ಬಸ್‌ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ; ಓರ್ವನಿಗೆ ಗಂಭೀರ ಗಾಯ

0 101

ಶಿವಮೊಗ್ಗ : ಗಾಜನೂರು ಸಮೀಪ ಕಾರು ಮತ್ತು ಬಸ್‌ ಮುಖಾಮುಖಿ ಡಿಕ್ಕಿಯಾಗಿವೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ಕಾರು, ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಖಾಸಗಿ ಬಸ್‌ ಮಧ್ಯೆ ಅಪಘಾತವಾಗಿದೆ.

ಗಾಜನೂರಿನ ಮೊರಾರ್ಜಿ ಶಾಲೆ ಬಳಿ ಓವರ್‌ ಟೇಕ್‌ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಎದುರಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ.

ಕಾರಿನಲ್ಲಿದ್ದ ನಾಲ್ವರ ಪೈಕಿ ಒಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಮೂವರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ಎಲ್ಲರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Leave A Reply

Your email address will not be published.

error: Content is protected !!