Categories: Crime NewsShivamogga

ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದ ಸೆಕ್ರೇಡ್‍ಹಾರ್ಟ್ ಕಾಲೇಜಿನ ಪ್ರಾಂಶುಪಾಲನ ಜಾಮೀನು ಅರ್ಜಿ ವಜಾ !

ಶಿವಮೊಗ್ಗ: ಶಾಲಾ ವಿದ್ಯಾರ್ಥಿನಿ/ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ಕೋಟೆ ಪೊಲೀಸ್ ಠಾಣೆಯಲ್ಲಿ ಸೆಕ್ರೆಡ್‍ಹಾರ್ಟ್ ಕಾಲೇಜಿನ ಪ್ರಾಂಶುಪಾಲ ಫ್ರಾನ್ಸಿಸ್ ಫರ್ನಾಂಡೀಸ್ ಇವರ ಮೇಲೆ ಪೋಕ್ಸೋ ಪ್ರಕರಣವು ದಾಖಲಾಗಿದ್ದು, ಆರೋಪಿಯನ್ನು ಕೋಟೆ ಪೊಲೀಸರು ದಸ್ತಗಿರಿ ಮಾಡಿ, ನ್ಯಾಯಾಂಗ ಬಂಧನದಲ್ಲಿರಿಸಲಾಗಿತ್ತು.

ಆರೋಪಿಯು ತನಗೆ ಜಾಮೀನು ನೀಡುವಂತೆ ಕೋರಿ ಅರ್ಜಿಯನ್ನು ಸಲ್ಲಿಸಿಕೊಂಡಿದ್ದು, ಈ ಅರ್ಜಿಯನ್ನು 1ನೇ ಹೆಚ್ಚುವರಿ ಜಿಲ್ಲಾ & ವಿಶೇಷ ಸತ್ರ ನ್ಯಾಯಾಲಯ, (ಎಫ್ ಟಿಎಸ್ಸಿ-1) ಶಿವಮೊಗ್ಗ ಇಲ್ಲಿ ವಿಚಾರಣೆ ನಡೆಸಿ, ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದೆ.

ಸದರಿ ಪ್ರಕರಣದ ಜಾಮೀನು ಅರ್ಜಿಯನ್ನು ತಿರಸ್ಕರಿಸುವಂತೆ ಮಮತಾ ಬಿ.ಎಸ್.ಸರ್ಕಾರಿ ಅಭಿಯೋಜಕರು, ಶಿವಮೊಗ್ಗ ರವರು ವಾದ ಮಂಡಿಸಿದ್ದು, 1ನೇ ಜಿಲ್ಲಾ & ವಿಶೇಷ ಪತ್ರ ನ್ಯಾಯಾಲಯ (ಎಫ್‍ಟಿಎಸ್‍ಸಿ )ದ ನ್ಯಾಯಾಧೀಶರಾದ ಲತಾ ರವರು ಆರೋಪಿ ಫ್ರಾನ್ಸಿಸ್ ಫರ್ನಾಂಡೀಸ್ ಇವರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಮಾಡಿರುತ್ತಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

19 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

23 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

24 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago