Categories: Shivamogga

ಫೆ.27 ರಂದು ಪ್ರಧಾನಮಂತ್ರಿಯವರಿಂದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮ | ಶೂನ್ಯ ಸಂಚಾರ ಮತ್ತು ಪರ್ಯಾಯ ಮಾರ್ಗ ಅಧಿಸೂಚನೆ


ಶಿವಮೊಗ್ಗ : ಫೆ.27 ರಂದು ಸೋಗಾನೆಯ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸದರು, ಶಾಸಕರು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಹಾಗೂ ಈ ಕಾರ್ಯಕ್ರಮಕ್ಕೆ ಸುತ್ತಮುತ್ತಲ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ವಾಹನಗಳು ಬರುವ ಹಿನ್ನೆಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಕೆಳಕಂಡಂತೆ ಶೂನ್ಯ ಸಂಚಾರ ರಸ್ತೆ ಮಾರ್ಗ ಮತ್ತು ವಾಹನ ಸಂಚಾರಕ್ಕೆ ಬದಲಿ ಮಾರ್ಗಗಳ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹೊರಡಿಸಿದ್ದಾರೆ.


ಶೂನ್ಯ ಸಂಚಾರ ರಸ್ತೆ ಮಾರ್ಗ:
ದಿನಾಂಕ: 26-06-2023 ಮತ್ತು 27-02-2023 ರಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಎಂ.ಆರ್.ಎಸ್ ಸರ್ಕಲ್‍ನಿಂದ ಎನ್.ಆರ್.ಪುರ ರಸ್ತೆ ಲಕ್ಕಿನಕೊಪ್ಪ ಸರ್ಕಲ್‍ವರೆಗೆ, ಮತ್ತೂರು-ಮಂಡೇನಕೊಪ್ಪ-ಸೋಗಾನೆ ವಿಮಾನ ನಿಲ್ದಾಣದವರೆಗೆ ಶೂನ್ಯ ಸಂಚಾರ ರಸ್ತೆ ಎಂದು ಅಧಿಸೂಚಿಸಲಾಗಿದೆ.


ಸಾರ್ವಜನಿಕ ವಾಹನಗಳ ಮಾರ್ಗ ಬದಲಾವಣೆ (ದಿ: 27-02-2023 ರಂದು ಮಾತ್ರ):

  • ಎನ್.ಆರ್.ಪುರದಿಂದ-ಭದ್ರಾವತಿ ಕಡೆಗೆ ಹೋಗುವ ವಾಹನಗಳು ಉಂಬ್ಳೆಬೈಲ್-ಹುಣಸೆಕಟ್ಟೆ-ಜಂಕ್ಷನ್ ಮೂಲಕ ಭದ್ರಾವತಿಗೆ ಹೋಗುವುದು.
  • ಶಿಕಾರಿಪುರ-ಹೊನ್ನಾಳಿ-ದಾವಣಗೆರೆ ಕಡೆಯಿಂದ ಎನ್.ಆರ್.ಪುರಕ್ಕೆ ಹೋಗುವ ವಾಹನಗಳು ಶಿವಮೊಗ್ಗ ನಗರಕ್ಕೆ ಬಂದು ತೀರ್ಥಹಳ್ಳಿ ರಸ್ತೆ(ಎನ್.ಟಿ.ರಸ್ತೆ) ಮೂಲಕ ಎನ್.ಆರ್.ಪುರಕ್ಕೆ ಹೋಗುವುದು.
  • ತೀರ್ಥಹಳ್ಳಿ ರಸ್ತೆ ಕಡೆಯಿಂದ ಸಾಗರ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ನ್ಯೂ ಮಂಡ್ಲಿ ಸರ್ಕಲ್-ಗೋಪಾಳ ಸರ್ಕಲ್-ಆಲ್ಕೊಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಗೆ ಬಂದು ಸೇರುವುದು.
  • ಸಾಗರ ರಸ್ತೆ ಕಡೆಯಿಂದ ತೀರ್ಥಹಳ್ಳಿ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ಆಲ್ಕೋಳ ಸರ್ಕಲ್-ಗೋಪಾಳ ಸರ್ಕಲ್-ನ್ಯೂ ಮಂಡ್ಲಿ ಸರ್ಕಲ್ ಮಾರ್ಗವಾಗಿ ತೀರ್ಥಹಳ್ಳಿ ರಸ್ತೆಗೆ ಸೇರುವುದು.


ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳ ಮಾರ್ಗ (ದಿ: 27-02-2023 ರಂದು ಮಾತ್ರ):

  • ಕಾರ್ಯಕ್ರಮಕ್ಕೆ ಆಗಮಿಸುವ ವಿವಿಐಪಿ ಪಾಸ್ ಹೊಂದಿರುವ ಗಣ್ಯರು ಶಿವಮೊಗ್ಗ ನಗರದಿಂದ ಬೈಪಾಸ್-ಊರಗಡೂರು ಸರ್ಕಲ್-ಸೂಳೆಬೈಲು-ಮತ್ತೂರು ರಸ್ತೆ ಎಡಭಾಗಕ್ಕೆ ತಿರುವು ಪಡೆದುಕೊಂಡು-ಮಂಡೇನಕೊಪ್ಪ ಮುಖಾಂತರ ಸೋಗಾನೆ ವಿಮಾನ ನಿಲ್ದಾಣಕ್ಕೆ ತಲುಪುವುದು.
  • ತೀರ್ಥಹಳ್ಳಿ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಭಾಗದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ತೀರ್ಥಹಳ್ಳಿ ರಸ್ತೆ-ಮುಡುಬ ಬಲಕ್ಕೆ ತಿರುಗಿ ಶಂಕರಪುರ-ಉಂಬ್ಳೇಬೈಲು ಮುಖಾಂತರ ಲಕ್ಕಿನಕೊಪ್ಪ ಸರ್ಕಲ್‍ಗೆ ಬಂದು ಸೇರುವುದರಿಂದ ನಂತರ ಲಕ್ಕಿನಕೊಪ್ಪ ಮತ್ತು ಸೋಗಾನೆ ಏರ್‌ಪೋರ್ಟ್ ನಡುವಿನ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.
  • ಸಾಗರ, ಶಿಕಾರಿಪುರ, ಸೊರಬ, ಹೊಸನಗರದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಶಿವಮೊಗ್ಗ ನಗರದಿಂದ ಅಶೋಕ ಸರ್ಕಲ್-ಬಿ.ಹೆಚ್.ರಸ್ತೆ-ಎಎ ಸರ್ಕಲ್-ಶಂಕರಮಠ ಸರ್ಕಲ್-ಹೊಳೆಹೊನ್ನೂರು ಸರ್ಕಲ್-ಎಂ.ಆರ್.ಎಸ್ ಸರ್ಕಲ್‍ಗೆ ಬಂದು ಬಲಕ್ಕೆ ತಿರುಗಿ ಸಂತೇಕಡೂರು ಸೋಗಾನೆ ಏರ್‌ಪೋರ್ಟ್ ನಡುವೆ ಗುರುತಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.
  • ಶಿಕಾರಿಪುರ, ಹೊನ್ನಾಳಿ, ದಾವಣಗೆರೆ ಕಡೆಯಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಎಂ.ಆರ್.ಎಸ್ ಸರ್ಕಲ್‍ಗೆ ಬಂದು ಬಲಕ್ಕೆ ತಿರುಗಿ ಸಂತೇಕಡೂರು ಸೋಗಾನೆ ಏರ್‌ಪೋರ್ಟ್ ನಡುವೆ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.
  • ಶಿವಮೊಗ್ಗ ನಗರದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಎಂಆರ್‍ಎಸ್ ಸರ್ಕಲ್ ಗೆ ಬಂದು ಬಲಕ್ಕೆ ತಿರುಗಿ ಸಂತೇಕಡೂರು ಸೋಗಾನೆ ಏರ್‌ಪೋರ್ಟ್ ನಡುವೆ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.
  • ತರೀಕೆರೆ, ಭದ್ರಾವತಿ, ಕಡೂರು, ಚಿಕ್ಕಮಗಳೂರು ಭಾಗಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಭದ್ರಾವತಿ ನಗರದ ಕೃಷ್ಣಪ್ಪ ನಗರದ ಕೃಷ್ಣಪ್ಪ ಸರ್ಕಲ್‍ನಿಂದ ಎಡಕ್ಕೆ ತಿರುಗಿ-ಹಿರಿಯೂರು ಸರ್ಕಲ್-ತಾರೀಕಟ್ಟೆ ಸರ್ಕಲ್-ಹೆಚ್.ಕೆ.ಜಂಕ್ಷನ್-ಲಕ್ಕಿನಕೊಪ್ಪ ಸರ್ಕಲ್‍ಗೆ ಬಂದು ಸೇರುವುದು. ನಂತರ ಲಕ್ಕಿನಕೊಪ್ಪ ಮತ್ತು ಸೋಗಾನೆ ಏರ್‌ಪೋರ್ಟ್ ನಡುವಿನ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು ಎಂದು ತಿಳಿಸಿದ್ದಾರೆ.
Malnad Times

Recent Posts

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

8 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

9 hours ago

Arecanut Today Price | ಮೇ 03ರ ಅಡಿಕೆ ರೇಟ್

ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

9 hours ago

ಶ್ರದ್ದಾಭಕ್ತಿಯ ನಾಮಸ್ಮರಣೆಗೆ ದೇವರ ಒಲುಮೆಯಿದೆ ; ಶ್ರೀಗಳು

ರಿಪ್ಪನ್‌ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…

10 hours ago

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

13 hours ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳ್ಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

15 hours ago