Categories: Shivamogga

ಬರ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಶಿವಮೊಗ್ಗ: ಬರ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಸಾಮೂಹಿಕ ನಾಯಕತ್ವ) ಶುಕ್ರವಾರ ಕೆ.ಟಿ.ಗಂಗಾಧರ್ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ (Shivamogga DC Office) ಆವರಣದಲ್ಲಿ ಪ್ರತಿಭಟನೆ (Protest) ನಡೆಸಿತು.


ರಾಜ್ಯದಲ್ಲಿ ಬರಗಾಲವಿದೆ. ಬರಗಾಲ ಘೋಷಣೆಯೂ ಆಗಿದೆ. ಆದರೆ ರಾಜ್ಯ ಸರ್ಕಾರ ಮಾತ್ರ ಬರ ಪರಿಹಾರ ನೀಡಲು ವಿಳಂಬ ಮಾಡುತ್ತಿದೆ. ಇಷ್ಟರಲ್ಲಾಗಲೇ ಬರ ಪರಿಹಾರ ಕ್ರಮಗಳನ್ನು ಜರುಗಿಸಬೇಕಿತ್ತು. ಕುಡಿಯುವ ನೀರಿಗೂ ತೊಂದರೆಯಾಗಿದೆ. ಜಾನುವಾರುಗಳಿಗೆ ಮೇವಿನ ಕೊರತೆಯಿದೆ. ಇಂತಹ ಕಷ್ಟದ ಸಂದರ್ಭದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಬ್ಬರ ಮೇಲೆ ಒಬ್ಬರು ಹೇಳಿ ಜವಾಬ್ದಾರಿ ಮರೆತಿದ್ದಾರೆ ಎಂದು ಪ್ರತಿಭಟನಕಾರರು ತಿಳಿಸಿದ್ದಾರೆ.


ಕೇಂದ್ರ ಸರ್ಕಾರದಂತೆ ರಾಜ್ಯ ಸರ್ಕಾರ ಕೂಡ ರೈತವಿರೋಧಿ ಹೊಸ ಕೃಷಿ ಕಾಯಿದೆಗಳನ್ನು ಹಿಂಪಡೆಯಬೇಕು. ವಿದ್ಯುಚ್ಛಕ್ತಿ ಖಾಗೀಕರಣ ಬಿಡಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ಹೊತ್ತಿನಲ್ಲಿ 7 ಗಂಟೆ ವಿದ್ಯುತ್ ನೀಡಬೇಕು. ಡಾ. ಸ್ವಾಮಿನಾಥನ್ ವರದಿ ಜಾರಿಯಾಗಬೇಕು. ಕನಿಷ್ಠ ಬೆಂಬಲ ಬೆಲೆ ಕಾಯಿದೆಯನ್ನು ಜಾರಿಗೆ ತರಬೇಕು. ಭದ್ರಾ ಮೇಲ್ದಂಡೆ ಯೋಜನೆ ತ್ವರಿತವಾಗಿ ಮುಗಿಸಬೇಕು. ರೈತರ ಎಲ್ಲಾ ರೀತಿಯ ಸಾಗುವಳಿ ಜಮೀನುಗಳಿಗೆ ಹಕ್ಕುಪತ್ರ ನೀಡಬೇಕು ರೈತರ ಸಾಲ ಮನ್ನಾ ಮಾಡಬೇಕು. ರೈತರ ರಕ್ಷಣೆಗೆ ಸರ್ಕಾರಗಳು ಧಾವಿಸಬೇಕು. ಸಾಲ ವಸೂಲಾತಿ ನಿಲ್ಲಬೇಕು. ಅಂತರ್ಜಲ ಹೆಚ್ಚಿಸಲು ಕ್ರಮ ತೆಗೆದುಕೊಳ್ಳಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ರೈತಮುಖಂಡರು ಆಗ್ರಹಿಸಿದರು.


ಈ ಸಂದರ್ಭದಲ್ಲಿ ರೈತಸಂಘದ ಪದಾಧಿಕಾರಿಗಳಾದ ಯಶವಂತ ರಾವ್ ಘೋರ್ಪಡೆ, ಈರಣ್ಯ ಪ್ಯಾಟಿ, ಹಾಲೇಶಪ್ಪ ಗೌಡರು, ಮಂಜುನಾಥ್ ಹೆಚ್.ಎಸ್., ಷಡಾಕ್ಷರಪ್ಪ, ಕೆ. ಆರ್. ಮಂಜುನಾಥ್, ಜಗದೀಶ್ ಮತ್ತಿತರರಿದ್ದರು.

Malnad Times

Recent Posts

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

2 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

2 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

7 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

9 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

22 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

24 hours ago