Categories: ShikaripuraShivamogga

ಬಿಎಸ್‌ವೈ ಕುಟುಂಬದಿಂದ ಶ್ರೀ ಹುಚ್ಚರಾಯಸ್ವಾಮಿಗೆ ವಿಶೇಷ ಪೂಜೆ

ಶಿಕಾರಿಪುರ : ಶಿಕಾರಿಪುರದ ಇತಿಹಾಸ ಪ್ರಸಿದ್ದ ಆರಾಧ್ಯ ದೈವ ಶ್ರೀ ಹುಚ್ಚರಾಯಸ್ವಾಮಿಯ ಮಹಾರಥೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇವರುಗಳು ಕುಟುಂಬ ಸಮೇತ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.

ನಾಡಿನಲ್ಲಿ ಹಿಂದೆಂದೂ ಕಂಡರಿಯದ ಭೀಕರ ಬರದಿಂದಾಗಿ ರೈತರು ಜನ ಜಾನುವಾರುಗಳು ತತ್ತರಿಸಿ ಹೋಗಿದ್ದಾರೆ. ಆದ್ದರಿಂದ ಸ್ವಾಮಿಯು ಉತ್ತಮ ಮಳೆಯನ್ನು ಕರುಣಿಸಿ ನಾಡಿನ ಹಾಗೂ ಲೋಕದ ಸಕಲ ಜೀವರಾಶಿಗಳನ್ನು ಸಂರಕ್ಷಿಸಬೇಕೆಂದು ಪ್ರಾರ್ಥಿಸಿದರು.
ಕಳೆದ 10 ವರ್ಷಗಳಿಂದ ರಾಷ್ಟ್ರವನ್ನು ಸದೃಢವಾಗಿ ಮುನ್ನಡೆಸುತ್ತಿರುವ ಹಾಗೂ ವಿಶ್ವದ ಮುಂದುವರೆದ ರಾಷ್ಟ್ರಗಳಲ್ಲಿ ಭಾರತವನ್ನು ಮುಂಚೂಣಿಗೆ ತೆಗೆದುಕೊಂಡು ಹೋಗಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಿಂದೆಂದಿಗಿಂತಲೂ ಅಭೂತ ಪೂರ್ವ ಗೆಲುವನ್ನು ತಂದು ಕೊಡಬೇಕೆಂದು ಯಡಿಯೂರಪ್ಪ ಹಾಗೂ ಅವರ ಕುಟುಂಬ ಶ್ರೀ ಹುಚ್ಚರಾಯಸ್ವಾಮಿಯಲ್ಲಿ ಬೇಡಿಕೊಂಡಿತು.


ಈ ಸಂದರ್ಭದಲ್ಲಿ ಎಂಎಡಿಬಿ ಮಾಜಿ ಅಧ್ಯಕ್ಷ ಗುರುಮೂರ್ತಿ, ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಶಾಸಕ ರಘುಪತಿಭಟ್, ಬಳಿಗಾರ್, ವೀರಣ್ಣಗೌಡ, ಇತರರು ಉಪಸ್ಥಿತರಿದ್ದರು.

ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಸದ ರಾಘವೇಂದ್ರರವರು ಹಿಂದಿನ ಎಲ್ಲಾ ದಾಖಲೆಗಳನ್ನು ಮೀರಿ ಜಯ ಸಾಧಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಪ್ರಚಾರ ಮಾಡುತ್ತಿರುವುದರಿಂದ ನಮಗೆ ಆನೆ ಬಲ ಬಂದಂತಾಗಿದೆ. 400ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ.
– ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ

ಜನತೆ ಅಭಿವೃದ್ದಿ ಕಾರ್ಯಗಳನ್ನು ನೋಡಿ ಮತವನ್ನು ನೀಡುತ್ತಾರೆ. ಹಿಂದಿನ ಎಲ್ಲಾ ಚುನಾವಣೆಗಳಲ್ಲಿ ಈಶ್ವರಪ್ಪನವರ ಆಶೀರ್ವಾದ ನನಗೆ ಸಿಕ್ಕಿತ್ತು. ಆದರೆ ಈ ಬಾರಿ ಅವರ ಆಶೀರ್ವಾದ ಇಲ್ಲವಾಗಿದೆ. ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ನಾನು ಗೆಲುವು ಸಾಧಿಸಿ ಮೋದಿ ಪರವಾಗಿ ಕೈ ಎತ್ತಬೇಕಾಗಿದೆ. ಆದರೆ ಈಶ್ವರಪ್ಪನವರ ಹೇಳಿಕೆ ನಗೆಪಾಟಲಿಗೆ ಈಡಾಗಿದೆ. ಪ್ರಬುದ್ದ ಮತದಾರರು ಈ ಬಗ್ಗೆ ಸೂಕ್ತ ಉತ್ತರ ನೀಡುತ್ತಾರೆ.
– ಬಿ.ವೈ.ರಾಘವೇಂದ್ರ, ಬಿಜೆಪಿ ಅಭ್ಯರ್ಥಿ

ಜನತೆ ಅಭಿವೃದ್ದಿ ಕಾರ್ಯಗಳನ್ನು ನೋಡಿ ಮತವನ್ನು ನೀಡುತ್ತಾರೆ. ಹಿಂದಿನ ಎಲ್ಲಾ ಚುನಾವಣೆಗಳಲ್ಲಿ ಈಶ್ವರಪ್ಪನವರ ಆಶೀರ್ವಾದ ನನಗೆ ಸಿಕ್ಕಿತ್ತು. ಆದರೆ ಈ ಬಾರಿ ಅವರ ಆಶೀರ್ವಾದ ಇಲ್ಲವಾಗಿದೆ. ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ನಾನು ಗೆಲುವು ಸಾಧಿಸಿ ಮೋದಿ ಪರವಾಗಿ ಕೈ ಎತ್ತಬೇಕಾಗಿದೆ. ಆದರೆ ಈಶ್ವರಪ್ಪನವರ ಹೇಳಿಕೆ ನಗೆಪಾಟಲಿಗೆ ಈಡಾಗಿದೆ. ಪ್ರಬುದ್ದ ಮತದಾರರು ಈ ಬಗ್ಗೆ ಸೂಕ್ತ ಉತ್ತರ ನೀಡುತ್ತಾರೆ.
– ಬಿ.ವೈ.ರಾಘವೇಂದ್ರ, ಬಿಜೆಪಿ ಅಭ್ಯರ್ಥಿ

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago