Categories: Shivamogga

ಪ್ರೀತಿ ಮತ್ತು ಕಾಳಜಿಯಿಂದ ಪರಿಸರವನ್ನು ಉಳಿಸಿ ಮುಂದಿನ ಪೀಳಿಗೆಗೆ ನೀಡಬೇಕು ; ಆರಗ ಜ್ಞಾನೇಂದ್ರ


ಶಿವಮೊಗ್ಗ: ಪ್ರಾಣಿ-ಪಕ್ಷಿ-ವನ ಸೇರಿದಂತೆ ನಮ್ಮ ಪರಿಸರವನ್ನು ಪ್ರೀತಿ ಮತ್ತು ಕಾಳಜಿಯಿಂದ ಉಳಿಸಿ ಮುಂದಿನ ಪೀಳಿಗೆಗೆ ನೀಡಿದರೆ ವಿಶ್ವ ಪರಿಸರ ದಿನ ಸಾರ್ಥಕವಾಗುತ್ತದೆ. ಆದ್ದರಿಂದ ಇಂದೇ ಈ ನಿಟ್ಟಿನಲ್ಲಿ ನಾವು ಸಂಕಲ್ಪ ತೊಡೋಣ ಎಂದು ತಿರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ ಹೇಳಿದರು.


ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪ್ರವಾಸೋದ್ಯಮ ಇಲಾಖೆ, ಪ್ರವಾಸೋದ್ಯಮ ಮಂತ್ರಾಲಯ, ಭಾರತ ಸರ್ಕಾರ, ಬೆಂಗಳೂರು ಮತ್ತ ಅರಣ್ಯ ಇಲಾಖೆ ಶಿವಮೊಗ್ಗ ಇವರ ಸಹಯೋಗದಲ್ಲಿ ಇಂದು ಸಕ್ರೆಬೈಲಿನ ಆನೆ ಬಿಡಾರದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಪ್ಲಾಸ್ಟಿಕ್ ಮಾಲಿನ್ಯ ತೊಲಗಿಸಿ’ ಎಂಬ ಘೋಷವಾಕ್ಯದಡಿ ಈ ಸಾಲಿನ ಪರಿಸರ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಪ್ಲಾಸ್ಟಿಕ್ ಬಳಕೆ ನಮಗೆ ಮಾರಕ. ಪ್ಲಾಸ್ಟಿಕ್ ಇಲ್ಲದ ಕಾಲದಲ್ಲಿಯೂ ನಾವು ನೆಮ್ಮದಿಯಿಂದ ಬದುಕುತ್ತಿದ್ದೆವೆವು. ಮಾರಕವಾಗಿರುವ ಪ್ಲಾಸ್ಟಿಕ್‍ನ್ನು ಉಪಯೋಗಿಸುವುದಿಲ್ಲವೆಂಬ ಸಂಕಲ್ಪವನ್ನು ಈಗಿನಿಂದಲೇ ಮಾಡೋಣ ಎಂದು ಕರೆ ನೀಡಿದರು.


ಪ್ರಕೃತಿ ನಮ್ಮ ಆಸೆಗಳನ್ನು ಪೂರೈಸುತ್ತದೆ, ದುರಾಸೆಯನ್ನಲ್ಲ ಎಂಬುದನ್ನು ನೆನಪಿಟ್ಟಿ, ಪ್ರಜ್ಞಾವಂತರಾಗಿ ಪರಿಸರದ ಕಾಳಜಿ ವಹಿಸಬೇಕು. ಜಿಲ್ಲೆಯಲ್ಲಿ ಹಿಂದಿದ್ದ ನಿತ್ಯಹರಿದ್ವರ್ಣದ ಕಾಡು ಕಳೆದುಹೋಗುತ್ತಿದೆ. ತಾಪಮಾನ ಏರುತ್ತಿದೆ. ಆದ್ದರಿಂದ ನಮ್ಮನೆಲ್ಲ ರಕ್ಷಿಸುವ ಪರಿಸರವನ್ನು ಉಳಿಸಲು ನಾವು ಕಾಳಜಿಯಿಂದ ವರ್ತಿಸಬೇಕು. ಒಂದೊಂದು ಹನಿ ನೀರು ನಮ್ಮ ದೇಹದ ಒಂದೊಂದು ಹನಿ ರಕ್ತದಂತೆ. ಅದನ್ನು ಕಾಪಾಡಬೇಕು. ಪ್ಲಾಸ್ಟಿಕ್ ಸೇರಿದಂತೆ ಎಲ್ಲ ರೀತಿಯ ಮಾಲಿನ್ಯ ತಡೆದು ಪರಿಸರ ಸಂರಕ್ಷಣೆ ಮಾಡುವ ಪ್ರತಿಜ್ಞೆ ಮಾಡೋಣ ಎಂದರು.


ಪರಿಸರ ತಜ್ಞರಾದ ಬಿ.ಎಂ.ಕುಮಾರಸ್ವಾಮಿ ಮಾತನಾಡಿ, ಕೈಗಾರಿಕಾ ಕ್ರಾಂತಿ ಆರಂಭವಾಗಿ ಕೇವಲ 120 ವರ್ಷಗಳಲ್ಲಿ ಪರಿಸರಕ್ಕೆ ಎಷ್ಟೊಂದು ಹಾನಿಯಾಗಿದೆ ಎಂಬುದನ್ನು ಕಾಣಬಹುದು. ಕೈಗಾರಿಕಾ ಕ್ರಾಂತಿಯ ಪರಿಣಾಮವಾಗಿ ಪಶ್ಚಿಮ ಯೂರೋಪ್ ಮತ್ತು ಅಮೇರಿಕಾ ದೇಶಗಳು ಯಥೇಚ್ಚವಾಗಿ ಕಲ್ಲಿದ್ದಲು, ಪೆಟ್ರೋಲಿಯಂ ಬಳಕೆ ಮಾಡಿದ್ದರಿಂದ ಕಾರ್ಬನ್ ಡೈ ಆಕ್ಸೈಡ್ ಪ್ರಮಾಣ ಹೆಚ್ಚಾಗಿ ಪರಿಸರ ನಾಶಕ್ಕೆ ಕಾರಣವಾಯಿತು.
1972 ರಲ್ಲಿ ಮೊದಲ ಬಾರಿಗೆ ವಿಶ್ವಸಂಸ್ಥೆ ವತಿಯಿಂದ ಪರಿಸರ ಸಂರಕ್ಷಣೆ ಕುರಿತು ಸ್ಟಾಕ್‍ಹೋಂ ನಲ್ಲಿ ಜೂನ್ 5 ರಂದು ಜಾಗತಿಕ ಸಮ್ಮೇಳನ ನಡೆಯಿತು. ಅದರ ನೆನಪಿನ ಅಂಗವಾಗಿ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಆಚರಿಸಲಾಗುತ್ತಿದೆ.


ಸಾವಿರಾರು ಮಾಲಿನ್ಯಗಳಲ್ಲಿ ಪ್ಲಾಸ್ಟಿಕ್ ಮಾಲಿನ್ಯ ಒಂದಾಗಿದೆ. ಪ್ಲಾಸ್ಟಿಕ್‍ನಿಂದ ಹಲವಾರು ಉಪಯೋಗಗಳಿದ್ದರೂ ಅಷ್ಟೇ ಅಪಾಯಕಾರಿಯಾಗಿದೆ. ಪ್ಲಾಸ್ಟಿಕ್ ಅದರಲ್ಲೂ ಏಕಬಳಕೆಯ ಪ್ಲಾಸ್ಟಿಕ್ ಅತ್ಯಂತ ಅಪಾಯಕಾರಿ. ಪ್ಲಾಸ್ಟಿಕ್ ಇತರೆ ಜೈವಿಕ ವಸ್ತುಗಳಂತೆ ಜೈವಿಕ ವಿಘಟನೆಗೆ ಒಳಗಾಗದ ಕಾರಣ ಸಾವಿರಾರು ವರ್ಷ ಮೈಕ್ರೋ ಪ್ಲಾಸ್ಟಿಕ ಕಣಗಳಾಗಿ ಪರಿಸರದಲ್ಲಿ, ನಾವು ಉಸಿರಾಡುವ ಗಾಳಿಯಲ್ಲಿ ಸೇರಿ ಹಾನಿಯುಂಟು ಮಾಡುತ್ತಿದೆ. ಭೂಮಿಯ ಮೈಕ್ರೊ ಆರ್ಗಾನಿಸಮ್‍ನ ಕೊಲ್ಲುತ್ತಿದೆ.


ಸಮುದ್ರ-ಸಾಗರಗಳಿಗೆ ಸೇರಿಕೊಂಡು ಸಾಗರ ಮಾಲಿನ್ಯದ ಮೂಲಕ ಜಲಚರ ಸರಪಳಿಗೆ ಹಾನಿ ಮಾಡುತ್ತಿದೆ. 1922 ರ ಯುಎನ್‍ಓ ವರದಿ ಪ್ರಕಾರ ವಿಶ್ವದಲ್ಲಿ ಪ್ರತಿ ವರ್ಷ 430 ಮಿಲಿಯನ್ ಟನ್ ಪ್ಲಾಸ್ಟಿಕ್ ಉತ್ಪಾದನೆಯಾಗುತ್ತಿದೆ. ಅದರಲ್ಲಿ ಶೇ.51 ಏಷಿಯಾ ರಾಷ್ಟ್ರದಲ್ಲಿ ಅದರಲ್ಲೂ ಶೇ.71 ಚೀನಾ ದೇಶದಲ್ಲಿ ಆಗುತ್ತಿದೆ. 80 ಲಕ್ಷ ಟನ್‍ನಷ್ಟು ಪ್ಲಾಸ್ಟಿಕ್ ಸಾಗರ ಸೇರುತ್ತಿದೆ. ಏಕ ಬಳಕೆಯ ಪ್ಲಾಸ್ಟಿಕ್ ನಮ್ಮ ದೊಡ್ಡ ಶತ್ರುವಾಗಿದ್ದು, ನಾವು ಬಳಸಿ ಎಸೆದ ಪ್ಲಾಸ್ಟಿಕ್ ಸಾವಿರಾರು ವರ್ಷ ಮಾಲಿನ್ಯ ಉಂಟು ಮಾಡುತ್ತದೆ. ವರ್ಷಕ್ಕೆ 35 ಲಕ್ಷ ಟನ್ ಪ್ಲಾಸ್ಟಿಕ್ ವೇಸ್ಟ್ ಉತ್ಪಾದನೆಯಾಗುತ್ತಿದ್ದು ಅದರಲ್ಲಿ ಶೇ.68 ಏಕಬಳಕೆ ಪ್ಲಾಸ್ಟಿಕ್ ಆಗಿದೆ.


ಏಕ ಬಳಕೆ ಪ್ಲಾಸ್ಟಿಕ್ ಮಾಲಿನ್ಯದ ದೊಡ್ಡ ಕಾರಣ ಏಕಬಳಕೆ ನೀರಿನ ಬಾಟಲ್ ಮಾರುಕಟ್ಟೆ ವ್ಯಾಪಕವಾಗಿ ನಮ್ಮಲ್ಲಿ ಬೆಳೆಯುತ್ತಿರುವುದು. ಮದುವೆ ಮನೆಗಳಲ್ಲಿ ಸಾವಿರಾರು ನೀರಿನ ಬಾಟಲ್ ಬಳಸಿ ತಿಪ್ಪೆಗೆ ಎಸೆಯಲಾಗುತ್ತಿದೆ. ಕೇಂದ್ರ ಸರ್ಕಾರ 2022 ರ ಜುಲೈ ಲ್ಲಿ 19 ರೀತಿಯ ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸಿದ್ದರೂ ಅದರ ಜಾರಿ ವಿಫಲವಾಗಿದೆ. ಕಾರಣ ನಾವುಗಳು. ಪ್ಲಾಸ್ಟಿಕ್ ಮಾಲಿನ್ಯಕ್ಕೆ ಕಾರಣ ನಾವೆ. ಪರಿಹಾರವೂ ನಮ್ಮ ಕೈಯಲ್ಲಿದ್ದು ಇನ್ನು ಮುಂದೆ ಪ್ಲಾಸ್ಟಿಕ್ ಕವರ್, ಸ್ಟ್ರಾ ಇತ್ಯಾದಿ ಏಕಬಳಕೆ ಪ್ಲಾಸ್ಟಿಕ್ ಬಳಸುವುದಿಲ್ಲವೆಂದು ಯುವಜನತೆ, ವಿದ್ಯಾರ್ಥಿಗಳು ಸೇರಿದಂತೆ ಎಲ್ಲರೂ ನಿರ್ಧಾರ ಕೈಗೊಳ್ಳಬೇಕೆಂದರು.


ಕಾರ್ಯಕ್ರಮದಲ್ಲಿ ಆನೆಬಿಡಾರದ ಎರಡು ಆನೆ ಮರಿ ಮತ್ತು ಒಂದು ಆನೆ ಸೇರಿ ಮೂರೆ ಆನೆಗಳಿಗೆ ಕ್ರಮವಾಗಿ ಕೃಷ್ಣ, ಅಭಿಮನ್ಯು ಮತ್ತು ಧೃವ ಎಂಬುದಾಗಿ ಶಾಸಕರ ಸಮ್ಮುಖದಲ್ಲಿ ನಾಮಕರಣ ಮಾಡಲಾಯಿತು.
ವನ್ಯಜೀವಿ ಉಪವಲಯ ಅಧಿಕಾರಿ ಪ್ರಸನ್ನಕೃಷ್ಣ ಪಟಗಾರ್ ವಿಶ್ವ ಪರಿಸರ ದಿನಾಚರಣೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.


ಬೆಳಿಗ್ಗೆ 8.30 ರಿಂದ 9 ಗಂಟೆವರೆಗೆ ಸಕ್ರೆಬೈಲಿನ ಆನೆಬಿಡಾರದಲ್ಲಿ ಸ್ವಚ್ಚತಾ ಅಭಿಯಾನ ಕೈಗೊಳ್ಳಲಾಗಿತ್ತು. ಆನಂತರ ಅರಣ್ಯ ಇಲಾಖೆ, ಕಾನೂನೂ ಸೇವಾ ಪ್ರಾಧಿಕಾರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರವಾಸೋದ್ಯ ಇಲಾಖೆಯ ನಿರ್ದೇಶಕರಾದ ಮೊಹಮ್ಮದ್ ಫಾರೂಕ್ ಇಕೋ ಟೂರಿಸಂ ಮತ್ತು ಬಯೋ ಡೈವರ್ಸಿಟಿ ಸಂರಕ್ಷಣೆ ಕುರಿತು ಮಾತನಾಡಿದರು.


ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಸಿಸಿಎಫ್ ಡಾ.ಹನುಮಂತಪ್ಪ, ಅರಣ್ಯ ಅಧಿಕಾರಿ ಶಿವಶಂಕರ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಅವಿನ್ ಆರ್, ಎಸ್.ಪಿ.ಶೇಷಾದ್ರಿ, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಪರಿಸರ ಪ್ರೇಮಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

21 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago