ್ಲಿಸಬಹುದು. ನೋಂದಣಿ ಕಚೇರಿಯಲ್ಲಿ ಸರ್ವರ್ ಅಲ್ಲ ಬದಲಾಗಿ ನೆಟ್‍ವರ್ಕ್ ಸಮಸ್ಯೆ ಇದೆ ಎಂದ ಸಚಿವರು ಈ ಸಮಸ್ಯೆ ಬಗೆಹರಿಸುವ ಕುರಿತು ಅಧಿಕಾರಿಗೆ ಸೂಕ್ತ ಸೂಚನೆ ಮತ್ತು ಸಲಹೆಯನ್ನು ನೀಡಿದರು.
ಸಭೆಯಲ್ಲಿ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಸಬ್‍ರಿಜಿಸ್ಟ್ರಾರ್ ಕಚೇರಿ ಸ್ಥಳಾಂತರ, ಈ ಕಚೇರಿಗೆ ಸಿಎ ನಿವೇಶನ ಮಂಜೂರಾತಿ, ತಹಶೀಲ್ದಾರ್ ಕಛೇರಿ ಮೂಲಸೌಕರ್ಯ ಅಭಿವೃದ್ದಿ, ಹಕ್ಕುಪತ್ರ ವಿತರಣೆ, ರುದ್ರಭೂಮಿಗೆ ಜಾಗ, ಗೋಶಾಲೆ ನಿರ್ಮಾಣದ ಕುರಿತು ಮನವಿ ಸಲ್ಲಿಸಿದರು.


ಸಭೆಯಲ್ಲಿ ಸಚಿವರು ಗ್ರಾಮ ಲೆಕ್ಕಿಗರು, ಆರ್‍ಐ ಸೇರಿದಂತೆ ಅಧಿಕಾರಿ/ಸಿಬ್ಬಂದಿ ವರ್ಗದಿಂದ ಮುಕ್ತವಾಗಿ ಸಲಹೆಗಳನ್ನು ಮತ್ತು ಮನವಿಗಳನ್ನು ಸ್ವೀಕರಿಸಿದರು.
ಸಭೆಯಲ್ಲಿ ಶಾಸಕಿ ಶಾರದಾ ಪೂರ್ಯಾನಾಯ್ಕ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಠಾರಿಯಾ, ಕಂದಾಯ ಇಲಾಖೆ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್, ಭೂಮಾಪನ ಇಲಾಖೆ ಆಯುಕ್ತರಾದ ಜೆ.ಮಂಜುನಾಥ್, ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪಿ ವಸಂತಕುಮಾರ್, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್, ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

1 week ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

1 week ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 week ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

1 week ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago